ಚಾಮರಾಜನಗರ: ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಆರ್.ಧ್ರುವನಾರಾಯಣಅವರ ಪದಗ್ರಹಣ ಸಮಾರಂಭ ಇದೇ 21ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲೆಯಿಂದ ನೂರಾರು ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಹೇಳಿದರು.

‘ನಮ್ಮ ಜಿಲ್ಲೆಯ ನಾಯಕರಾಗಿರುವ ಧ್ರುವನಾರಾಯಣ ಅವರು ಪಕ್ಷ ಸಂಘಟನೆಗೆ ಹಾಕಿರುವ ಶ್ರಮಕ್ಕೆ ಸಿಕ್ಕ ಫ್ರತಿಫಲವೇ ಕಾರ್ಯಾಧ್ಯಕ್ಷ ಹುದ್ದೆ. ಲೋಕಸಭಾ ಚುನಾವಣೆಯಲ್ಲಿ ಸೋತ ನಂತರ ಒಂದು ದಿನವೂ ಕುಳಿತುಕೊಳ್ಳದೇ, ನಿರಂತರವಾಗಿ ಪಕ್ಷ ಸಂಘಟನೆ ದುಡಿದರು. ಆರೋಗ್ಯ ಹಸ್ತ ಅಭಿಯಾನದ ಅಧ್ಯಕ್ಷರಾಗಿ ರಾಜ್ಯದಾದ್ಯಂತ ಸುತ್ತಾಡಿದರು. ಅವರು ಮಾಡಿರುವ ಕೆಲಸವನ್ನು ಗಮನಿಸಿ ಕೆಪಿಸಿಸಿ, ಎಐಸಿಸಿ ವರಿಷ್ಠರು ಕಾರ್ಯಾಧ್ಯಕ್ಷ ಹುದ್ದೆ ನೀಡಿದ್ದಾರೆ’ ಎಂದು ಹೇಳಿದರು.

21ರಂದು ಬೆಳಿಗ್ಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಚೌಡಯ್ಯ ಸ್ಮಾರಕ ಸಭಾಂಗಣದಲ್ಲಿ ಪದಗ್ರಹಣ ಸಮಾರಂಭ ನಡೆಯಲಿದ್ದು,ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ ಸೇರಿದಂತೆ ಹಲವು ಮುಖಂಡರು ಭಾಗವಹಿಸಲಿದ್ದಾರೆ ಎಂದರು.

27ರಂದು ಅಭಿನಂದನಾ ಸಮಾರಂಭ: ‘ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಆರ್.ಧ್ರುವನಾರಾಯಣ ಅವರು ನೇಮಕಗೊಂಡಿರುವುದು ಜಿಲ್ಲೆಗೆ ಸಂತಸದ ವಿಚಾರವಾಗಿದೆ. ಅವರನ್ನು ಅಭಿನಂದಿಸುವ ಸಲುವಾಗಿ ಇದೇ 27ರಂದು ನಗರದ ಶ್ರೀ ಶಿವಕುಮಾರಸ್ವಾಮಿ ಭವನದಲ್ಲಿ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ. ಸಮಾರಂಭದಲ್ಲಿ ಕೆಪಿಸಿಸಿ ನಾಯಕರು, ಜಿಲ್ಲೆಯ ಶಾಸಕರು, ಮಾಜಿ ಶಾಸಕರು ಭಾಗವಹಿಸಲಿದ್ದಾರೆ. ಈ ಸಮಾರಂಭದಲ್ಲಿ 5000 ದಿಂದ 6000 ಮಂದಿ ಕಾರ್ಯಕರ್ತರು ಭಾಗವಹಿಸಲಿದ್ದಾರೆ’ ಎಂದು ಮರಿಸ್ವಾಮಿ ಅವರು ಹೇಳಿದರು.

ಬೆಲೆ ಏರಿಕೆ: ಕೇಂದ್ರದ ವಿರುದ್ಧ ವಾಗ್ದಾಳಿ

ಇಂಧನ ಹಾಗೂ ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರವಾಗಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಮರಿಸ್ವಾಮಿ ಅವರು, ‘ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಹಾಗೂ ಇತರ ವಸ್ತುಗಳ ಬೆಲೆ ಏರಿಕೆಯಿಂದಾಗಿ ಜನ ಸಾಮಾನ್ಯರಿಗೆ ಹೊರೆಯಾಗುತ್ತಿದೆ. ರೈತರು ಕೂಡ ಈಗ ವ್ಯವಸಾಯಕ್ಕೆ ಯಂತ್ರೋಣಪಕರಣಗಳನ್ನು ಬಳಸುತ್ತಿರುವುದರಿಂದ ಅವುಗಳ ಬಾಡಿಗೆ ಹೆಚ್ಚಾಗಿ ಕೃಷಿಕರಿಗೂ ತೊಂದರೆಯಾಗುತ್ತಿದೆ’ ಎಂದು ಹೇಳಿದರು.

‘ಕಾಂಗ್ರೆಸ್ ಸರ್ಕಾರವಿದ್ದಾಗ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಬೆಲೆ ಕಡಿಮೆಯಾಗಿತ್ತು. ಕೇಂದ್ರ ಸರ್ಕಾರಕ್ಕೆ ಬಡವರು, ರೈತರು, ಮಧ್ಯಮವರ್ಗದವರ ಮೇಲೆ ಕಾಳಜಿ ಇಲ್ಲ. ಶ್ರೀಮಂತರ ಪರ ಸರ್ಕಾರವಾಗಿದ್ದು ಸೂಟುಬೂಟಿನ ಸರ್ಕಾರವಾಗಿದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಡಳಿತದ ಹಿಡಿತ ಇಲ್ಲ: ರಾಜ್ಯದಲ್ಲಿ ಆಡಳಿತ ಯಂತ್ರ ಕುಸಿದಿದೆ. ಬಿಜೆಪಿ ಸರ್ಕಾರಕ್ಕೆ ಆಡಳಿತದ ಮೇಲೆ ಹಿಡಿತ ಇಲ್ಲ. ಯಾವುದೇ ವಿಚಾರದಲ್ಲಿ ಸ್ಪಷ್ಟ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತಿಲ್ಲ. ಒಂದು ನಿರ್ಧಾರ ಕೈಗೊಂಡು, ತಕ್ಷಣವೇ ಅದನ್ನು ಬದಲಾಯಿಸಲಾಗುತ್ತಿದೆ. ಖಾತೆ ಹಂಚಿಕೆ, ಚಿತ್ರ ಮಂದಿರದಲ್ಲಿ ಪ್ರೇಕ್ಷಕರಿಗೆ ಅವಕಾಶ ನೀಡುವುದು, ಬಿಪಿಎಲ್ ಕಾರ್ಡ್ ರದ್ದು ಮಾಡುವ ವಿಚಾರ.. ಹೀಗೆ ಯಾವುದೇ ವಿಷಯದಲ್ಲಿ ಸರ್ಕಾರ ಸ್ಪಷ್ಟ ನಿರ್ಧಾರ ಕೈಗೊಂಡಿಲ್ಲ’ ಎಂದು ಅವರು ಟೀಕಿಸಿದರು.

ಜಿಲ್ಲಾ ಕಾಂಗ್ರೆಸ್ ಸಮಿತಿ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿ ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಚಂದ್ರು, ಮಹಮ್ಮದ್ ಅಸ್ಗರ್ ಮುನ್ನಾ, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್ ಕುಮಾರ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.