ಕೊಳ್ಳೇಗಾಲ: ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿರುವುದನ್ನು ಖಂಡಿಸಿ ಇಲ್ಲಿನ ಜಯ ಕರ್ನಾಟಕ ಸಂಘಟನೆ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಬಿ.ಆರ್.ಅಂಬೇಡ್ಕರ್ ಪ್ರತಿಮೆ ಮುಂಭಾಗ ಸಮಾವೇಶಗೊಂಡ ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಉಪವಿಭಾಗಾಧಿಕಾರಿ ಕಚೇರಿಗೆ ಆಗಮಿಸಿ ಉಪ ತಹಶೀಲ್ದಾರ್ ರವಿ ಅವರಿಗೆ ಮನವಿ ಪತ್ರವನ್ನು ಸಲ್ಲಿಸಿದರು.

ಜಯ ಕರ್ನಾಟಕ ತಾಲ್ಲೂಕು ಘಟಕದ ಅಧ್ಯಕ್ಷ ಪ್ರಭುಸ್ವಾಮಿ ಮಾತನಾಡಿ, ‘ಪದೇಪದೇ ಕನ್ನಡಿಗರಿಗೆ ಹಾಗೂ ಕೆಎಸ್ಆರ್ಟಿಸಿ ನಿರ್ವಾಹಕರಿಗೆ ಎಂಇಎಸ್ ಸಂಘಟನೆಯ ಪುಂಡರು ತೊಂದರೆ ನೀಡುತ್ತಿರುವುದು ಸರಿಯಲ್ಲ. ಅದಲ್ಲದೆ ನಮ್ಮ ರಾಜ್ಯದ ಆಸ್ತಿಪಾಸ್ತಿಗಳನ್ನು ಸಹ ಹಾನಿ ಮಾಡುತ್ತಿದ್ದಾರೆ. ಬೆಳಗಾವಿಯಲ್ಲಿ ಕೆಎಸ್ಆರ್ಟಿಸಿ ನಿರ್ವಾಹಕನಿಗೆ ಮಾರಣಾಂತಿಕ ಹಲ್ಲೆ ಮಾಡಿರುವುದು ಹಾಗೂ ನಿರ್ವಾಹಕ ಮೇಲೆ ಸುಳ್ಳು ಪೊಕ್ಸೊ ಕಾಯ್ದೆ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿರುತ್ತಾರೆ. ಆದ್ದರಿಂದ ಸಂಬಂಧಪಟ್ಟವರು ಸೂಕ್ಷ್ಮವಾಗಿ ಪರಿಗಣಿಸಿ ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಿ, ನಿರ್ವಾಹಕನ ಮೇಲೆ ಹಾಕಿರುವ ಕೇಸ್ ವಾಪಸ್ಸು ಪಡೆಯಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಬೇಕಾಗುತ್ತದೆ’ ಎಂದರು.

ಪ್ರತಿಭಟನೆಯಲ್ಲಿ ಸಂಘಟನೆ ಜಿಲ್ಲಾಧ್ಯಕ್ಷ ಜಕಾವುಲ್ಲ, ಚಾಮರಾಜನಗರ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಮಹದೇವಮ್ಮ, ಗುಂಡ್ಲುಪೇಟೆ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷೆ ಮಂಗಳಮ್ಮ, ಕೊಳ್ಳೇಗಾಲ ಮಹಿಳಾ ಘಟಕದ ತಾಲ್ಲೂಕು ಅಧ್ಯಕ್ಷ ಲೀಲಾವತಿ, ಯಳಂದೂರು ಘಟಕದ ಅಧ್ಯಕ್ಷ ಮಧುಸೂದನ್, ಹನೂರು ಘಟಕದ ಅಧ್ಯಕ್ಷ ಸಿದ್ದರಾಜು ನಾಯಕ, ಬಿಜೆಪಿ ಎಸ್ಸಿ ಘಟಕದ ಅಧ್ಯಕ್ಷ ಸಿದ್ದಪ್ಪಾಜಿ, ಮುಖಂಡ ಪುಟ್ಟರಾಜು, ಚಂದ್ರಶೇಖರ್ ಸೇರಿದಂತೆ ಅನೇಕ ಮಂದಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.