ಚಾಮರಾಜನಗರ: ಜಿಲ್ಲೆಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ಅಭಿವೃದ್ಧಿಯಲ್ಲಿ ಅಧ್ಯಕ್ಷರ ಪಾತ್ರ ಮಹತ್ವದ್ದಾಗಿದ್ದು ಸಕ್ರಿಯ ಪಾಲ್ಗೊಳ್ಳುವಿಕೆ ಮೂಲಕ ಸಂಘಗಳನ್ನು ಸದೃಢಗೊಳಿಸಬಹುದು ಎಂದು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಎಚ್.ಎಸ್. ನಂಜುಂಡ ಪ್ರಸಾದ್ ಕಿವಿಮಾತು ಹೇಳಿದರು.

ನಗರದ ಲ್ಯಾಂಪ್ಸ್ ಸಹಕಾರ ಸಂಘದ ಭವನದಲ್ಲಿ ರಾಜ್ಯ ಸಹಕಾರ ಮಹಾ ಮಂಡಲ, ಜಿಲ್ಲಾ ಸಹಕಾರ ಒಕ್ಕೂಟ, ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಮತ್ತು ಸಹಕಾರ ಇಲಾಖೆ ಸಹಯೋಗದಲ್ಲಿ ನಡೆದ ಪಿಎಸಿಸಿ ಬ್ಯಾಂಕ್ ಅಧ್ಯಕ್ಷರಿಗೆ ಆಡಳಿತ ನಿರ್ವಹಣೆ ತರಬೇತಿ ಶಿಬಿರದಲ್ಲಿ ಅವರು ಮಾತನಾಡಿದರು.

ಸಹಕಾರ ಸಂಘಗಳ ಅಧ್ಯಕ್ಷರು ಸಹಕಾರ ಕಾಯ್ದೆಗಳ ಹಾಗೂ ಆಡಳಿತ ನಿರ್ವಹಣೆ ಬಗ್ಗೆ ಸ್ಪಷ್ಟವಾದ ಅರಿವು ಹೊಂದಿರಬೇಕು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳೊದಿಗೆ ಉತ್ತಮ ಬಾಂಧವ್ಯ ಹಾಗೂ ಸಹಕಾರದೊಂದಿಗೆ ಸಂಘವನ್ನು ಮುನ್ನಡೆಸಬೇಕು. ಸಹಕಾರ ಸಂಘಗಳು ಗ್ರಾಮ ಮಟ್ಟದಲ್ಲಿ ನಾಯಕತ್ವ ಗುಣವನ್ನು ಬೆಳೆಸಿಕೊಳ್ಳಲು ವೇದಿಕೆಯಾಗಿದ್ದು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬ್ಯಾಂಕ್ನ ಕಾರ್ಯವೈಖರಿ, ಸಂಘದ ಆಡಳಿತ ನಿರ್ವಹಣೆಯ ಹೊಣೆ ಹೊತ್ತುಕೊಳ್ಳಬೇಕು, ಸಹಕಾರ ಸಂಘಗಳ ಮೂಲಕ ಜನಸೇವೆ ಮಾಡಲು ಅವಕಾಶವಿದ್ದು ಸದ್ಬಳಕೆ ಮಾಡಿಕೊಳ್ಳಬೇಕು. ಬಡವರು ಹಾಗೂ ರೈತರಿಗೆ ಸಾಲ–ಸೌಲಭ್ಯ ಕೊಡಿಸುವ ಹಾಗೂ ಸಕಾಲದಲ್ಲಿ ಸಾಲ ಮರುಪಾವತಿ ಮಾಡಿಸುವ ಮೂಲಕ ಸ್ವಅಭಿವೃದ್ಧಿಯ ಜೊತೆಗೆ ಸಹಕಾರ ಸಂಘವನ್ನು ಪ್ರಗತಿಯತ್ತ ಕೊಂಡೊಯ್ಯಬೇಕು ಎಂದರು.

ಸಹಕಾರ ಸಂಘಗಳ ಉಪ ನಿಬಂಧಕಿ ಜ್ಯೋತಿ ಆರಸ್ ಮಾತನಾಡಿ, ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡರೆ ಸಹಕಾರ ಸಂಘಗಳು ಬಲಿಷ್ಟವಾಗಿ ಬೆಳೆಯಲು ಅವಕಶವಿದೆ. ಸಂಘಗಳ ಅಧ್ಯಕ್ಷರು ಮುತುವರ್ಜಿ ವಹಿಸಿ ಅಭಿವೃದ್ದಿಗೆ ಪೂರಕವಾದ ಕಾರ್ಯಕ್ರಮ ಹಾಗೂ ಯೋಜನೆಗಳನ್ನು ರೂಪಿಸಬೇಕು. ಸದಸ್ಯರಿಗೆ ಯಶಸ್ವಿನಿ ವಿಮೆ, ಶೂನ್ಯ ಬಡ್ಡಿ ದರದಲ್ಲಿ ಸಾಲ, ಕೃಷಿ ಉಪಕರಣಗಳ ಖರೀದಿಗೆ ಸಹಾಯಧನ ನೀಡುವ ಮೂಲಕ ಕೃಷಿ ಕ್ಷೇತ್ರವನ್ನು ಬಲಗೊಳಿಸಬೇಕು ಎಂದು ಕರೆ ನೀಡಿದರು.

ಅಭಿವೃದ್ಧಿ ಉಪ ನಿಬಂಧಕ ಎಂ.ಪಿ.ಪದ್ಮನಾಭ ಆಡಳಿತ ಮಂಡಳಿ ಚುನಾವಣೆಯ ಸ್ಪರ್ಧೆಯ ಅರ್ಹತೆ ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಮಾತನಾಡಿದರು. ಮೈಸೂರಿನ ಕೆಐಸಿಎಂ ಪ್ರಾಂಶುಪಾಲ ಪುಟ್ಟಸ್ವಾಮಿ ಸದಸ್ಯರ ಜವಾಬ್ದಾರಿ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದಲ್ಲಿ ಸಹಕಾರ ಅಭಿವೃದ್ದಿ ಅಧಿಕಾರಿ ಮಹಮದ್ ನದೀಮ್, ಪ್ರಧಾನ ವ್ಯವಸ್ಥಾಪಕ ಶಶಿಧರ್, ನಿರ್ದೇಶಕರಾದ ಜಿ. ಮಡಿವಾಳಪ್ಪ, ನಾಗರಾಜು, ಮುದ್ದಯಯ್, ಪ್ರಭುಸ್ವಾಮಿ, ಎಂ.ರವಿ, ಎಚ್.ಎಂ. ಬಸವಣ್ಣ, ಮಹದೇವ ಪ್ರಭು, ಪಿ. ಮಹದೇವಸ್ವಾಮಿ, ನಾಗ ಸುಂದರ, ಸಮಾನ್ವಯಾಧಿಕಾರಿ ಟಿ.ಶಿವಕುಮಾರ್, ವ್ಯವಸ್ಥಾಪಕ ಮಲ್ಲಿಕಾರ್ಜುನ, ಮಲ್ಲೇಶ್, ಸಹಕಾರ ಸಂಘಗಳ ಅಧ್ಯಕ್ಷರು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.