ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: 245 ಪ್ರಕರಣ ದೃಢ, ಇಬ್ಬರು ಸಾವು

Last Updated 23 ಏಪ್ರಿಲ್ 2021, 16:08 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ 245 ಹೊಸ ಕೋವಿಡ್‌ ಪ್ರಕರಣಗಳು ವರದಿಯಾಗಿವೆ.‌ಇಬ್ಬರು ಮೃತಪಟ್ಟಿದ್ದಾರೆ. ಒಬ್ಬರು ಶುಕ್ರವಾರವೇ ನಿಧನರಾಗಿದ್ದರು. ಆ ಪ್ರಕರಣವನ್ನು ಶುಕ್ರವಾರದ ವರದಿಯಲ್ಲಿ ಜಿಲ್ಲಾಡಳಿತ ಉಲ್ಲೇಖಿಸಿದೆ.

ಗುರುವಾರಕ್ಕೆ ಹೋಲಿಸಿದರೆ (271) ದೃಢಪಟ್ಟ ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ. ಶುಕ್ರವಾರ 78 ಮಂದಿ ಗುಣಮುಖರಾಗಿದ್ದಾರೆ.

ಸಕ್ರಿಯ ಪ್ರಕರಣಗಳ ಸಂಖ್ಯೆ ಸಾವಿರ ದಾಟಿದ್ದು, 1,129ಕ್ಕೆ ಏರಿದೆ. 788 ಸೋಂಕಿತರು ಹೋಂ ಐಸೊಲೇಷನ್‌ನಲ್ಲಿದ್ದಾರೆ. 38 ಮಂದಿ ಐಸಿಯುನಲ್ಲಿದ್ದಾರೆ.

ಕೊಳ್ಳೇಗಾಲ ತಾಲ್ಲೂಕು ಕೆ.ಗುಂಡಾಪುರದ 40 ವರ್ಷದ ವ್ಯಕ್ತಿಯೊಬ್ಬರು 21ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಗುರುವಾರ ಮೃತಪಟ್ಟಿದ್ದಾರೆ.

ಚಾಮರಾಜನಗರ ತಾಲ್ಲೂಕಿನ ಪಣ್ಯದಹುಂಡಿ ಗ್ರಾಮದ 34 ವರ್ಷದ ಯುವಕ 15ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆಗೆ ಸ್ಪಂದಿಸದೆ ಶುಕ್ರವಾರ ನಿಧನರಾಗಿದ್ದಾರೆ.

ಇದರೊಂದಿಗೆ, ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ನಿಂದ ಮೃತಪಟ್ಟವರ ಸಂಖ್ಯೆ 121ಕ್ಕೆ ಏರಿದೆ. ಅನ್ಯಕಾರಣಗಳಿಂದ 20 ಮಂದಿ ಕೊನೆಯುಸಿರೆಳೆದಿದ್ದಾರೆ.

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 8,757ಕ್ಕೆ ಏರಿದ್ದು, 7487 ಮಂದಿ ಗುಣಮುಖರಾಗಿದ್ದಾರೆ.

ಗುರುವಾರ 1,460 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 1,215 ವರದಿಗಳು ನೆಗೆಟಿವ್‌ ಬಂದಿವೆ. ದೃಢಪಟ್ಟ 245 ಪ್ರಕರಣಗಳಲ್ಲಿ ಚಾಮರಾಜನಗರ ತಾಲ್ಲೂಕಿನ 133 ಪ್ರಕರಣಗಳಿವೆ. ಗುಂಡ್ಲುಪೇಟೆ ತಾಲ್ಲೂಕಿನ 38, ಕೊಳ್ಳೇಗಾಲದ 37, ಹನೂರಿನ 21 ಮತ್ತು ಯಳಂದೂರು ತಾಲ್ಲೂಕಿನಲ್ಲಿ 13 ಪ್ರಕರಣಗಳು ವರದಿಯಾಗಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT