ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಕಾನ್‌ಸ್ಟೆಬಲ್‌ ಪರೀಕ್ಷೆ; 2785 ಅಭ್ಯರ್ಥಿಗಳು ಹಾಜರಿ

Published 28 ಜನವರಿ 2024, 13:58 IST
Last Updated 28 ಜನವರಿ 2024, 13:58 IST
ಅಕ್ಷರ ಗಾತ್ರ

ಚಾಮರಾಜನಗರ: ಸಶಸ್ತ್ರ ಪೊಲೀಸ್ ಕಾನ್‌ಸ್ಟೆಬಲ್‌ ಹುದ್ದೆಗಳ ನೇಮಕಾತಿಗಾಗಿ ಭಾನುವಾರ ನಗರದ 16 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಸುಗಮವಾಗಿ ನಡೆಯಿತು.  

ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು 5100 ಅಭ್ಯರ್ಥಿಗಳಿಗೆ ಅವಕಾಶ ನೀಡಲಾಗಿತ್ತು. ಆದರೆ, 2,785 ಮಂದಿ ಪರೀಕ್ಷೆಗೆ ಹಾಜರಾಗಿದ್ದರು. 

‘ಯಾವುದೇ ಅಡಚಣೆ ಇಲ್ಲದೆ ಪರೀಕ್ಷೆ ನಡೆದಿದೆ. ಜಿಲ್ಲೆಯವರು ಮಾತ್ರವಲ್ಲದೆ ಹೊರ ಜಿಲ್ಲೆಗಳ ಅಭ್ಯರ್ಥಿಗಳಿಗೂ ಜಿಲ್ಲೆಯ ಪರೀಕ್ಷಾ ಕೇಂದ್ರಗಳನ್ನು ಹಂಚಿಕೆ ಮಾಡಲಾಗಿತ್ತು’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಪದ್ಮಿನಿ ಸಾಹು ‘ಪ್ರಜಾವಾಣಿ’ಗೆ ತಿಳಿಸಿದರು.  

ಸಿಬ್ಬಂದಿ ನಿಯೋಜನೆ:

ಪರೀಕ್ಷಾ ಕೇಂದ್ರಗಳ ಬಳಿ ಭದ್ರತೆಗಾಗಿ ಪೊಲೀಸ್‌ ಸಿಬ್ಬಂದಿ ನಿಯೋಜಿಸಲಾಗಿತ್ತು. ಅಭ್ಯರ್ಥಿಗಳ  ಬಯೊಮೆಟ್ರಿಕ್‌ ನೋಂದಣಿ ದೃಢೀಕರಣದ ಬಳಿಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಯಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT