ಮಂಗಳವಾರ, ಜೂನ್ 22, 2021
28 °C

ಚಾಮರಾಜನಗರ: ಕೊರೊನಾ ವೈರಸ್‌ ಸೋಂಕಿತೆ ಆತ್ಮಹತ್ಯೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ಕೊರೊನಾ ವೈರಸ್‌ ಸೋಂಕಿತ ವೃದ್ಧೆಯೊಬ್ಬರು ತಾಲ್ಲೂಕಿನ ದೇಶೀಗೌಡನಪುರ ಗ್ರಾಮದಲ್ಲಿ ಗುರುವಾರ ತಡರಾತ್ರಿ ನೇಣುಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

ಗ್ರಾಮದ ನಿವಾಸಿ ಶಿವಮ್ಮ (70) ಅವರು ಆತ್ಮಹತ್ಯೆ ಮಾಡಿಕೊಂಡವರು.

ಶಿವಮ್ಮ ಹಾಗೂ ಅವರ ಪತಿಗೆ ಕೆಲವು ದಿನಗಳ ಹಿಂದೆ ಕೋವಿಡ್‌ ಇರುವುದು ದೃಢಪಟ್ಟಿತ್ತು. ಪತಿಗೆ ಉಸಿರಾಟದ ತೊಂದರೆ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರನ್ನು ಕೋವಿಡ್‌ ಆಸ್ಪತ್ರೆಗೆ ದಾಖಲು ಮಾಡಿಕೊಂಡಿದ್ದರು. ಶಿವಮ್ಮ ಅವರಿಗೆ ರೋಗ ಲಕ್ಷಣಗಳು ಇಲ್ಲದಿರುವುದರಿಂದ ಹೋಂ ಐಸೊಲೇಷನ್‌ಗೆ ಕಳುಹಿಸಿದ್ದರು. 

‘ದಂಪತಿಗೆ ಮಕ್ಕಳಿಲ್ಲ. ಮನೆಯಲ್ಲೇ ಆರೈಕೆ ಪಡೆಯುತ್ತಿದ್ದ ಶಿವಮ್ಮ ಅವರು ಗುರುವಾರ ತಡ ರಾತ್ರಿ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ’ ಎಂದು ಚಾಮರಾಜನಗರ ಗ್ರಾಮಾಂತರ ಪೊಲೀಸರು ‘ಪ್ರಜಾವಾಣಿ’ಗೆ ತಿಳಿಸಿದ್ದಾರೆ. 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು