ಮಂಗಳವಾರ, ಜೂನ್ 15, 2021
25 °C

ಕೋವಿಡ್‌: ಒಂದೇ ದಿನ 794 ಮಂದಿ ಗುಣಮುಖ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಾಮರಾಜನಗರ: ಜಿಲ್ಲೆಯಲ್ಲಿ ಶುಕ್ರವಾರ ಸಂಜೆ 6 ಗಂಟೆಯಿಂದ ಶನಿವಾರ ಸಂಜೆ 6 ಗಂಟೆಯವರೆಗೆ ಒಟ್ಟು 18 ಮಂದಿ ಕೋವಿಡ್ ರೋಗಿಗಳು ಮೃತಪಟ್ಟಿದ್ದಾರೆ. ಮೃತರ ಸಂಖ್ಯೆಯಲ್ಲಿ ಏರಿಕೆ ಕಂಡು ಬಂದರೂ ಸೋಂಕಿತರ ಸಂಖ್ಯೆಯಲ್ಲಿ ಒಂದಿಷ್ಟು ನಿಯಂತ್ರಣ ಕಂಡು ಬಂದಿರುವುದು ಸಮಾಧಾನ ತರಿಸಿದೆ.

ಗುರುವಾರ 799, ಶುಕ್ರವಾರ 622 ಮಂದಿ ಸೋಂಕಿತರಾಗಿದ್ದರು. ಶನಿವಾರ ಇವರ ಸಂಖ್ಯೆ 535ಕ್ಕೆ ಇಳಿಕೆಯಾಗಿದೆ. 794 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಶನಿವಾರ 629 ಮಂದಿಯನ್ನು ಹೋಂ ಐಸೋಲೇಷನ್‌ಗೆ ಕಳುಹಿಸಲಾಗಿದೆ. ಒಟ್ಟು 2,262 ಮಂದಿ ಹೋಂ ಐಸೋಲೇಷನ್‌ಲ್ಲಿಯೇ ಇದ್ದಾರೆ. 50 ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಹೊಸ ಸೋಂಕಿತರ ಪೈಕಿ 76 ಮಂದಿ ಮಾತ್ರವೇ ಪಟ್ಟಣ ಪ್ರದೇಶಕ್ಕೆ ಸೇರಿದವರಾಗಿದ್ದಾರೆ. ಇನ್ನುಳಿದ 459  ಮಂದಿ ವಿವಿಧ ಹಳ್ಳಿಗಳಿಗೆ ಸೇರಿದವರೇ ಆಗಿದ್ದಾರೆ. ಇವರಲ್ಲಿ 34 ಮಂದಿ ಮಕ್ಕಳೂ ಸೇರಿದ್ದಾರೆ.

ಚಾಮರಾಜನಗರ ತಾಲ್ಲೂಕಿನಲ್ಲಿ 180, ಗುಂಡ್ಲುಪೇಟೆಯಲ್ಲಿ 124, ಕೊಳ್ಳೇಗಾಲದಲ್ಲಿ 120, ಹನೂರಿನಲ್ಲಿ 84, ಯಳಂದೂರಿನಲ್ಲಿ 26 ಹಾಗೂ ಹೊರಜಿಲ್ಲೆಯ ಒಬ್ಬರಲ್ಲಿ ಹೊಸದಾಗಿ ಸೋಂಕು ಕಾಣಿಸಿಕೊಂಡಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.