ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆಗಾಗಿ ಜಿಲ್ಲೆಯ ನಾಲ್ಕು ಕ್ಷೇತ್ರಗಳ ಪೈಕಿ ಮೂರಕ್ಕೆ ಅಭ್ಯರ್ಥಿಗಳ ಹೆಸರನ್ನು ಕಾಂಗ್ರೆಸ್ ಘೋಷಿಸಿದೆ.
ಎಐಸಿಸಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ, ಚಾಮರಾಜನಗರ ಕ್ಷೇತ್ರಕ್ಕೆ ಹಾಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ, ಹನೂರು ಕ್ಷೇತ್ರಕ್ಕೆ ಹಾಲಿ ಶಾಸಕ ಆರ್.ನರೇಂದ್ರ ಮತ್ತು ಗುಂಡ್ಲುಪೇಟೆ ಕ್ಷೇತ್ರಕ್ಕೆ ಯುವ ಮುಖಂಡ ಎಚ್.ಎಂ.ಗಣೇಶ್ ಪ್ರಸಾದ್ ಅವರ ಹೆಸರುಗಳನ್ನು ಘೋಷಿಸಲಾಗಿದೆ.
ಮೂವರು ಆಕಾಂಕ್ಷಿಗಳಿರುವ ಕೊಳ್ಳೇಗಾಲ ಕ್ಷೇತ್ರದ ಅಭ್ಯರ್ಥಿ ಹೆಸರು ಇನ್ನೂ ಅಂತಿಮಗೊಂಡಿಲ್ಲ.
ಕೆಪಿಸಿಸಿಯು ಆಕಾಂಕ್ಷಿಗಳಿಂದ ಟಿಕೆಟ್ ಗಾಗಿ ಅರ್ಜಿ ಆಹ್ವಾನಿಸಿದಾಗ ಚಾಮರಾಜನಗರದಿಂದ ಪುಟ್ಟರಂಗಶೆಟ್ಟಿ ಒಬ್ಬರೇ ಅರ್ಜಿ ಹಾಕಿದ್ದರು.
ಗುಂಡ್ಲುಪೇಟೆಯಿಂದ ದಿವಂಗತ ಎಚ್.ಎಸ್.ಮಹದೇವಪ್ರಸಾದ್ ಮಗ ಗಣೇಶ್ ಪ್ರಸಾದ್ ಹಾಗೂ ಮತ್ತೊಬ್ಬ ಮುಖಂಡ ಎಚ್.ಎಸ್.ನಂಜಪ್ಪ ಅರ್ಜಿ ಸಲ್ಲಿಸಿದ್ದರು. ಹನೂರಿನಿಂದ ಆರ್.ನರೇಂದ್ರ ಮತ್ತು ಮುಖಂಡ ನಾಗೇಂದ್ರ ಎಂಬುವವರು ಟಿಕೆಟ್ ಬಯಸಿದ್ದರು.
ವರಿಷ್ಠರು ಎರಡು ಕ್ಷೇತ್ರಗಳಲ್ಲಿ ಹಾಲಿ ಶಾಸಕರಿಗೆ ಹಾಗೂ ಗುಂಡ್ಲುಪೇಟೆಯಲ್ಲಿ ಮಹದೇವ ಪ್ರಸಾದ್ ಅವರ ಮಗನಿಗೆ ಮಣೆ ಹಾಕಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.