ಕೊಳ್ಳೇಗಾಲ: ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ತಮ್ಮ ಅನುಪಸ್ಥಿತಿಯಲ್ಲಿ ಉತ್ತರಾಧಿಕಾರಿಯನ್ನು ನೇಮಕ ಮಾಡುವ ಪ್ರಕ್ರಿಯೆಗೆ ಮಠದ ಕಿರಿಯ ಸ್ವಾಮೀಜಿ ಇಮ್ಮಡಿ ಮಹದೇವಸ್ವಾಮಿ ಅವರು ತಂದಿದ್ದ ತಡೆಯಾಜ್ಞೆಯನ್ನು ಇಲ್ಲಿನ ಹೆಚ್ಚುವರಿ ಸಿವಿಲ್ ನ್ಯಾಯಾಲಯ ರದ್ದುಗೊಳಿಸಿದೆ.

ಸುಳ್ವಾಡಿ ವಿಷ ಪ್ರಸಾದ ಪ್ರಕರಣದ ಪ್ರಮುಖ ಆರೋಪಿಯಾಗಿರುವಇಮ್ಮಡಿ ಮಹದೇವಸ್ವಾಮಿ ಅವರು ಜೈಲಿನಲ್ಲಿ ಇದ್ದಾರೆ. ಘಟನೆಯ ನಂತರ ಮಠದ ಭಕ್ತ ಮಂಡಳಿ, 20 ಹಳ್ಳಿಗಳು ಮತ್ತು ತಮಿಳುನಾಡಿನ 33 ಹಳ್ಳಿಗಳ ಬೇಡಗಂಪಣ ಮುಖಂಡರು ಸಭೆ ನಡೆಸಿ ಇಮ್ಮಡಿ ಮಹದೇವಸ್ವಾಮಿ ಅವರನ್ನು ಪೀಠದಿಂದ ಇಳಿಸಬೇಕು ಎಂದು ಒತ್ತಾಯಿಸಿದ್ದರು. ಇದರ ನಡುವೆಯೇ ಉತ್ತರಾಧಿಕಾರಿ ಆಯ್ಕೆಗೆ ಸಮಿತಿಯನ್ನೂ ರಚಿಸಲಾಗಿತ್ತು.

ಉತ್ತರಾಧಿಕಾರಿ ನೇಮಕದ ವಿರುದ್ಧಇಮ್ಮಡಿ ಮಹದೇವಸ್ವಾಮಿ ಅವರು 2019ರ ಆಗಸ್ಟ್‌ನಲ್ಲಿ ಕೊಳ್ಲೇಗಾಲದ ಹೆಚ್ಚುವರಿ ಸಿವಿಲ್ ನ್ಯಾಯಾಲಯದ ಮೆಟ್ಟಿಲೇರಿದ್ದರು. ನ್ಯಾಯಾಲಯವು ಉತ್ತರಾಧಿಕಾರಿ ಆಯ್ಕೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿತ್ತು.

ಸೋಮವಾರ ನ್ಯಾಯಾಧೀಶ ಸಂತೋಷ್ ಕೊಠಾರಿ ಅವರು, ‘ಈ ಪ್ರಕರಣ ನ್ಯಾಯಾಲಯದ ವ್ಯಾಪ್ತಿಗೆ ಬರುವುದಿಲ್ಲ’ ಎಂದು ಹೇಳಿ ಅರ್ಜಿಯನ್ನು ವಜಾ ಮಾಡಿದ್ದಾರೆ.

ಇದರಿಂದಾಗಿ ಉತ್ತರಾಧಿಕಾರಿ ಆಯ್ಕೆ ಸುಗಮವಾದಂತಾಗಿದೆ. ಇಮ್ಮಡಿ ಮಹದೇವಸ್ವಾಮಿ ಅವರಿಗೆ ಉನ್ನತ ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.