ಸೋಮವಾರ, ಜನವರಿ 17, 2022
27 °C

ಚಾಮರಾಜನಗರ: ವೈದ್ಯಕೀಯ ಕಾಲೇಜಿನಲ್ಲಿ ಏಳು ಮಂದಿಗೆ ಕೋವಿಡ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಚಾಮರಾಜನಗರ: ನಗರದ ಹೊರವಲಯದ ಯಡಬೆಟ್ಟದಲ್ಲಿರುವ ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ (ಸಿಮ್ಸ್‌) ಸೋಮವಾರ ಏಳು ಮಂದಿಗೆ ಕೋವಿಡ್‌ ಇರುವುದು ದೃಢಪಟ್ಟಿದೆ. 

ಈ ಪೈಕಿ ಆರು ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ಒಬ್ಬರು ಹೌಸ್‌ ಸರ್ಜನ್‌. ಹತ್ತು ದಿನಗಳ ಅವಧಿಯಲ್ಲಿ ವೈದ್ಯಕೀಯ ಕಾಲೇಜಿನಲ್ಲಿ ಒಂಬತ್ತು ಪ್ರಕರಣಗಳು ವರದಿಯಾಗಿವೆ. ಸಂಸ್ಥೆಯ ಡೀನ್‌ ಹಾಗೂ ನಿರ್ದೇಶಕ ಡಾ.ಜಿ.ಎಂ.ಸಂಜೀವ್‌ ಅವರಿಗೂ ಕೋವಿಡ್‌ ದೃಢಪಟ್ಟು, ಈಗ ಚೇತರಿಸಿಕೊಂಡಿದ್ದಾರೆ. ಅವರು ಹೋಂ ಐಸೊಲೇಷನ್‌ನಲ್ಲಿದ್ದಾರೆ ಎಂದು ವೈದ್ಯಕೀಯ ಕಾಲೇಜಿನ ಮೂಲಗಳು ತಿಳಿಸಿವೆ.

ಓದಿ: 

ಕಂಟೈನ್‌ಮೆಂಟ್‌ ಝೋನ್‌: ಈ ಬಗ್ಗೆ ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಕೆ.ಎಂ.ವಿಶ್ವೇಶ್ವರಯ್ಯ ಅವರು, ‘ಸೋಮವಾರ ಆರು ವಿದ್ಯಾರ್ಥಿಗಳು ಹಾಗೂ ಒಬ್ಬರು ವೈದ್ಯರಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ಎಲ್ಲರೂ ಹಾಸ್ಟೆಲ್‌ ವಿದ್ಯಾರ್ಥಿಗಳು. ಈಗ ಅವರು ಕೋವಿಡ್‌ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ’ ಎಂದರು.

‘ಹಾಸ್ಟೆಲ್‌ನಲ್ಲಿ 650 ವಿದ್ಯಾರ್ಥಿಗಳಿದ್ದು, ಎಲ್ಲರ ಆರ್‌ಟಿಪಿಸಿಆರ್‌ ಪರೀಕ್ಷೆ ನಡೆಸಲು ಕ್ರಮ ಕೈಗೊಳ್ಳಲಾಗಿದೆ. ಮಂಗಳವಾರಕ್ಕೆ ಎಲ್ಲರ ಪರೀಕ್ಷೆಯೂ ಮುಗಿಯಲಿದೆ. ಕಂಟೈನ್‌ಮೆಂಟ್‌ ಝೋನ್‌ ಮಾಡಲಾಗಿದೆ. ಸೋಂಕು ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ’ ಎಂದು ಅವರು ಮಾಹಿತಿ ನೀಡಿದರು.

ಓದಿ: 

28ಕ್ಕೆ ಏರಿದ ಸಕ್ರಿಯ ಪ್ರಕರಣ: ಈ ಮಧ್ಯೆ, ಜಿಲ್ಲೆಯಲ್ಲಿ ಕೋವಿಡ್‌ ಸಕ್ರಿಯ ಪ್ರಕರಣಗಳ ಸಂಖ್ಯೆ 28ಕ್ಕೆ ಏರಿದೆ. ಸೋಮವಾರ ಒಂದೇ ದಿನ ಎಂಟು ಪ್ರಕರಣಗಳು ದೃಢಪಟ್ಟಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು