ಸಂತೇಮರಹಳ್ಳಿ: ಸರ್ಕಾರಿ ಹಾಗೂ ಖಾಸಗಿ ಉದ್ಯೋಗ ಪಡೆದುಕೊಳ್ಳಲು ಪತ್ರಿಯೊಬ್ಬರಿಗೂ ಕಂಪ್ಯೂಟರ್ ಜ್ಞಾನ ಅತ್ಯವಶ್ಯಕವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಮೋನಾರೋತ್ ತಿಳಿಸಿದರು.

ಸಮೀಪದ ಕುದೇರು ಗ್ರಾಮ ಪಂಚಾಯಿತಿ ಹಾಗೂ ಶಿಕ್ಷಣ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಮಾಡೆಲ್ ಡಿಜಿಟಲ್ ಇನ್ಕ್ಲೂಷನ್ ಸೆಂಟರ್ನಲ್ಲಿ ಶನಿವಾರ ಉಚಿತ ಕಂಪ್ಯೂಟರ್ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲಾಗುತ್ತಿದೆ. ಗ್ರಾಮದಲ್ಲಿ ಪ್ರಾಥಮಿಕ ಶಾಲೆಯಿಂದ ಪದವಿ ವರೆಗೂ ಒಂದೇ ಕಡೆ ಶಿಕ್ಷಣ ದೊರಕುವಂತಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಹಾಗೂ ಶಿಕ್ಷಣ ಫೌಂಡೇಷನ್ ಸಂಯುಕ್ತ ಆಶ್ರಯದಲ್ಲಿ ಉಚಿತವಾಗಿ ಕಂಪ್ಯೂಟರ್ ತರಬೇತಿ ಕೇಂದ್ರವನ್ನು ತೆರೆಯಲಾಗಿದೆ. ಎಲ್ಲ ವಿದ್ಯಾರ್ಥಿಗಳು ಇದರ ಪ್ರಯೋಜನವನ್ನು ಪಡೆದುಕೊಂಡು ಕಂಪ್ಯೂಟರ್ ಜ್ಞಾನ ಪಡೆಯಬೇಕು ಎಂದು ತಿಳಿಸಿದರು.

ತಾಲ್ಲೂಕು ಪಂಚಾಯಿತಿ ಇಒ ಗಿರಿಧರ್, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಶೀಲಮ್ಮ, ಉಪಾಧ್ಯಕ್ಷ ಸುನೀಲ್ಕುಮಾರ್, ಸದಸ್ಯರಾದ ಜಯಶಂಕರ್, ಮಹದೇವಸ್ವಾಮಿ, ಅಭಿವೃದ್ಧಿ ಅಧಿಕಾರಿ ಗೋವಿಂದಯ್ಯ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಥಿಯೋಡರ್ ಲೂಥರ್, ಮುಖ್ಯ ಶಿಕ್ಷಕ ತಮ್ಮಯ್ಯ, ಮುಖಂಡರಾದ ನಾಗರಾಜು, ರವೀಂದ್ರ, ಸುಂದರ್ಶೆಟ್ಟಿ, ಪ್ರಭುಲಿಂಗಸ್ವಾಮಿ, ವೀರಭದ್ರಪ್ಪ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.