ಚಾಮರಾಜನಗರ: ಆರ್ಥಿಕವಾಗಿ ಹಿಂದುಳಿದವರು ಹಾಗೂ ಸಮಾಜದ ಎಲ್ಲ ವರ್ಗಗಳ ಅಭಿವೃದ್ಧಿಗೆ ಪೂರಕವಾಗಿ ಕಾಂಗ್ರೆಸ್ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳಾದ ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು ಅರ್ಹ ಫಲಾನುವಿಗಳಿಗೆ ತಲುಪಿಸಲು ಅಧಿಕಾರಿಗಳು ಶ್ರಮವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಪ್ರಾಧಿಕಾರದ ಜಿಲ್ಲಾಧ್ಯಕ್ಷ ಎಚ್.ವಿ.ಚಂದ್ರು ಸೂಚಿಸಿದರು.

ನಗರದ ಜಿಲ್ಲಾ ಪಂಚಾಯತ್ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳು ಸ್ಪಷ್ಟ ಹಾಗೂ ನಿಖರವಾದ ಮಾಹಿತಿ ಒದಗಿಸಬೇಕು, ಅರ್ಹರು ಕಾರ್ಯಕ್ರಮಗಳಿಂದ ಹೊರಗುಳಿದಂತೆ ಹಾಗೂ ಸೌಲಭ್ಯಗಳಿಂದ ವಂಚಿತರಾಗದಂತೆ ಕಾರ್ಯ ನಿರ್ವಹಿಸಬೇಕು ಎಂದು ಸಲಹೆ ನೀಡಿದರು.

ಯೋಜನೆಗಳ ಪ್ರಗತಿಯ ಬಗ್ಗೆ ಅಧಿಕಾರಿಗಳು ಸಲ್ಲಿಸುವ ವರದಿ ಕ್ರಮಬದ್ಧ ಹಾಗೂ ನಿಖರವಾಗಿರಬೇಕು. ಮಾಹಿತಿ ಸಲ್ಲಿಕೆಯಲ್ಲಿ ಗೊಂದಲಗಳಿಗೆ ಅವಕಾಶ ನೀಡಬಾರದು. ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿ ಪ್ರತಿ ತಿಂಗಳು ಸಲ್ಲಿಕೆಯಾಗಬೇಕು ಎಂದು ಸೂಚನೆ ನೀಡಿದರು.

ಜಿಲ್ಲೆಯಲ್ಲಿ ಕೆಲವು ಫಲಾನುಭವಿಗಳಿಗೆ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಿಲ್ಲ ಎಂಬ ದೂರುಗಳಿದ್ದು ತಾಂತ್ರಿಕ ಸಮಸ್ಯೆಗಳಿದ್ದ ಬಗೆಹರಿಸಿ ಹಣ ಜಮೆ ಮಾಡಬೇಕು. ಜೂನ್ ತಿಂಗಳ ಗೃಹಲಕ್ಷ್ಮಿ ಅನುದಾನ ಬಿಡುಗಡೆಯಾಗಿದ್ದು, ಮೇ ತಿಂಗಳ ಹಣ ಫಲಾನುಭವಿಗಳ ಖಾತೆಗೆ ಮೊದಲು ವರ್ಗಾವಣೆ ಮಾಡಿ ನಂತರ ಜೂನ್ ಹಣ ಜಮೆ ಪ್ರಕ್ರಿಯೆ ಆರಂಭಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮೋನಾ ರೋತ್ ಮಾತನಾಡಿ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿಯ ಸಭೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ಸಂಪೂರ್ಣ ಮಾಹಿತಿ ಪ್ರಸ್ತುತಪಡಿಸಬೇಕು, ಗೊಂದಲ ಹಾಗೂ ಅಸಮರ್ಪಕ ಮಾಹಿತಿ ಸಲ್ಲಿಕೆ ಮಾಡಿದರೆ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಶಕ್ತಿ ಯೋಜನೆಯಡಿ ರಾಜ್ಯದಲ್ಲಿ 500 ಕೋಟಿ ಮಹಿಳೆಯರು ಕೆಎಸ್ಆರ್ಟಿಸಿ ಬಸ್ಗಳಲ್ಲಿ ಉಚಿತವಾಗಿ ಪ್ರಯಾಣಿಸಿದ್ದು ಗಿನ್ನಿಸ್ ಬುಕ್ ಆಫ್ ರೆಕಾರ್ಡ್ನಲ್ಲಿ ದಾಖಲಾಗಿರುವ ಹಿನ್ನೆಲೆಯಲ್ಲಿ ಕೆ.ಎಸ್.ಆರ್.ಟಿ.ಸಿ ವಿಭಾಗೀಯ ನಿಯಂತ್ರಣಾಧಿಕಾರಿ ಅಶೋಕ್ ಕುಮಾರ್ ಅವರನ್ನು ಸಭೆಯಲ್ಲಿ ಗೌರವಿಸಲಾಯಿತು.

ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಉಪಾಧ್ಯಕ್ಷ ಬಿ.ಪಿ.ನಾಗರಾಜ ಮೂರ್ತಿ, ರಾಜಶೇಖರ್, ಸಿದ್ದರಾಜು, ಸದಸ್ಯರಾದ ಸೋಮೇಶ್ವರ್, ಕೆ.ಪಿ. ಚಿನ್ನಸ್ವಾಮಿ, ಎಚ್.ಎನ್. ಜಯರಾಜು, ಎಂ. ದೇವರಾಜು, ಭಾಗ್ಯ, ಪ್ರಭುಪ್ರಸಾದ್, ರಾಚಯ್ಯ, ಸಿದ್ದರಾಜು, ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಹೊನ್ನರಾಜು, ದೀಪಾ, ಮಹಿಳಾ ಮತ್ತು ಮಕ್ಕಳ ಅಭಿವೃರ್ದದಿ ಇಲಾಖೆ ಉಪನಿರ್ದೇಶಕ ಎಚ್.ಆರ್. ಸುರೇಶ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕಿ ವಸುಂಧರಾ, ಜಿಲ್ಲಾ ಉದ್ಯೋಗಾಧಿಕಾರಿ ಮಹಮದ್ ಅಕ್ಬರ್, ಸೆಸ್ಕ್ ಅಧಿಕಾರಿಗಳು ಸಭೆಯಲ್ಲಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.