ಚಾಮರಾಜನಗರ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾ ಸೋಂಕಿತರ ಪ್ರಮಾಣದಲ್ಲಿ ಗಮನಾರ್ಹವಾಗಿ ಇಳಿಕೆಯಾಗಿದೆ. 343 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದೆ. ಸೋಮವಾರ ಒಟ್ಟು 508 ಹೊಸ ಸೋಂಕಿತರು ಪತ್ತೆಯಾಗಿದ್ದರು.

ಸೋಮವಾರ ಸಂಜೆ 6 ಗಂಟೆಯಿಂದ ಮಂಗಳವಾರ ಸಂಜೆ 6 ಗಂಟೆಯವರೆಗೆ ಒಟ್ಟು 7 ಮಂದಿ ಕೋವಿಡ್ ರೋಗಿಗಳು ಜಿಲ್ಲೆಯಲ್ಲಿ ಮೃತಪಟ್ಟಿದ್ದಾರೆ. ಮಂಗಳವಾರ 359 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಮಂಗಳವಾರ ಒಟ್ಟು 453 ಮಂದಿಯನ್ನು ಹೋಂಐಸೋಲೇಷನ್‌ಗೆ ಕಳುಹಿಸಲಾಗಿದೆ. ಒಟ್ಟು 2,584 ಮಂದಿ ಹೋಂ ಐಸೋಲೇಷನ್‌ಲ್ಲಿಯೇ ಇದ್ದಾರೆ. 48 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 123 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 220 ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 18 ಮಂದಿ ಮಕ್ಕಳೂ ಸೇರಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 112, ಕೊಳ್ಳೇಗಾಲದಲ್ಲಿ 106, ಹನೂರಿನಲ್ಲಿ55, ಗುಂಡ್ಲುಪೇಟೆಯಲ್ಲಿ 46, ಯಳಂದೂರಿನಲ್ಲಿ 20 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.