ಸೋಮವಾರ, ಜನವರಿ 17, 2022
19 °C

ಇಳಿದ ಪ್ರಕರಣ, 106 ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಮೂರು ದಿನಗಳಿಂದ ಜಿಲ್ಲೆಯಲ್ಲಿ ಏರುಮುಖವಾಗಿದ್ದ ಕೋವಿಡ್‌ ಪ್ರಕರಣಗಳ ಸಂಖ್ಯೆ ಶುಕ್ರವಾರ ಸ್ವಲ್ಪ ಇಳಿಮುಖವಾಗಿದೆ. 

2,984 ಮಂದಿಯ ಗಂಟಲು ದ್ರವ ಮಾದರಿಗಳ ಪರೀಕ್ಷಾ ವರದಿ ಬಂದಿದ್ದು, 108 ಮಂದಿಗೆ ಸೋಂಕು ಇರುವುದು ಖಚಿತವಾಗಿದೆ. ಈ ಪೈಕಿ ಇಬ್ಬರು ಹೊರ ರಾಜ್ಯದವರು. 106 ಮಂದಿ ಜಿಲ್ಲೆಯವರು. ಶುಕ್ರವಾರ 12 ಮಂದಿ ಸೋಂಕಿನಿಂದ ಗುಣಮುಖರಾಗಿದ್ದಾರೆ. 

ಜಿಲ್ಲೆಯ ಸಕ್ರಿಯ ಪ್ರಕರಣಗಳ ಸಂಖ್ಯೆ 545ಕ್ಕೆ ಏರಿದೆ. ಈ ಪೈಕಿ 154 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದಾರೆ. 

ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 33,245ಕ್ಕೆ ಏರಿದೆ. 32,159 ಮಂದಿ ಗುಣಮುಖರಾಗಿದ್ದಾರೆ. ಕೋವಿಡ್‌ ಹಾಗೂ ಕೋವಿಡ್‌ಯೇತರ ಕಾರಣಗಳಿಂದ 582 ಮಂದಿ ಮೃತಪಟ್ಟಿದ್ದಾರೆ.

ಶುಕ್ರವಾರ ಕೋವಿಡ್‌ ದೃಢ‍ಪಟ್ಟ ಜಿಲ್ಲೆಯ 106 ಮಂದಿಯಲ್ಲಿ ಚಾಮರಾಜನಗರ ತಾಲ್ಲೂಕಿನ 20, ಗುಂಡ್ಲುಪೇಟೆಯ 24, ಕೊಳ್ಳೇಗಾಲದ 31, ಹನೂರಿನ 10 ಹಾಗೂ ಯಳಂದೂರಿನ 21 ಮಂದಿ ಇದ್ದಾರೆ. ಸೋಂಕಿತರ ಪೈಕಿ ಐವರು ಮಕ್ಕಳಿದ್ದಾರೆ. ಯಳಂದೂರು ತಾಲ್ಲೂಕಿನ ಇಬ್ಬರು ಹಾಗೂ ಚಾಮರಾಜನಗರ, ಕೊಳ್ಳೇಗಾಲ ಹಾಗೂ ಹನೂರು ತಾಲ್ಲೂಕುಗಳ ತಲಾ ಒಬ್ಬರು ಇದ್ದಾರೆ.

ವಿದ್ಯಾರ್ಥಿ ನಿಲಯಗಳು ಕೋವಿಡ್ ಕೇರ್ ಕೇಂದ್ರ: ಜಿಲ್ಲೆಯ ವಿವಿಧ ವಿದ್ಯಾರ್ಥಿನಿಲಯಗಳನ್ನು ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಿ ಹಾಗೂ ಅವುಗಳಿಗೆ ನೋಡಲ್ ಅಧಿಕಾರಿಗಳನ್ನು ನೇಮಿಸಿ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಆದೇಶಿಸಿದ್ದಾರೆ.

ಚಾಮರಾಜನಗರದ  ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಮೆಟ್ರಿಕ್ ನಂತರದ ಬಾಲಕಿಯರ ಮತ್ತು ಬಾಲಕರ  ವಿದ್ಯಾರ್ಥಿ ನಿಲಯಗಳು, ಚಾಮರಾಜನಗರದ ಸರ್ಕಾರಿ ಎಂಜಿನಿಯರಿಂಗ್ ಕಾಲೇಜಿನ ಬಾಲಕರ ಎರಡು ವಿದ್ಯಾರ್ಥಿನಿಲಯಗಳನ್ನು (ಜನರಲ್) ಕೋವಿಡ್ ಕೇರ್ ಕೇಂದ್ರಗಳನ್ನಾಗಿ ಪರಿವರ್ತಿಸಿ ಅವರು ಆದೇಶ ಹೊರಡಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು