ಶುಕ್ರವಾರ, ಡಿಸೆಂಬರ್ 4, 2020
24 °C
ಹೊಸ 20 ಪ್ರಕರಣಗಳು ದೃಢ; ಕಾಲೇಜುಗಳ ಆರಂಭದ ಪರಿಣಾಮ?

ಚಾಮರಾಜನಗರ: ದಿಢೀರ್‌ ಹೆಚ್ಚಿದ ಕೋವಿಡ್‌ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್‌ ಪ್ರಕರಣಗಳ ಸಂಖ್ಯೆಯಲ್ಲಿ ದಿಢೀರ್‌ ಏರಿಕೆಯಾಗಿದೆ. 20 ಮಂದಿಗೆ ಸೋಂಕು ದೃಢಪಟ್ಟಿದೆ. ಬಹುತೇಕರು ಕಾಲೇಜು ವಿದ್ಯಾರ್ಥಿಗಳು ಎಂದು ಗೊತ್ತಾಗಿದೆ. 

ಕಾಲೇಜು ಆರಂಭವಾದ ನಂತರ ಎಲ್ಲ ವಿದ್ಯಾರ್ಥಿಗಳು ಹಾಗೂ ಬೋಧಕ ಸಿಬ್ಬಂದಿಗೆ ಕೋವಿಡ್‌ ಪರೀಕ್ಷೆ ನಡೆಸಲಾಗುತ್ತಿದ್ದು, ಇದರಿಂದ ಪ್ರಕರಣಗಳು ವರದಿಯಾಗುತ್ತಿವೆ ಎಂದು ಆರೋಗ್ಯ ಇಲಾಖೆ ಮೂಲಗಳು ತಿಳಿಸಿವೆ. 

ಶುಕ್ರವಾರ 20 ಹೊಸ ಪ್ರಕರಣಗಳೊಂದಿಗೆ 20 ಮಂದಿ ಗುಣಮುಖರಾಗಿದ್ದಾರೆ. ಹೀಗಾಗಿ, ಸಕ್ರಿಯ ಪ್ರಕರಣಗಳಲ್ಲಿ (77) ವ್ಯತ್ಯಾಸವಾಗಿಲ್ಲ. ಸಾವಿನ ಪ್ರಕರಣ ವರದಿಯಾಗಿಲ್ಲ.

ಇದರೊಂದಿಗೆ ಜಿಲ್ಲೆಯ ಪ್ರಕರಣಗಳ ಸಂಖ್ಯೆ 6,258 ಏರಿದೆ. ಗುಣಮುಖರಾದವರ ಸಂಖ್ಯೆ 6,024ಕ್ಕೆ ಏರಿದೆ. ಈವರೆಗೆ 108 ಮಂದಿ ಕೋವಿಡ್‌ನಿಂದ ಮೃತಪಟ್ಟಿದ್ದಾರೆ. 19 ಮಂದಿ ಬೇರೆ ಕಾರಣಕ್ಕೆ ಕೊನೆಯುಸಿರೆಳೆದಿದ್ದಾರೆ. 

ಸಕ್ರಿಯ 77 ಪ್ರಕರಣಗಳಲ್ಲಿ 31 ಮಂದಿ ಹೋಂ ಐಸೊಲೇಷನ್‌ನಲ್ಲಿದ್ದು, 14 ಮಂದಿ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

ಶುಕ್ರವಾರ 1,270 ಮಂದಿಯ ಕೋವಿಡ್‌ ಪರೀಕ್ಷಾ ಫಲಿತಾಂಶ ಬಂದಿದ್ದು, 1,250 ವರದಿಗಳು ನೆಗೆಟಿವ್‌ ಬಂದಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು