ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ | ಆಮ್ಲಜನಕ ದುರಂತ: ನಿ. ನ್ಯಾಯಮೂರ್ತಿ ಬಿ.ಎ.ಪಾಟೀಲ ಆಸ್ಪತ್ರೆಗೆ ಭೇಟಿ

Last Updated 31 ಮೇ 2021, 12:15 IST
ಅಕ್ಷರ ಗಾತ್ರ

ಚಾಮರಾಜನಗರ: ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಮೇ 2ರಂದು ರಾತ್ರಿ ಸಕಾಲದಲ್ಲಿ ಆಮ್ಲಜನಕ ಪೂರೈಕೆಯಾಗದೆ ಸಂಭವಿಸಿದ ದುರಂತದ ನ್ಯಾಯಾಂಗ ತನಿಖೆ ನಡೆಸಲು ರಾಜ್ಯ ಸರ್ಕಾರ ನೇಮಿಸಿರುವ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಬಿ.ಎ.ಪಾಟೀಲ ಅವರು ಸೋಮವಾರ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಕಲೆ ಹಾಕಿದರು.

ಮಧ್ಯಾಹ್ನ 2.30ಕ್ಕೆ ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ವೈದ್ಯಕೀಯ ಕಾಲೇಜಿನ ಡೀನ್‌ ಡಾ.ಸಂಜೀವ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಸಿ.ರವಿ, ಜಿಲ್ಲಾ ಸರ್ಜನ್‌ ಡಾ.ಶ್ರೀನಿವಾಸ್‌, ಕೋವಿಡ್‌ ನೋಡೆಲ್‌ ಅಧಿಕಾರಿ ಡಾ.ಮಹೇಶ್‌ ಸೇರಿದಂತೆ ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ಅವರಿಂದ ಮಾಹಿತಿಗಳನ್ನು ಪಡೆದರು.

ಕೋವಿಡ್‌ ಆಸ್ಪತ್ರೆ, ಆಮ್ಲಜನಕ ಪೂರೈಕೆ ಘಟಕ, ಹೊಸದಾಗಿ ಸ್ಥಾಪನೆ ಮಾಡಲಾಗಿರುವ ಆಮ್ಲಜನಕ ಘಟಕಗಳಿಗೂ ಭೇಟಿ ನೀಡಿ ಅವರು ಪರಿಶೀಲನೆ ನಡೆಸಿದರು. ಜಿಲ್ಲಾ ಪ್ರಧಾನ ಮತ್ತು ಸೆಷನ್ಸ್‌ ನ್ಯಾಯಾಧೀಶ ಸದಾಶಿವ ಎಸ್‌.ಸುಲ್ತಾನ್‌ಪುರಿ ಅವರು ಜೊತೆಗಿದ್ದರು.

ಬಿ.ಎ.ಪಾಟೀಲ ಅವರು, ಅರ್ಧ ಗಂಟೆಗೂ ಹೆಚ್ಚು ಕಾಲ ಆಸ್ಪತ್ರೆಯಲ್ಲಿದ್ದರು. ಮಾಧ್ಯಮಗಳೊಂದಿಗೆ ಮಾತನಾಡಲು ಅವರು ನಿರಾಕರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT