ಚಾಮರಾಜನಗರ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳಿಂದ ಅಭಿಪ್ರಾಯ ಸಂಗ್ರಹಣೆ ಮಾಡಲಾಯಿತು.

ಕಾಂಗ್ರೆಸ್ ಉಸ್ತುವಾರಿ ಶಿವಶಂಕರರೆಡ್ಡಿ ಮಾತನಾಡಿ, ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಆಯ್ಕೆ ಸಂಬಂಧ ಪ್ರಕ್ರಿಯೆಗಳು ನಡೆಯುತ್ತಿವೆ. ಸಂಘಟನೆಯ ದೃಷ್ಟಿಯಿಂದ ಪಕ್ಷಕ್ಕಾಗಿ ಉತ್ತಮವಾಗಿ ಕೆಲಸ ಮಾಡಿರುವವರನ್ನು ಅಧ್ಯಕ್ಷ ಸ್ಥಾನಕ್ಕೆ ಆಯ್ಕೆ ಮಾಡಬೇಕು, ಮುಂಚೂಣಿ ಘಟಕಗಳ ಅಧ್ಯಕ್ಷ ಸ್ಥಾನದ ಆಕಾಂಕ್ಷಿಗಳ ಅಭಿಪ್ರಾಯ ಸಂಗ್ರಹಿಸಿ ಕೆಪಿಸಿಸಿಗೆ ಕಳುಹಿಸಲಾಗುವುದು ಎಂದರು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ ಮಾತನಾಡಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷನಾಗಿ 9 ವರ್ಷ ಪಕ್ಷ ವಹಿಸಿದ ಕೆಲಸಗಳನ್ನು ಸಮರ್ಥವಾಗಿ ಮಾಡಲು ಪಕ್ಷದ ಮುಂಚೂಣಿ ಘಟಕಗಳ ಪದಾಧಿಕಾರಿಗಳು ಸಹಕಾರ ನೀಡಿದ್ದಾರೆ. ಎಲ್ಲ ಜಿಲ್ಲೆಗಳಲ್ಲೂ ಜಿಲ್ಲಾಧ್ಯಕ್ಷರ ನೇಮಕಾತಿ ನಡೆಯುತ್ತಿದ್ದು ಪಕ್ಷದ ಬೆಳವಣಿಗೆ ದೃಷ್ಟಿಯಿಂದ ಪದಾಧಿಕಾರಿಗಳನ್ನು ಆಯ್ಕೆ ಮಾಡುವ ಪಕ್ಷದ ನಿಲುವು ಸ್ವಾಗತಾರ್ಹ ಎಂದು ತಿಳಿಸಿದರು.

ಕಾಂಗ್ರೆಸ್ ಉಸ್ತುವಾರಿ ಸಂಪಂಗಿ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಬಸವರಾಜು, ಧರ್ಮಸೇನಾ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್, ಕೊಳ್ಳೇಗಾಲ ಶಾಸಕ ಎ.ಆರ್.ಕೃಷ್ಣಮೂರ್ತಿ, ಚುಡಾ ಅಧ್ಯಕ್ಷ ಮಹಮದ್ ಅಸ್ಗರ್, ಮಹಿಳಾ ಘಟಕದ ಅಧ್ಯಕ್ಷೆ ಲತಾ ರಾಜಶೇಖರ್ ಜತ್ತಿ, ಮಾಜಿ ಶಾಸಕ ಜಿ.ಎನ್.ನಂಜುಂಡಸ್ವಾಮಿ, ಆಕಾಂಕ್ಷಿಗಳಾದ ಎ.ಎಸ್.ಗುರುಸ್ವಾಮಿ, ಬಿ.ಕೆ.ರವಿಕುಮಾರ್, ಹಂಗಳ ನಂಜಪ್ಪ, ಕೆರೆಹಳ್ಳಿ ನವೀನ್, ಕೊಳ್ಳೇಗಾಲ ತೋಟೇಶ್, ಹನೂರು ಮುಕುಂದ ವರ್ಮ, ನಾಗೇಂದ್ರ, ಹೆಗ್ಗೋಠರಾ ಮಹದೇವ ಸ್ವಾಮಿ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಸೇರಿದಂತೆ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.