ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪೂರ್ಣಗೊಳಿಸಿ

ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಸೂಚನೆ
Last Updated 16 ಮೇ 2020, 17:43 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಕೈಗೆತ್ತಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ಶೀಘ್ರವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ರಾಷ್ಟ್ರೀಯ ಹೆದ್ದಾರಿ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ನಡೆದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.

‘ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಿಕೊಡುವ ಉದ್ದೇಶದಿಂದ ಜಿಲ್ಲೆಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯನ್ನು ವಿಳಂಬ ಮಾಡದೆ ಪೂರ್ಣಗೊಳಿಸಬೇಕು. ಕಾಮಗಾರಿ ಮುಂದುವರಿಕೆಗೆ ಇರುವ ಎಲ್ಲಾ ಪ್ರಕ್ರಿಯೆಯನ್ನು ತಕ್ಷಣವೇ ಚುರುಕುಗೊಳಿಸಬೇಕು’ ಎಂದರು.

‘ಕಾಮಗಾರಿ ನಿರ್ವಹಣೆಗೆ ಜಿಲ್ಲಾಡಳಿತ ಎಲ್ಲ ರೀತಿಯ ಸಹಕಾರ, ಬೆಂಬಲ ನೀಡಲಿದೆ. ಕಾಮಗಾರಿ ತ್ವರಿತಗತಿಯಲ್ಲಿ ಆಗುವಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಸಾರ್ವಜನಿಕರು, ವಾಹನಗಳ ಸಂಚಾರಕ್ಕೆ ಅಡಚಣೆಯಾಗದಂತೆ ಕಾಮಗಾರಿಯನ್ನು ಕಾಲಮಿತಿಯೊಳಗೆ ಪೂರೈಸಬೇಕು’ ಎಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದರು.

‘ಅಪೂರ್ಣವಾಗಿರುವ ಬೈಪಾಸ್ ರಸ್ತೆಗಳು, ಅಂಡರ್‌ ಪಾಸ್ ಮಾರ್ಗಗಳು ಸೇರಿದಂತೆ ‌ಎಲ್ಲ ಕಾಮಗಾರಿಗಳು ನಿಗದಿತ ದಿನದೊಳಗೆ ಪೂರ್ಣಗೊಳಿಸಬೇಕು’ ಎಂದು ಹೇಳಿದರು.

ಸಂತೇಮರಹಳ್ಳಿಯು ಎಲ್ಲ ಭಾಗಗಳನ್ನು ಸಂಪರ್ಕಿಸುವ ಪ್ರಮುಖ ಸ್ಥಳವಾಗಿದೆ. ಇಲ್ಲಿಯ ಪ್ರಮುಖ ವೃತ್ತ ಹಾಗೂ ರಸ್ತೆಯನ್ನು ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಅಗತ್ಯ ಪ್ರಸ್ತಾವ ಸಿದ್ಧಪಡಿಸುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ರಾಷ್ಟ್ರೀಯ ಹೆದ್ದಾರಿ ಯೋಜನೆಯ ಯೋಜನಾ ನಿರ್ದೇಶಕ ಶ್ರೀಧರ್, ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಎಂಜಿನಿಯರ್ ಸುರೇಂದ್ರ, ತಹಶೀಲ್ದಾರರಾದ ಜೆ. ಮಹೇಶ್, ಕೆ. ಕುನಾಲ್, ನಂಜುಂಡಯ್ಯ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT