ಶನಿವಾರ, ಅಕ್ಟೋಬರ್ 1, 2022
25 °C

ಕ್ಯಾಲೆಂಡರ್‌ ಬದಲಾದ ಹಾಗೆ ಸಿ.ಎಂ. ಬದಲು: ಮಹದೇವಪ್ಪ ವ್ಯಂಗ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ರಾಜ್ಯದಲ್ಲಿರುವ ಈ ಸರ್ಕಾರದಲ್ಲಿ ಕ್ಯಾಲೆಂಡರ್‌ ಬದಲಾದ ಹಾಗೆ ಮುಖ್ಯಮಂತ್ರಿಗಳೂ ಬದಲಾಗುತ್ತಾರೆ ಎಂದು ಕಾಂಗ್ರೆಸ್‌ ಮುಖಂಡ ಎಚ್‌.ಸಿ.ಮಹದೇವಪ್ಪ ಬುಧವಾರ ವ್ಯಂಗ್ಯವಾಡಿದರು. 

ಆಗಸ್ಟ್‌ 15ರ ನಂತರ ಮುಖ್ಯಮಂತ್ರಿ ಬದಲಾಗುತ್ತಾರೆ ಎಂಬ ವದಂತಿ ಹಾಗೂ ಈ ಸಂಬಂಧ ಕಾಂಗ್ರೆಸ್‌ ಮಾಡಿರುವ ಟ್ವೀಟ್‌ ಬಗ್ಗೆ ನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, 'ಕಳೆದ ಬಾರಿ ಯಡಿಯೂರಪ್ಪ, ಸದಾನಂದಗೌಡ ಹಾಗೂ ಜಗದೀಶ ಶೆಟ್ಟರ್‌ ಆದರು. ಈ ಬಾರಿ ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಆಗಿದ್ದಾರೆ. ಮತ್ತೆ ಇನ್ನೊಬ್ಬರು ಆದರೆ ಆಶ್ಚರ್ಯ ಇಲ್ಲ’ ಎಂದರು. 

‘ಬಿಜೆಪಿಗೆ ಜನರು ಸಂಪೂರ್ಣ ಬೆಂಬಲ ಕೊಟ್ಟಿಲ್ಲ. ಇದೊಂದು ಅಸ್ಥಿರ ಸರ್ಕಾರ. ಏನು ಬೇಕಾದರೂ ಆಗಬಹುದು’ ಎಂದು ಹೇಳಿದರು. 

ಮುಂದಿನ ಚುನಾವಣೆಯಲ್ಲಿ ಸಿದ್ದರಾಮಯ್ಯ ಅವರು ಸ್ಪರ್ಧಿಸುವ ಕ್ಷೇತ್ರದ ಬಗ್ಗೆ ಕೇಳಿದ ಪ್ರಶ್ನೆಗೆ, ‘ಎಸ್‌ಸಿ, ಎಸ್‌ಟಿ ಕ್ಷೇತ್ರ ಬಿಟ್ಟು ಬೇರೆ ಎಲ್ಲೇ ನಿಂತರೂ ಸಿದ್ದರಾಮಯ್ಯ ಗೆಲ್ಲುತ್ತಾರೆ’ ಎಂದು ಮಹದೇವಪ್ಪ ಉತ್ತರಿಸಿದರು. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು