ಬುಧವಾರ, ಏಪ್ರಿಲ್ 21, 2021
27 °C

ಸಿಲಿಂಡರ್ ಸೋರಿಕೆ: ಮನೆ ಸಂಪೂರ್ಣ ಭಸ್ಮ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಳ್ಳೇಗಾಲ: ಇಲ್ಲಿನ ದೇವಾಂಗ ಪೇಟೆಯ ಮನೆಯೊಂದರಲ್ಲಿ ಗ್ಯಾಸ್ ಸಿಲಿಂಡರ್ ಸೋರಿಕೆಯಿಂದಾಗಿ ಮನೆ ಸಂಪೂರ್ಣ ಭಸ್ಮವಾಗಿದೆ.

ಬಡಾವಣೆಯ ನಿವಾಸಿ ಸಂಜೀವಮ್ಮ ಅವರ ಮನೆಯಲ್ಲಿ ಭಾನುವಾರ ಬೆಳಿಗ್ಗೆ ಗ್ಯಾಸ್ ಸಿಲಿಂಡರ್ ಸೋರಿಕೆಯಾಗಿ, ಹೆಂಚಿನ ಚಾವಣಿಗೆ ಬೆಂಕಿ ಬಿದ್ದಿದೆ. ಈ ಸಮಯದಲ್ಲಿ ಸಂಜೀವಮ್ಮ ಅವರು ಮನೆಯಲ್ಲಿರಲಿಲ್ಲ. ಸಣ್ಣ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದನ್ನು ಗಮನಿಸಿದ ಸ್ಥಳೀಯರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಿದ್ದಾರೆ.

ಈ ಅನಾಹುತದಿಂದ ಯಾವುದೇ ಜೀವ ಹಾನಿ ಆಗಿಲ್ಲ. ಆದರೆ ಮನೆಯಲ್ಲಿದ್ದ ವಸ್ತುಗಳು ಸಂಪೂರ್ಣ ಭಸ್ಮವಾಗಿದೆ. ಚಾವಣಿ ಕುಸಿದಿದೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು