ಶುಕ್ರವಾರ, ಸೆಪ್ಟೆಂಬರ್ 24, 2021
27 °C

ಕರ್ಫ್ಯೂ: ಚಾಮರಾಜನಗರದಲ್ಲಿ ಮಧ್ಯಾಹ್ನ 2 ಗಂಟೆವರೆಗೆ ಅಗತ್ಯ ವಸ್ತು ಖರೀದಿಗೆ ಅವಕಾಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿದ್ದು, ಅಗತ್ಯ ವಸ್ತುಗಳ ಮಾರಾಟಕ್ಕೆ ಮಧ್ಯಾಹ್ನ 2 ಗಂಟೆಯವರೆಗೆ ಅವಕಾಶ ನೀಡಲಾಗಿದೆ.

ಕರ್ಫ್ಯೂ ಹಿನ್ನೆಲೆಯಲ್ಲಿ ವಾಹನಗಳ ಹಾಗೂ ಜನರ ಓಡಾಟ ಕಡಿಮೆ ಇದೆ. ಕೆಎಸ್ ಆರ್ ಟಿಸಿ ಬಸ್ ಸಂಚಾರ ಎಂದಿನಂತೆ ಇದ್ದು, ಪ್ರಯಾಣಿಕರ ಸಂಖ್ಯೆ ಕಡಿಮೆ ಇವೆ.

ಔಷಧಿ ಅಂಗಡಿಗಳು,ಹಾಲು, ಹಣ್ಣು, ತರಕಾರಿ, ದಿನಸಿ  ಅಂಗಡಿಗಳು ಸೇರಿದಂತೆ ಅಗತ್ಯ ವಸ್ತುಗಳ ಮಾರಾಟ ಅಂಗಡಿಗಳು ತೆರೆದಿವೆ. ಮದ್ಯದಂಗಡಿಗಳನ್ನು ಮ.2 ಗಂಟೆಯವರೆಗೆ ತೆರೆಯುವುದಕ್ಕೆ ಅವಕಾಶ ನೀಡಲಾಗಿದ್ದು, ಪಾರ್ಸೆಲ್ ಮಾತ್ರ ಲಭ್ಯವಿದೆ. ಹೋಟೆಲ್ ಗಳಲ್ಲೂ ಪಾರ್ಸೆಲ್ ಮಾತ್ರ ಲಭ್ಯ.

ಚಾಮರಾಜನಗರ ದಲ್ಲಿ ನಗರಸಭೆ ಅಧಿಕಾರಿಗಳು ವಾರಾಂತ್ಯ ಕರ್ಫ್ಯೂ ಬಗ್ಗೆ ಜಾಗೃತಿ ಮೂಡಿಸುತ್ತಿದೆ.


ಚಾಮರಾಜನಗರದಲ್ಲಿ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರುವ ಕಾರಣಕ್ಕೆ ಅಂಗಡಿ–ಮುಗಟ್ಟುಗಳನ್ನು ಮುಚ್ಚಲಾಗಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು