ಭಾನುವಾರ, 28 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವ್ಯವಸಾಯಕ್ಕೆ ಪಡೆದ ಸಾಲದಿಂದ ಅದ್ಧೂರಿ ಮದುವೆ ಸಲ್ಲ: ಸಿದ್ದರಾಮಯ್ಯ

ಮಹದೇಶ್ವರ ಬೆಟ್ಟ: 37 ಜೋಡಿಗಳು ಹಸಮಣೆಗೆ
Published 27 ಸೆಪ್ಟೆಂಬರ್ 2023, 7:00 IST
Last Updated 27 ಸೆಪ್ಟೆಂಬರ್ 2023, 10:04 IST
ಅಕ್ಷರ ಗಾತ್ರ

ಮಹದೇಶ್ವರ ಬೆಟ್ಟ (ಚಾಮರಾಜನಗರ ಜಿಲ್ಲೆ): ಪ್ರಸಿದ್ಧ ಯಾತ್ರಾ ಸ್ಥಳ ಮಹದೇಶ್ವರ ಬೆಟ್ಟದಲ್ಲಿ ಬುಧವಾರ ಬೆಳಿಗ್ಗೆ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 37 ಜೋಡಿಗಳು ಹಸೆಮಣೆ ಏರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧುವರರಿಗೆ ತಾಳಿ ವಿತರಿಸಿ ಆಶೀರ್ವದಿಸಿದರು. ಸುತ್ತೂರು ಮಠದ ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ, ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ಇದ್ದರು.

ನಂತರ ನಡೆದ ಸಮಾರಂಭದಲ್ಲಿ ಮಾತನಾಡಿದ ಅವರು, ‘ಬಡವರು ಮತ್ತು ಮಧ್ಯಮ ವರ್ಗದವರ ಪಾಲಿಗೆ ಅದ್ದೂರಿ ಮದುವೆಗಳು ಬಹಳ ದೊಡ್ಡ ಹೊರೆಯಾಗುತ್ತವೆ. ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು’ ಎಂದರು.

‘ಸಾಲ ಮಾಡಿ ಅದ್ಧೂರಿ ಮದುವೆ ಮಾಡುವುದು ಅನಾರೋಗ್ಯಕಾರಿ. ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ವ್ಯವಸಾಯಕ್ಕಾಗಿ ಸಾಲ ಮಾಡಿ ಮದುವೆ ಮಾಡುವುದನ್ನು ನಿಲ್ಲಿಸಬೇಕು’ ಎಂದು ಕರೆ ನೀಡಿದರು.

ಮಹದೇಶ್ವರನ ಬೆಟ್ಟ ಅಧ್ಯಾತ್ಮಿಕ ಮಹತ್ವ ಇರುವ ಪುಣ್ಯ ಸ್ಥಳ. ಶೂದ್ರರು, ಶ್ರಮಿಕರು, ಬಡವರು, ಎಲ್ಲ ಜಾತಿಯವರ ಅಧ್ಯಾತ್ಮಿಕ ಕೇಂದ್ರವಾಗಿದೆ. ಈ ಕಾರಣಕ್ಕೆ ನನಗೆ ಈ ಕ್ಷೇತ್ರದ ಬಗ್ಗೆ ಅತ್ಯಂತ ಶ್ರದ್ದೆ ಮತ್ತು ಗೌರವ. ಮೊದಲ ಬಾರಿ ಮುಖ್ಯಮಂತ್ರಿಯಾದಾಗ ಮಲೆ ಮಹದೇಶ್ವರ ಅಭಿವೃದ್ಧಿ ಪ್ರಾಧಿಕಾರ ರಚಿಸಿದೆ. ಈಗ ಪ್ರಾಧಿಕಾರದ ಆದಾಯವೂ ಹೆಚ್ಚಾಗಿದೆ’ ಎಂದರು.

‘ಮುಂದಿನ ಐದು ವರ್ಷದಲ್ಲಿ ಮಲೈ ಮಹದೇಶ್ವರ ಕ್ಷೇತ್ರದ ಚಿತ್ರಣವನ್ನೇ ಬದಲಾಯಿಸುತ್ತೇವೆ’ ಎಂದರು.

ಇನ್ನು ಮುಂದೆ ತಪೋಭವನ: ‘ಮಹದೇಶ್ವರ ಬೆಟ್ಟದಲ್ಲಿರುವ ರಾಷ್ಟ್ರಪತಿ ಭವನದ ಹೆಸರು ಬದಲಾಗಿದೆ. ಇನ್ನು ಮುಂದೆ ಇದು ತಪೋಭವನ. ಮಾದೇಶ್ವರ ತಪಸ್ಸು ಮಾಡಿದ ಶಕ್ತಿ ಕೇಂದ್ರ ಇದು. ಆದ್ದರಿಂದ ಇದನ್ನು ನಾವು ತಪೋಭವನ ಎಂದು ಕರೆಯಬೇಕು. ಶಿವರಾತ್ರಿ ದೇಶೀಕೇಂದ್ರ ಮಹಾ ಸ್ವಾಮಿಗಳ ಸಲಹೆಯಂತೆ ತಪೋಭವನ ಎಂದು ಬದಲಾಯಿಸಿದ್ದೇವೆ’ ಎಂದು ಸಿದ್ದರಾಮಯ್ಯ ಹೇಳಿದರು.

ಅಧ್ಯಕ್ಷತೆಯನ್ನು ಹನೂರು ಶಾಸಕ ಎಂ.ಆರ್.ಮಂಜುನಾಥ್ ವಹಿಸಿದ್ದರು.

ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಸಿ.ಪುಟ್ಟರಂಗಶೆಟ್ಟಿ, ಎ.ಆರ್.ಕೃಷ್ಣಮೂರ್ತಿ, ಎಚ್.ಎಂ.ಗಣೇಶ್ ಪ್ರಸಾದ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಅರ್ಚನಾ ಅಧಿಕಾರಿಗಳು ಮುಖಂಡರು ಇದ್ದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧುವರರಿಗೆ ತಾಳಿ ವಿತರಿಸಿ ಆಶೀರ್ವದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧುವರರಿಗೆ ತಾಳಿ ವಿತರಿಸಿ ಆಶೀರ್ವದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧುವರರಿಗೆ ತಾಳಿ ವಿತರಿಸಿ ಆಶೀರ್ವದಿಸಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವ ವಧುವರರಿಗೆ ತಾಳಿ ವಿತರಿಸಿ ಆಶೀರ್ವದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT