ಮಂಗಳವಾರ, ಜೂನ್ 2, 2020
27 °C
ಸೋಂಕು ದೃಢಪಟ್ಟ ವ್ಯಕ್ತಿಯ ಸಂಬಂಧಿಯ ಪರೀಕ್ಷಾ ವರದಿಯೂ ನೆಗೆಟಿವ್‌

ಧರ್ಮಸಭೆಯಲ್ಲಿ ಭಾಗಿಯಾಗಿದ್ದ ವ್ಯಕ್ತಿಗೆ ಸೋಂಕಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ದೆಹಲಿಯ ನಿಜಾಮುದ್ದೀನ್‍ನ ತಬ್ಲೀಗ್‌ ಜಮಾತ್ ಧರ್ಮಸಭೆಯಲ್ಲಿ ಭಾಗವಹಿಸಿದ್ದ ಜಿಲ್ಲೆಯ ವ್ಯಕ್ತಿಯೊಬ್ಬರು ಹಾಗೂ ಕೋವಿಡ್‌ –19 ದೃಢಪಟ್ಟಿದ್ದ ನಂಜನಗೂಡಿನ ಔಷಧ ಕಾರ್ಖಾನೆಯ ಮೊದಲ ಸಿಬ್ಬಂದಿಯ (52ನೇ ರೋಗಿ) ಸಂಬಂಧಿಗೂ ಸೋಂಕು ತಗುಲಿಲ್ಲ ಎಂದು ಪ್ರಯೋಗಾಲಯದ ವರದಿ ಹೇಳಿದೆ. 

ಇಬ್ಬರ ವರದಿಯೂ ನೆಗೆಟಿವ್‌ ಆಗಿರುವುದರಿಂದ ಜಿಲ್ಲಾಡಳಿತ ಹಾಗೂ ಜಿಲ್ಲೆಯ ಜನರೂ ಕೊಂಚ ನಿಟ್ಟುಸಿರು ಬಿಡುವಂತಾಗಿದೆ. 

ತಬ್ಲೀಗ್‌ ಜಮಾತ್‌ನ ಮಾರ್ಚ್‌ 15ರ ಧರ್ಮ ಸಭೆಯಲ್ಲಿ ಭಾಗವಹಿಸಿದ್ದ ವ್ಯಕ್ತಿ ಹಾಗೂ ನಂಜನಗೂಡಿನ ಸೋಂಕಿತನ ನೇರ ಸಂಪರ್ಕ ಹೊಂದಿದ್ದ ವ್ಯಕ್ತಿಯ ಗಂಟಲ ದ್ರವ ಹಾಗೂ ರಕ್ತದ ಮಾದರಿಗಳನ್ನು ನಾಲ್ಕು ದಿನಗಳ ಹಿಂದೆ ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಹೇಳಿದ್ದಾರೆ.  

ಈ ಮಧ್ಯೆ, ತಬ್ಲೀಗ್‌ ಜಮಾತ್‌ನೊಂದಿಗೆ ನಿಕಟ ಸಂಪರ್ಕ ಹೊಂದಿರುವ ಜಿಲ್ಲೆಯ 80 ಜನರನ್ನು ನಗರದ ಡಾ. ಬಿ.ಆರ್. ಅಂಬೇಡ್ಕರ್ ಭವನದ ಕ್ವಾರೆಂಟೈನ್ ಕೇಂದ್ರದಲ್ಲಿ ಇರಿಸಲಾಗಿದ್ದು, ಅವರ ಆರೋಗ್ಯದ ಮೇಲೆ ನಿಗಾ ಇಡಲಾಗಿದೆ.

ನಂಜನಗೂಡು ಪಟ್ಟಣದ ಔಷಧ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಜಿಲ್ಲೆಯ 52 ಜನರ ಪೈಕಿ 41 ಜನರು 14 ದಿನಗಳ ಪ್ರತ್ಯೇಕ ವಾಸದ ಅವಧಿಯನ್ನು ಪೂರ್ಣಗೊಳಿಸಿದ್ದಾರೆ ಎಂದು ಅವರು ಹೇಳಿದ್ದಾರೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು