ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹರದನಹಳ್ಳಿಯಲ್ಲಿ ಗ್ರಾಹಕರ ಜಾಗೃತಿ, ಹಕ್ಕುಗಳ ಅರಿವು ಕಾರ್ಯಕ್ರಮ

Published 17 ಜನವರಿ 2024, 15:47 IST
Last Updated 17 ಜನವರಿ 2024, 15:47 IST
ಅಕ್ಷರ ಗಾತ್ರ

ಚಾಮರಾಜನಗರ: ಗ್ರಾಹಕರು ತಮ್ಮ ಹಕ್ಕುಗಳ ಬಗ್ಗೆ ಜಾಗೃತಿ ಹೊಂದುವುದು ಅಗತ್ಯ ಎಂದು ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷೆ ಎಂ.ವಿ.ಭಾರತಿ ತಿಳಿಸಿದರು.

ತಾಲ್ಲೂಕಿನ ಹರದನಹಳ್ಳಿಯ ಸರ್ಕಾರಿ ಪ್ರೌಢಶಾಲೆಯಲ್ಲಿ ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘ, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರ, ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರ ಇಲಾಖೆ, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ ಹಾಗೂ ಕಾನೂನು ಶಾಸ್ತ ಮಾಪನ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಗ್ರಾಹಕರ ಜಾಗೃತಿ, ಹಕ್ಕುಗಳ ಅರಿವು ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಖರೀದಿಸುವ ವಸ್ತು, ಸೇವೆಯಲ್ಲಿ ಲೋಪವಾದಾಗ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದಲ್ಲಿ ಅರ್ಜಿ ಸಲ್ಲಿಸಿ ದೂರು ದಾಖಲಿಸಬಹುದು. ರಾಜ್ಯ, ರಾಷ್ಟ್ರೀಯ ಗ್ರಾಹಕರ ವ್ಯಾಜ್ಯಗಳ ಆಯೋಗ ಹಾಗೂ ಸುಪ್ರೀಂಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿ ಪರಿಹಾರ ಪಡೆಯಬಹುದು’ ಎಂದರು.

ಆಹಾರ ಇಲಾಖೆಯ ಶಿರಸ್ತೇದಾರ ಮಹೇಶ್ ಮಾತನಾಡಿ, ‘ಮನುಷ್ಯ ಹುಟ್ಟಿನಿಂದ ಸಾಯೋ ತನಕ ಗ್ರಾಹಕನಾಗಿರುತ್ತಾನೆ. ಯಾವುದೇ ವಸ್ತುಗಳನ್ನು ಖರೀದಿಸುವಾಗ ಜಾಗೃತಿ ಅಗತ್ಯ. ವಸ್ತುಗಳ ಖರೀದಿ ಸಂದರ್ಭದಲ್ಲಿ ಕಡ್ಡಾಯವಾಗಿ ಬಿಲ್ ಪಡೆಯಬೇಕು. ಇಲ್ಲದಿದ್ದರೆ ಸರಕು, ಸೇವೆಯಲ್ಲಿ ಲೋಪಗಳಾದಾಗ ಪರಿಹಾರ ಪಡೆಯಲು ಸಾಧ್ಯವಿಲ್ಲ’ ಎಂದು ತಿಳಿಸಿದರು.

ಶ್ರೀಗಂಧ ಮಹಿಳಾ ಅಭಿವೃದ್ಧಿ ಸಂಘದ ಅಧ್ಯಕ್ಷೆ ಜಯಮ್ಮ, ಕಾನೂನುಶಾಸ್ತ್ರ ಮಾಪನ ಇಲಾಖೆಯ ಭಾಸ್ಕರ್, ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ರಾಜು, ಜಿಲ್ಲಾ ಗ್ರಾಹಕ ಮಾಹಿತಿ ಕೇಂದ್ರದ ಸಂಯೋಜಕಿ ಶಿವರಾಜಮ್ಮ, ಮುಖ್ಯ ಶಿಕ್ಷಕ ಕೃಷ್ಣಮೂರ್ತಿ, ಶಿಕ್ಷಕರಾದ ನಾಗರತ್ನ, ಇಂದಿರಾ, ಮಾದೇಗೌಡ ವಿದ್ಯಾರ್ಥಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT