ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಸಫಾರಿಗೆ ಹೋಗಲು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ

Last Updated 2 ಆಗಸ್ಟ್ 2021, 11:37 IST
ಅಕ್ಷರ ಗಾತ್ರ

ಚಾಮರಾಜನಗರ: ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಕೋವಿಡ್‌ ಹರಡುವುದನ್ನು ನಿಯಂತ್ರಿಸುವುದಾಗಿ ಜಿಲ್ಲಾಡಳಿತವು ಪ್ರವಾಸಿ ತಾಣಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದೆ.

ಈ ಸಂಬಂಧ ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೋಮವಾರ ಆದೇಶ ಹೊರಡಿಸಿದ್ದು, ಆಗಸ್ಟ್‌ 15ರವರೆಗೆ ಇದು ಜಾರಿಯಲ್ಲಿರಲಿದೆ.

ಬಂಡೀಪುರ, ಬಿಆರ್‌ಟಿಯ ಕೆ.ಗುಡಿಯಲ್ಲಿ ಸಫಾರಿ ನಡೆಸಲು 72 ಗಂಟೆಗಳ ಒಳಗೆ ಮಾಡಿಸಿರುವ ಆರ್‌ಟಿಸಿಪಿಆರ್‌ ಪರೀಕ್ಷೆಯ ನೆಗೆಟಿವ್‌ ವರದಿ ಪ್ರಮಾಣ ಪತ್ರ ತೋರಿಸುವುದನ್ನು ಕಡ್ಡಾಯಗೊಳಿಸಲಾಗಿದೆ. ಅದೇ ರೀತಿ ರೆಸಾರ್ಟ್‌, ಹೋಂ ಸ್ಟೇ, ಲಾಡ್ಜ್‌, ಅರಣ್ಯ ಇಲಾಖೆಯ ವಸತಿಗೃಹಗಳಲ್ಲಿ ರಾತ್ರಿ ತಂಗಲು ಆರ್‌ಟಿಪಿಸಿಆರ್‌ ನೆಗೆಟಿವ್‌ ವರದಿಯನ್ನು ತೋರಿಸಬೇಕು.

ಪ್ರಸಿದ್ಧ ಪ್ರವಾಸಿ ತಾಣಗಳಾದ ಭರಚುಕ್ಕಿ ಜಲಪಾತ, ಹೊಗೇನಕಲ್‌ ಜಲಪಾತ ಪ್ರದೇಶಗಳಿಗೆ ಶನಿವಾರ ಮತ್ತು ಭಾನುವಾರ ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧಿಸಲಾಗಿದೆ.

ದರ್ಶನಕ್ಕೆ ಮಾತ್ರ ಅವಕಾಶ: ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಹದೇಶ್ವರ ಬೆಟ್ಟದ ಮಲೆ ಮಹದೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ಎಲ್ಲ ದೇವಾಲಯಗಳಲ್ಲಿ ವಾರದಲ್ಲಿ ಐದು ದಿನ ದೇವರ ದರ್ಶನಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಶನಿವಾರ ಮತ್ತು ಭಾನುವಾರ ಭಕ್ತರ ಪ್ರವೇಶ ನಿರ್ಬಂಧಿಸಲಾಗಿದೆ. ದಾಸೋಹ ವ್ಯವಸ್ಥೆ, ಪ್ರಸಾದ, ಮುಡಿ ಸೇವೆ, ವಿವಿಧ ಉತ್ಸವಗಳು ಸೇರಿದಂತೆ ಎಲ್ಲ ಸೇವೆಗಳನ್ನು ರದ್ದುಪಡಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT