ಚಾಮರಾಜನಗರ: ಕೊರೊನಾ ಸೋಂಕಿನಿಂದ ಬಳಲುತ್ತಿದ್ದ ನಗರದ ನಿವಾಸಿ ಅಭಿಷೇಕ್ (25) ಇಲ್ಲಿನ ಜಿಲ್ಲಾಸ್ಪತ್ರೆಯಲ್ಲಿ ಬೆಡ್ ಸಿಗದೆ ಮಂಗಳವಾರ ತಡರಾತ್ರಿ ಮೃತಪಟ್ಟಿದ್ದಾರೆ.

ಇವರಿಗೆ ಕಳೆದ ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ಮಂಗಳವಾರ ರಾತ್ರಿ ಆಸ್ಪತ್ರೆಗೆ ಕರೆತರಲಾಯಿತು. ಆದರೆ, ಆಸ್ಪತ್ರೆ ಸಿಬ್ಬಂದಿ ಬೆಡ್ ಇಲ್ಲ ಎಂದರು ಎಂದು ಸಂಬಂಧಿಕರು ಆರೋಪಿಸಿದ್ದಾರೆ. ಸ್ವಲ್ಪ ಹೊತ್ತಿನ ನಂತರ ಅಭಿಷೇಕ್ ಸ್ಥಳದಲ್ಲೇ ಕುಸಿದು ಮೃತಪಟ್ಟಿದ್ದಾರೆ.

ಸಂಬಂಧಿಕರು ಆಸ್ಪತ್ರೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಡಿಸೆಂಬರ್‌ನಲ್ಲಷ್ಟೇ ಅಭಿಷೇಕ್ ವಿವಾಹ ನೆರವೇರಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.