ಮಂಗಳವಾರ, ಮಾರ್ಚ್ 31, 2020
19 °C
ಕೊರೊನಾ ಸೋಂಕು ತಡೆ: ಜಿಲ್ಲೆಯಲ್ಲಿ 9 ಜನರ ಮೇಲೆ ನಿಗಾ

ಒಬ್ಬರ ಗಂಟಲ ದ್ರವ, ರಕ್ತದ ಮಾದರಿ ಪರೀಕ್ಷೆಗೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚಾಮರಾಜನಗರ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ವಿದೇಶದಿಂದ ಬಂದ ಒಂಬತ್ತು ಜನರ ಮೇಲೆ ಜಿಲ್ಲಾ ಆರೋಗ್ಯ ಇಲಾಖೆ ನಿಗಾ ಇಟ್ಟಿದ್ದು, ಒಬ್ಬರ ಗಂಟಲಿನ ದ್ರವ ಹಾಗೂ ರಕ್ತದ ಮಾದರಿಯನ್ನು ಮೈಸೂರಿನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. 

‘ಯಾರಲ್ಲೂ ಸೋಂಕಿನ ರೋಗ ಲಕ್ಷಣಗಳು ಕಂಡು ಬಂದಿಲ್ಲ. ಎಲ್ಲರನ್ನೂ ಅವರ ಮನೆಯಲ್ಲೇ ಪ್ರತ್ಯೇಕವಾಗಿರಿಸಿ ನಿಗಾ ಇರಿಸಲಾಗುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಒಬ್ಬರ ರಕ್ತ ಹಾಗೂ ಗಂಟಲಿನ ದ್ರವದ ಮಾದರಿಯನ್ನು ಮೈಸೂರಿನ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಕೇಂದ್ರಕ್ಕೆ ಕಳುಹಿಸಲಾಗಿದೆ. ಮಂಗಳವಾರ ಸಂಜೆ ಅಥವಾ ಬುಧವಾರ ಬೆಳಿಗ್ಗೆ ವರದಿ ಬರಬಹುದು’ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು. 

100 ಹಾಸಿಗೆಗಳಿಗೆ ವಿಸ್ತರಣೆ: ಈ ಮಧ್ಯೆ, ನಗರದ ಅಂಬೇಡ್ಕರ್‌ ಭವನದಲ್ಲಿ ಸ್ಥಾಪಿಸಲಾಗಿರುವ ವಿಶೇಷ ನಿಗಾ ಘಟಕದ ಹಾಸಿಗೆಗಳ ಸಾಮರ್ಥ್ಯವನ್ನು 100 ಹಾಸಿಗೆಗಳಿಗೆ ವಿಸ್ತರಿಸಲಾಗಿದೆ ಎಂದು ಅವರು ಮಾಹಿತಿ ನೀಡಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು