ಚಾಮರಾಜನಗರ: ಯುವಜನತೆ ದುಶ್ಚಟಗಳಿಂದ ದೂರವಿರಲು ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಳ್ಳಬೇಕು, ಕ್ರೀಡೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸಹಕಾರಿ ಎಂದು ರಂಗಕರ್ಮಿ ಕೆ.ವೆಂಕಟರಾಜು ಅಭಿಪ್ರಾಯಪಟ್ಟರು.

ನಗರದ ವರ್ತಕರ ಭವನದ ಹಿಂಭಾಗ ಲಯನ್ಸ್ ಕ್ರಿಕೆಟ್ ಅಕಾಡೆಮಿ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಎಸ್ಎಸ್ಎಲ್ಸಿ, ಪಿಯುಸಿವರೆಗೆ ಓದಿ ನಂತರ ಶಿಕ್ಷಣ ಮುಂದುವರಿಸಲಾಗದೆ ಬಹಳಷ್ಟು ಯುವಜನತೆ ನಿರುದ್ಯೋಗಿಗಳಾಗಿ ದುಶ್ಚಟಗಳಿಗೆ ಬಲಿಯಾಗುತ್ತಿದ್ದಾರೆ. ಕ್ರೀಡೆಗಳತ್ತ ಆಸಕ್ತಿ ಬೆಳೆಸಿಕೊಂಡರೆ ವ್ಯಸನಗಳಿಂದ ದೂರ ಇರಬಹುದು ಎಂದರು.

ಕ್ರೀಡಾ ಕ್ಷೇತ್ರದಲ್ಲಿ ಉದ್ಯೋಗಾವಕಾಶಗಳು ಹೆಚ್ಚುತ್ತಿದ್ದು ಉದ್ಯೋಗದಲ್ಲಿ ಮೀಸಲಾತಿ ನೀಡಲಾಗುತ್ತಿದೆ. ಹಾಗಾಗಿ, ಕ್ರೀಡೆಯತ್ತ ಹೆಚ್ಚು ಒಲವು ಹೊಂದಿರುವ ಪ್ರತಿಭೆಗಳು ಕ್ರೀಡಾ ಕ್ಷೇತ್ರದಲ್ಲಿ ಬದುಕು ರೂಪಿಸಿಕೊಳ್ಳುವ ಅವಕಾಶ ಇದೆ ಎಂದು ಸಲಹೆ ನೀಡಿದರು.

ಸಂತೇಮರಹಳ್ಳಿ ಬಳಿ ಬಿಲ್ವಿದ್ಯೆ ಮತ್ತು ಕತ್ತಿವರಸೆ ತರಬೇತಿ ಕೇಂದ್ರ ಸ್ಥಾಪಿಸಲಾಗಿದ್ದು ಇಲ್ಲಿನ ವಿದ್ಯಾರ್ಥಿಗಳು ಅಂತರರಾಷ್ಟ್ರೀಯ ಮಟ್ಟದಲ್ಲೂ ಸ್ಪರ್ಧಿಸಿ ಪದಕ ಪಡೆದಿದ್ದಾರೆ. ಕ್ರೀಡಾ ಪ್ರತಿಭೆಗಳಿಗೆ ಉತ್ತೇಜನ ನೀಡಲು ಕ್ರೀಡಾ ತರಬೇತಿ ಕೇಂದ್ರಗಳು ಮುಖ್ಯವಾಗಿದ್ದು ಇದಕ್ಕೆ ಪೂರಕವಾಗಿ ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ಜಿಲ್ಲಾ ಕಾರ್ಯದರ್ಶಿ ಬ್ರಿಜೇಶ್ ಅವರು ಕ್ರಿಕೆಟ್ ತರಬೇತಿ ಅಕಾಡೆಮಿ ಸ್ಥಾಪಿಸಿರುವುದು ಶ್ಲಾಘನೀಯ ಎಂದರು.

ಲಯನ್ಸ್ ಕ್ರಿಕೆಟ್ ಅಕಾಡೆಮಿ ಉದ್ಘಾಟಿಸಿದ ನಗರಸಭೆ ಅಧ್ಯಕ್ಷ ಸುರೇಶ್ ಮಾತನಾಡಿ, ಕ್ರೀಡೆಯಲ್ಲಿ ಹಿಂದುಳಿದಿರುವ ಜಿಲ್ಲೆಯಲ್ಲಿ ಕ್ರಿಕೆಟ್ ಪ್ರತಿಭೆಗಳನ್ನು ಉತ್ತೇಜಿಸಲು ಲಯನ್ಸ್ ಸಂಸ್ಥೆಯು ಕ್ರಿಕೆಟ್ ಅಕಾಡೆಮಿ ಸ್ಥಾಪಿಸಿರುವುದು ಹಾಗೂ ಕೆಎಸ್ಸಿಎ ಸ್ಟಾರ್ ಕ್ರಿಕೆಟರ್ಸ್ ಸಹಯೋಗ ನೀಡಿರುವುದು ಶ್ಲಾಘನೀಯ ಎಂದರು.

ಸ್ಟಾರ್ ಕ್ರಿಕೆಟರ್ಸ್ ಕಾರ್ಯದರ್ಶಿ ಬ್ರಿಜೇಶ್ ಒಲಿವೆರಾ ಮಾತನಾಡಿ, ಜನಪದ ಕ್ಷೇತ್ರದಲ್ಲಿ ಶ್ರೀಮಂತವಾಗಿರುವ ಚಾಮರಾಜನಗರ ಕ್ರೀಡಾ ಕ್ಷೇತ್ರದಲ್ಲಿ ಬಹಳ ಹಿಂದುಳಿದಿದ್ದು, ಇಲ್ಲಿನ ಮಕ್ಕಳಿಗೆ ಕ್ರಿಕೆಟ್ ತರಬೇತಿ ನೀಡುವ ಕಾರ್ಯವನ್ನು ಹಲವು ವರ್ಷಗಳಿಂದ ಮಾಡಿಕೊಂಡು ಬಂದಿದ್ದೇನೆ. ಸ್ಟಾರ್ ಕ್ರಿಕೆಟರ್ಸ್ ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಂಗ ಸಂಸ್ಥೆಯಾಗಿದ್ದು ಲಯನ್ಸ್ ಕ್ರಿಕೆಟ್ ಅಕಾಡೆಮಿ ಮೂಲಕ ಗುಣಮಟ್ಟದ ತರಬೇತಿ ನೀಡಲಾಗುವುದು ಎಂದರು.

ಬೆಳಿಗ್ಗೆ 6.30 ರಿಂದ 8.30, ಸಂಜೆ 4 ರಿಂದ 6 ಗಂಟೆ, ಸಂಜೆ 6 ರಿಂದ 8ರವರೆಗೆ ತರಬೇತಿ ನೀಡಲಾಗುವುದು. ಅಕಾಡೆಮಿಯಿಂದ ಪ್ರಥಮ ಬಾರಿಗೆ ಆಸ್ಟೊ ಟರ್ಫ್ ನೆಲಹಾಸಿನಲ್ಲಿ ಹಾಗೂ ಹೊನಲು ಬೆಳಕಿನಲ್ಲಿ ತರಬೇತಿ ನೀಡಲಾಗುತ್ತಿದೆ. ಕೆಡಿಮೆ ವೆಚ್ಚದಲ್ಲಿ ತರಬೇತಿ ದೊರೆಯಲಿದೆ. ಕ್ರಿಕೆಟ್ ಕಲಿಯುವ ಆಸಕ್ತಿ ಇರುವ ಹೆಣ್ಣು ಮಕ್ಕಳಿಗೆ ಶೇ 50 ರಿಯಾಯಿತಿ ಇದೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಕ್ರಿಕೆಟ್ನಲ್ಲಿ ಆಸಕ್ತಿ ಇರುವ ಐವರು ಬಡ ಮಕ್ಕಳಿಗೆ ಉಚಿತ ತರಬೇತಿ ನೀಡಲಾಗುವುದು ಎಂದರು.

ನಗರಸಭಾ ಉಪಾಧ್ಯಕ್ಷೆ ಮಮತಾ ಬಾಲಸುಬ್ರಹ್ಮಣ್ಯ, ಸದಸ್ಯರಾದ ಕುಮುದಾ ಕೇಶವಮೂರ್ತಿ, ಆರ್.ಪಿ ನಂಜುಂಡಸ್ವಾಮಿ, ಸ್ಟಾರ್ ಕ್ರಿಕೆಟರ್ಸ್ ಅಧ್ಯಕ್ಷ ಎರಿಕ್ ಒಲಿವೆರಾ, ಪತ್ರಕರ್ತ ಎ.ಡಿಸಿಲ್ವ, ಸೈಮನ್ ಡಿಸಿಲ್ವ, ತರಬೇತುದಾರರಾದ ಪುಶಾಂತ್ ಕೆಂಬಾರ್, ಕಿಶನ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.