ಬುಧವಾರ, ಜೂನ್ 3, 2020
27 °C

ಕಾನ್‌ಸ್ಟೆಬಲ್‌ಗೆ ಸೋಂಕು: ಹನೂರು ತಾಲೂಕಿನ ಗ್ರಾಮದಲ್ಲಿ 18 ಮಂದಿ ಕ್ವಾರಂಟೈನ್‌ಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹನೂರು‌: ಬೆಂಗಳೂರಿನ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಕಾನ್‌ಸ್ಟೆಬಲ್ ಒಬ್ಬರಿಗೆ ಕೋವಿಡ್- 19 ದೃಢಪಟ್ಟಿರುವ ಬೆನ್ನಲ್ಲೇ ತಾಲ್ಲೂಕಿನ ಗ್ರಾಮವೊಂದರ 18 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.

ಕಾನ್‌ಸ್ಟೆಬಲ್ ಅವರು ಸೋಮವಾರ ಬೆಳಿಗ್ಗೆ ಬೆಂಗಳೂರಿನಿಂದ ತಮ್ಮ ಊರಿಗೆ ಬಂದಿದ್ದರು. ಅವರಿಗೆ ಸೋಂಕು ತಗುಲಿರುವುದು ಪರೀಕ್ಷೆ ವರದಿಯಿಂದ ಖಚಿತವಾಗುತ್ತಿದ್ದಂತೆಯೇ ಬೆಂಗಳೂರಿಂದ ಅವರಿಗೆ ವಾಪಸ್ ಬರುವಂತೆ ಕರೆ ಬಂದಿತ್ತು. ಅವರು ಹಿಂದಿರುಗಿದ ಬಳಿಕ, ಕುಟುಂಬದ ಸದಸ್ಯರು ಹಾಗೂ ಕುಟುಂಬದ ಸದಸ್ಯರನ್ನು ರಾತ್ರಿ ಚಾಮರಾಜನಗರಕ್ಕೆ ಕರೆದೊಯ್ಯಲಾಗಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಈ ಬಗ್ಗೆ ‌ನಮಗಿನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ಪರಿಶೀಲನೆ ಮಾಡುತ್ತಿದ್ದೇವೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ.ಎಂ.ಸಿ.ರವಿ ಅವರು 'ಪ್ರಜಾವಾಣಿ'ಗೆ ತಿಳಿಸಿದರು.

ಜಿಲ್ಲೆಯು ಹಸಿರುವಲಯದಲ್ಲಿದ್ದ ಎರಡು ವಾರಗಳಿಂದ ಕ್ವಾರಂಟೈನ್ ಕೇಂದ್ರದಲ್ಲಿ ಯಾರೂ ಇರಲಿಲ್ಲ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು