ಸಂತೇಮರಹಳ್ಳಿ: ಸಮೀಪದ ಬಸವಟ್ಟಿ ಗ್ರಾಮದ ಮನೆಯೊಂದರಲ್ಲಿ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ಮನೆ ಸುಟ್ಟು ಹೋಗಿರುವ ಸ್ಥಳಕ್ಕೆ ಶಾಸಕ ಎ.ಆರ್.ಕೃಷ್ಣಮೂರ್ತಿ ಈಚೆಗೆ ಭೇಟಿ ನೀಡಿದರು.

ಈ ಸಂಧರ್ಭದಲ್ಲಿ ಅವರು ಮಾತನಾಡಿ, ಮನೆ ಸಂಪೂರ್ಣವಾಗಿ ಸುಟ್ಟು ಹೋಗಿದೆ. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ಮನೆಯಲ್ಲಿ ವಾಸ ಮಾಡಲು ಸಾಧ್ಯವಾಗುತ್ತಿಲ್ಲ. ಗ್ರಾಮ ಪಂಚಾಯಿತಿ ವತಿಯಿಂದ ಮನೆ ಮುಂಭಾಗದಲ್ಲಿರುವ ಜಾಗದಲ್ಲಿ ಕುಟುಂಬಸ್ಥರು ವಾಸಮಾಡುವ ನಿಟ್ಟಿನಲ್ಲಿ ತಾತ್ಕಾಲಿಕ ಶೆಡ್ ನಿರ್ಮಿಸಿಕೊಡಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಅವರಿಗೆ ದೂರವಾಣಿ ಕರೆ ಮಾಡಿ ಸೂಚನೆ ನೀಡಿದರು.

ಕುಟುಂಬಸ್ಥರಿಗೆ ಈಗ ತಾತ್ಕಾಲಿಕವಾಗಿ ಊಟದ ವ್ಯವಸ್ಥೆ ಹಾಗೂ ಮನೆಗೆ ಬೇಕಾದ ಸಾಮಾನುಗಳು, ಆಹಾರ ಪದಾರ್ಥಗಳನ್ನು ಕೂಡಲೇ ಒದಗಿಸಿಕೊಡಬೇಕೆಂದು ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮೇಘನಾ ಅವರಿಗೆ ಸೂಚನೆ ನೀಡಿದರು.

ತಹಶೀಲ್ದಾರ್ ಗಿರಿಜಾ ಮಾತನಾಡಿ, ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆಗೆ ಹಾನಿಯಾಗಿರುವ ಹಿನ್ನೆಲೆಯಲ್ಲಿ ಸಂಬಂಧಪಟ್ಟ ಗ್ಯಾಸ್ ಕಂಪನಿ ಮೂಲಕ ವಿಮೆ ಪರಿಹಾರ ಒದಗಿಸಿಕೊಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಶಾಸಕ ಎ.ಆರ್.ಕೃಷ್ಣಮೂರ್ತಿ ಅವರು ವೈಯಕ್ತಿಕ ಪರಿಹಾರ ನೀಡಿದರು. ತಾಲ್ಲೂಕು ಸಮಾಜ ಕಲ್ಯಾಣಾಧಿಕಾರಿ ಮೇಘನಾ, ಆರ್ಐ ಸತೀಶ್, ಗ್ರಾಮ ಆಡಳಿತಾಧಿಕಾರಿಗಳಾದ ಶಾಹೀರಾ, ರೇವಣ್ಣ, ಚಾಮೂಲ್ ನಿರ್ದೇಶಕ ಕಮರವಾಡಿ ರೇವಣ್ಣ, ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಯೋಗೇಂದ್ರ, ಗ್ರಾಮ ಪಂಚಾಯಿತಿ ಸದಸ್ಯ ಮಲ್ಲೇಶಪ್ಪ, ಮಾಜಿ ಸದಸ್ಯ ಬಸವಣ್ಣ, ಮುಖಂಡರಾದ ಶಂಕರ್ಮೂರ್ತಿ, ಸಂತೇಮರಹಳ್ಳಿ ಪಶಿ, ಬಿ.ಎನ್.ಸಿದ್ದರಾಜು, ವಿಲಿಯಂ, ರಮೇಶ್, ಗಿರೀಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.