ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಧ್ರುವನಾರಾಯಣ ಹುಟ್ಟುಹಬ್ಬ: ರಕ್ತದಾನ ಶಿಬಿರ, ಕೋವಿಡ್‌ ರೋಗಿಗಳಿಗೆ ಊಟ

ಅಭಿಮಾನಿ ಬಳಗದಿಂದ ಸಮಾಜಮುಖಿ ಕಾರ್ಯ
Last Updated 31 ಜುಲೈ 2020, 14:48 IST
ಅಕ್ಷರ ಗಾತ್ರ

ಚಾಮರಾಜನಗರ: ಕೆಪಿಸಿಸಿ ವಕ್ತಾರ, ಮಾಜಿ ಸಂಸದ ಆರ್‌.ಧ್ರುವನಾರಾಯಣ ಅವರ 59ನೇ ವರ್ಷದ ಜನ್ಮದಿನದ ಅಂಗವಾಗಿ ಅವರ ಅಭಿಮಾನಿಗಳ ಬಳಗವು ನಗರದಲ್ಲಿ ಶುಕ್ರವಾರ ವಿವಿಧ ಸಮಾಜಮುಖಿ ಕಾರ್ಯಗಳನ್ನು ಹಮ್ಮಿಕೊಂಡಿತ್ತು.

ಸಾವಿರಕ್ಕೂ ಹೆಚ್ಚು ಜನರಿಗೆ ಮಾಸ್ಕ್‌ ವಿತರಣೆ, ಸ್ವಯಂಪ್ರೇರಿತ ರಕ್ತದಾನ ಶಿಬಿರ, ಸಾರ್ವಜನಿಕರಿಗೆ ಸ್ಥಳದಲ್ಲೇ ಆಯುಷ್ಮಾನ್‌ ಭಾರತ ಕಾರ್ಡ್‌ ವಿತರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕೋವಿಡ್‌ ರೋಗಿಗಳಿಗೆ ಒಂದು ದಿನ ಊಟು ಉಪಾಹಾರ ವ್ಯವಸ್ಥೆಯನ್ನು ಮಾಡಲಾಗಿತ್ತು.

ರಕ್ತದಾನ ಶಿಬಿರದಲ್ಲಿ 60 ಮಂದಿ ಸ್ವಯಂ ಪ್ರೇರಿತ ರಕ್ತದಾನ ಮಾಡಿದರು. 100ಕ್ಕೂ ಹೆಚ್ಚು ಮಂದಿ ಆಯುಷ್ಮಾನ್‌ ಭಾರತ್‌ ಕಾರ್ಡ್‌ ವಿತರಿಸಲಾಯಿತು. ಎಪಿಎಂಸಿ ಆವರಣದಲ್ಲಿ ವ್ಯಾಪಾರಿಗಳಿಗೆ, ರೈತರಿಗೆ ಮಾಸ್ಕ್‌ಗಳನ್ನು ವಿತರಿಸಲಾಯಿತು.

ಬಿ.ರಾಚಯ್ಯ ಜೋಡಿ ರಸ್ತೆಯಲ್ಲಿರುವ ರೋಟರಿ ಭವನದಲ್ಲಿ ರೋಟರಿ ಸಂಸ್ಥೆ, ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರ ಹಾಗೂ ನಾಗವಳ್ಳಿಯ ಎ.ಪಪಿ.ಸೈಬರ್‌ಕೆಫೆ ಸಹಯೋಗದಲ್ಲಿ ಆಯೋಜಿಸಲಾಗಿದ್ದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ನಳಂದಾ ಬೌದ್ಧ ವಿಶ್ವವಿದ್ಯಾಲಯದ ಬೋಧಿದತ್ತ ಬಂತೇಜಿ ಅವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ‘ಆರ್.ಧ್ರುವನಾರಾಯಣ ಅವರು ನಾನು ಕಂಡ ಅಪರೂಪದ ರಾಜಕಾರಣಿಯಾಗಿದ್ದು, ಮಧ್ಯರಾತ್ರಿ 12 ಗಂಟೆಯವರೆಗೂ ಜನರ ಸೇವೆ ಮಾಡುತ್ತಾರೆ. ಅವರೊಬ್ಬ ಸಹೃದಯಿ ವ್ಯಕ್ತಿ. ರಾಜಕಾರಣದಲ್ಲಿ ಅವರಿಗೆ ಉತ್ತಮ ಭವಿಷ್ಯವಿದೆ’ ಎಂದು ಪ್ರತಿಪಾದಿಸಿದರು.

‘ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅವರ ಅಭಿಮಾನಿ ಬಳಗವು ಒಂಬತ್ತು ವರ್ಷಗಳಿಂದ ವಿಶಿಷ್ಟ ಸಮಾಜಮುಖಿ ಕಾರ್ಯಕ್ರಮಗಳೊಂದಿಗೆ ಆಚರಣೆ ಮಾಡಿಕೊಂಡು ಬರುತ್ತಿರುವುದು ಶ್ಲಾಘನೀಯ. ಬಡಜನರಿಗೆ ಅನುಕೂಲವಾಗುವಂತಹ ಇಂತಹ ಸೇವಾ ಕಾರ್ಯಗಳು ಹೆಚ್ಚುಹೆಚ್ಚು ನಡೆಯಲಿ’ ಎಂದು ಆಶಿಸಿದರು.

‌ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಪಿ.ಮರಿಸ್ವಾಮಿ ಅವರು ಮಾತನಾಡಿ, ‘ಧ್ರುವನಾರಾಯಣ ಅವರ ಹುಟ್ಟುಹಬ್ಬವನ್ನು ಅಭಿಮಾನಿ ಬಳಗದ ವತಿಯಿಂದ ವಿಶಿಷ್ಟ ಸೇವಾ ಕಾರ್ಯಗಳೊಂದಿಗೆ ಆಚರಿಸಿಕೊಂಡು ಬರಲಾಗುತ್ತಿದೆ.ಈ ವರ್ಷ ಕೋವಿಡ್-19ರ ಕಾರಣಕ್ಕೆ ತುಂಬಾ ಸರಳವಾಗಿ ಸರಳವಾಗಿ ಆಚರಿಸಲಾಗಿದೆ.

ಕಾರ್ಯಕ್ರಮದಲ್ಲಿ ಧ್ರುವನಾರಾಯಣ ಅಭಿಮಾನಿಗಳ ಬಳಗದ ಅಧ್ಯಕ್ಷ ಕಾಗಲವಾಡಿ ಚಂದ್ರು, ಎಚ್.ಡಿ.ಕೋಟೆ ಕಾಂಗ್ರೆಸ್ ಉಸ್ತುವಾರಿ ಕಾರ್ಯದರ್ಶಿ ಕಾವೇರಪ್ಪ, ರೋಟರಿ ಅಧ್ಯಕ್ಷ ಆರ್‌.ಪ್ರಕಾಶ್, ಕಾರ್ಯದರ್ಶಿ ಚಂದ್ರಪ್ರಭ ಜೈನ್, ಸದಸ್ಯರಾದ ಆರ್‌.ಎಂ.ಸ್ವಾಮಿ, ನಾಗರಾಜು ಜಿಲ್ಲಾ ಪಂಚಾಯಿತಿ ಸದಸ್ಯರಾದ ಕೆರೆಹಳ್ಳಿ ನವೀನ್, ಬೊಮ್ಮಯ್ಯ, ಚೆನ್ನಪ್ಪ, ಕೆ.ಎಸ್.ಮಹೇಶ್, ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಜಿಲ್ಲಾ ಮಾಧ್ಯಮ ಕಾರ್ಯದರ್ಶಿ ಅರುಣ್‌ಕುಮಾರ್, ಮುಖಂಡರಾದಎಸ್. ಬಾಲರಾಜ್, ಬಣ್ಣ ಮತ್ತು ವೆಂಕಟೇಶ್ ಮತ್ತಿತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT