ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಾಮರಾಜನಗರ: ಗಾಂಧಿವಾದ ಸಿ.ಪಿ.ಹುಚ್ಚೇಗೌಡ ನಿಧನ

Published 25 ಜನವರಿ 2024, 13:09 IST
Last Updated 25 ಜನವರಿ 2024, 13:09 IST
ಅಕ್ಷರ ಗಾತ್ರ

ಚಾಮರಾಜನಗರ: ನಗರದ ಗಾಂಧಿವಾದಿ, ಸಮಾಜ ಸೇವಕ ಸಿ.ಪಿ.ಹುಚ್ಚೇಗೌಡ (91) ಅವರು ಗುರುವಾರ ಬೆಳಿಗ್ಗೆ ನಿಧನರಾದರು. 

ಗುತ್ತಿಗೆದಾರರಾಗಿದ್ದ ಅವರು ಸಾಮಾಜಿಕ, ಧಾರ್ಮಿಕ ಹಾಗೂ ಸಾಹಿತ್ಯಿಕ ಕಾರ್ಯಕ್ರಮಗಳಿಗೆ ಸದಾ ಬೆಂಬಲ–ನೆರವು ನೀಡುತ್ತಿದ್ದರು. ಬಿಳಿಗಿರಿರಂಗನಬೆಟ್ಟದಲ್ಲಿದ್ದ ಗಾಂಧಿಭವನದ ಆದಿವಾಸಿ ಕೇಂದ್ರದ ಸಲಹಾ ಸಮಿತಿ ಸದಸ್ಯರೂ ಆಗಿದ್ದರು. 

ಅವಿವಾಹಿತರಾಗಿದ್ದ ಅವರು, ಪ್ರೊ.ಚಿಂತಾಮಣಿ ಅವರೊಂದಿಗೆ ಸೇರಿ ಚಾಮರಾಜನಗರ –ಮೆಟ್ಟುಪಾಳ್ಯಂ ರೈಲ್ವೆ ಯೋಜನೆಗೆ ಸಂಬಂಧಿಸಿದಂತೆ ಮಾರ್ಗ ಸಮೀಕ್ಷೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು.

ಚಾಮರಾಜನಗರದಲ್ಲಿ ಸಂಜೆ ಅಂತ್ಯಕ್ರಿಯೆ ನೆರವೇರಿತು. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT