ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆಗೆ ಕ್ಷಣಗಣನೆ

Last Updated 18 ಜುಲೈ 2021, 16:11 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ 2020–21ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆಗೆ ಕ್ಷಣಗಣನೆ ಆರಂಭವಾಗಿದ್ದು, ಜಿಲ್ಲಾಡಳಿತ ಅಂತಿಮ ಕ್ಷಣದ ಸಿದ್ಧತೆಯಲ್ಲಿ ತೊಡಗಿದೆ.

ಸೋಮವಾರ ಕೋರ್‌ ವಿಷಯಗಳಾದ ಗಣಿತ, ವಿಜ್ಞಾನ ಮತ್ತು ಸಮಾಜ ವಿಜ್ಞಾನ ಪರೀಕ್ಷೆ ನಡೆಯಲಿವೆ. 120 ಅಂಕಗಳಿಗೆ ಪರೀಕ್ಷೆ ನಡೆಯಲಿದೆ. ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12.30ರವರೆಗೆ ನಡೆಯಲಿದೆ.

6,440 ಗಂಡು ಮಕ್ಕಳು ಹಾಗೂ 5,749 ಹೆಣ್ಣುಮಕ್ಕಳು ಸೇರಿದಂತೆ 12,189 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 11,212 ಮಂದಿ ಶಾಲಾ ವಿದ್ಯಾರ್ಥಿಗಳು. 543 ಪುನರಾವರ್ತಿತ ಅಭ್ಯರ್ಥಿಗಳು. ಹೊಸ ಖಾಸಗಿ ವಿದ್ಯಾರ್ಥಿಗಳು 288, ಪುನರಾವರ್ತಿತ ಖಾಸಗಿ ಅಭ್ಯರ್ಥಿಗಳು 150 ಮಂದಿ ಇದ್ದಾರೆ. 2011ಕ್ಕಿಂತಲೂ ಮೊದಲಿನ ಪಠ್ಯಕ್ರಮದ 6 ಆರು ಮಂದಿ ಇದ್ದಾರೆ. 115 ಅಂಗವಿಕಲ ಮಕ್ಕಳು ಕೂಡ ಪರೀಕ್ಷೆ ಎದುರಿಸಲಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 27, ಗುಂಡ್ಲುಪೇಟೆ ತಾಲ್ಲೂಕಿನಲ್ಲಿ 21, ಹನೂರಿನಲ್ಲಿ 16, ಕೊಳ್ಳೇಗಾಲದಲ್ಲಿ 14 ಹಾಗೂ ಯಳಂದೂರು ತಾಲ್ಲೂಕುಗಳಲ್ಲಿ ಏಳು ಕೇಂದ್ರಗಳು ಸೇರಿದಂತೆ 85 ಕೇಂದ್ರಗಳನ್ನು ತೆರೆಯಲಾಗಿದೆ.

ಕೋವಿಡ್‌ ಹರಡುವಿಕೆ ತಡೆಗೆ ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರಗಳು ಹಾಗೂ ಕೊಠಡಿಗಳಿಗೆ ಸೋಂಕು ನಿವಾರಕಗಳನ್ನು ಸಿಂಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT