ಚಾಮರಾಜನಗರ: ಸಹಕಾರ ಕ್ಷೇತ್ರದ ಬೆಳವಣಿಗೆ ಮತ್ತು ಅಭಿವೃದ್ದಿಯ ದೃಷ್ಟಿಯಿಂದ ಹಾಗೂ ಸಹಕಾರ ಕ್ಷೇತ್ರದ ಬಗ್ಗೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಲು ಸರ್ಕಾರ ಪಠ್ಯದಲ್ಲಿ ಸಹಕಾರ ಕ್ಷೇತ್ರದ ವಿಚಾರವನ್ನು ಸೇರ್ಪಡೆ ಮಾಡುತ್ತಿದೆ ಎಂದು ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷರಾದ ಎಚ್.ಎಸ್.ನಂಜುಂಡ ಪ್ರಸಾದ್ ತಿಳಿಸಿದರು.

ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ರಾಜ್ಯ ಸಹಕಾರ ಮಂಡಲ, ಜಿಲ್ಲಾ ಸಹಕಾರ ಒಕ್ಕೂಟ, ಸಹಕಾರ ಇಲಾಖೆ ಹಾಗೂ ಸರ್ಕಾರಿ ಪದವಿ ಕಾಲೇಜು ಸಹಯೋಗದಲ್ಲಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಚರ್ಚಾ ಸ್ಪರ್ಧೆ ಹಾಗೂ ಪ್ರೌಢಶಾಲೆ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪ್ರಬಂಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿದರು.

ಸಹಕಾರ ಚಳವಳಿಗೆ ಶತಮಾನದ ಇತಿಹಾಸವಿದ್ದು ರೈತರು, ಬಡವರು ಮತ್ತು ಮಧ್ಯಮ ವರ್ಗಗಳ ಅಭಿವೃದ್ದಿಗೆ ಪೂರಕವಾಗಿವೆ. ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಬಲಗೊಳಿಸುವ ಮೂಲಕ ದೇಶದ ಪ್ರಗತಿಗೆ ಕಾರಣರಾಗಬೇಕು. ಎಲ್ಲ ವಿಭಾಗಗಳಲ್ಲಿ ಸಹಕಾರ ಕ್ಷೇತ್ರ ಮುನ್ನಡೆಯುತ್ತಿದ್ದು ಕಾರ್ಪೊರೆಟ್ ಕಂಪನಿಗಳಿಗೆ ಪೈಪೋಟಿ ನೀಡುವಷ್ಟು ಬೆಳೆದು ನಿಂತಿವೆ. ಕೆಎಂಎಫ್ ಹಾಗೂ ನಂದಿನಿ ಬ್ರಾಂಡ್ಗಳ ಸಹಕಾರ ಕ್ಷೇತ್ರದ ಕೊಡುಗೆಗಳಾಗಿವೆ ಎಂದರು.

ವಿದ್ಯಾರ್ಥಿಗಳು ಮಂದೆ ಗ್ರಾಮಗಳಲ್ಲಿರುವ ಸಹಕಾರ ಸಂಘಗಳ ಸದಸ್ಯರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸುವ ಮೂಲಕ ಸಹಕಾರ ರಂಗವನ್ನು ಮತ್ತಷ್ಟು ಬಲಪಡಿಸಲು ಮುಂದಾಗಬೇಕು ಎಂದು ನಂಜುಂಡ ಪ್ರಸಾದ್ ಕಿವಿಮಾತು ಹೇಳಿದರು.

ಸಹಕಾರ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಶಿವಕುಮಾರ್ ಮಾತನಾಡಿ, ಅತಿ ಹೆಚ್ಚು ರೈತಾಪಿ ವರ್ಗವನ್ನು ಹೊಂದಿರುವ ದೇಶದಲ್ಲಿ ಸಹಕಾರ ಕ್ಷೇತ್ರದ ಮೂಲಕ ರೈತರ ಹಾಗೂ ಬಡ ವರ್ಗದವರ ಪ್ರಗತಿಗೆ ಸರ್ಕಾರ ಒತ್ತು ನೀಡಿದೆ. ಸಹಕಾರ ಸಂಘಗಳ ಮೂಲಕ ರೈತರಿಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ ಸೌಲಭ್ಯ, ಕೃಷಿ ಉಪಕರಣಗಳ ಮಾರಾಟ, ಹಾಲು ಉತ್ಪಾದಕರ ಸಹಕಾರ ಸಂಘಗಳ ರಚನೆ ಮಾಡಲಾಗಿದೆ ಎಂದರು.

ಒಕ್ಕೂಟದ ನೋಡಲ್ ಅಧಿಕಾರಿ ಶಿವಕುಮಾರ್, ಉಪನ್ಯಾಸಕ ನಂದೀಶ್, ಒಕ್ಕೂಟ ನಿರ್ದೇಶಕ ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಎಚ್.ಎಂ.ಬಸವಣ್ಣ, ಮಾಜಿ ಅಧ್ಯಕ್ಷ ಮಲೆಯೂರು ನಾಗರಾಜು, ಕಾಲೇಜಿನ ಪ್ರಾಂಶುಪಾಲೆ ಅಶ್ವಿನಿ, ಉಪನ್ಯಾಸಕ ಲಿಂಗರಾಜು, ಮ್ಜಾನೇಜರ್ ಮಲ್ಲಿಕಾರ್ಜುನ ಸ್ವಾಮಿ, ಮಲ್ಲೇಶ್, ಕೆಂಡಗಣ್ಣ, ವಿದ್ಯಾರ್ಥಿಗಳು, ಶಿಕ್ಷಕರು ಉಪಸ್ಥಿತರಿದ್ದರು.

ಚರ್ಚಾ ಸ್ಪರ್ಧೆ:

ಚಾಮರಾಜನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯಾ (ಪ್ರಥಮ), ಯಳಂದೂರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾ (ದ್ವೀತಿಯ) ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕುದೇರು ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಯಾ ( ತೃತೀಯ) ಬಹುಮಾನ ಪಡೆದರು.

ಪ್ರಬಂಧ ಸ್ಪರ್ಧೆ: ಗುಂಡ್ಲುಪೇಟೆ ಆದರ್ಶ ವಿದ್ಯಾಲಯದ ವಿದ್ಯಾರ್ಥಿ ಸುರಕ್ಷಾ ಪ್ರಥಮ, ಗುಂಡ್ಲುಪೇಟೆ ಸರ್ಕಾರಿ ಶಾಲೆಯ ಅನುಷಾ ದ್ವಿತೀಯ, ಮಂಗಲ ಸರ್ಕಾರಿ ಪ್ರೌಢಶಾಲೆಯ ಹರ್ಷಿತಾ ತೃತೀಯ ಸ್ಥಾನ ಪಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.