ಹನೂರು: ಕಾವೇರಿ ನದಿಯಿಂದ ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಗೆ ಒತ್ತಾಯಿಸಿ ತಾಲೂಕಿನ ವಡಕೆಹಳ್ಳ ಗ್ರಾಮದಲ್ಲಿ ನಡೆಯುತ್ತಿರುವ ಅನಿರ್ದಿಷ್ಟ ಅಹೋರಾತ್ರಿ ಧರಣಿ 101ನೇ ದಿನಕ್ಕೆ ಕಾಲಿಟ್ಟಿದೆ.

ಕಾವೇರಿ ನದಿಯಿಂದ ದಂಟಳ್ಳಿ ಮಾರ್ಗವಾಗಿ ಏತ ನೀರಾವರಿ ಸೌಲಭ್ಯ ಕಲ್ಪಿಸುವಂತೆ ಹಾಗೂ ಇತರೆ ಬೇಡಿಕೆಗಳನ್ನು ಈಡೇರಿಸುವಂತೆ ರೈತರು, ಮಹಿಳೆಯರು, ಮಕ್ಕಳು 100 ದಿನಗಳಿಂದ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಆದರೂ ರೈತರ ಸಮಸ್ಯೆ ಬಗೆಹರಿಸುವಲ್ಲಿ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಧರಣಿ ನಿರತರು ದೂರಿದ್ದಾರೆ.

ಶಾಸಕರು ಹಾಗೂ ಜಿಲ್ಲಾಧಿಕಾರಿಗಳು ಧರಣಿ ಸ್ಥಳಕ್ಕೆ ಬಂದು ಸಂಕ್ರಾಂತಿ ಹಬ್ಬದ ಒಳಗೆ ಯೋಜನೆಗೆ ಡಿಪಿಆರ್ ಮಾಡಿಸುವುದಾಗಿ ಭರವಸೆ ನೀಡಿದ್ದರು. ಆದರೆ, ಗಡುವು ಮೀರಿದ್ದು ಭರವಸೆ ಹುಸಿಯಾಗಿದೆ. 100 ದಿನ ಹೋರಾಟ ನಡೆದರೂ ಸಂಸದರಾಗಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಲಿ ಸ್ಥಳಕ್ಕೆ ಭೇಟಿನೀಡಿಲ್ಲ ಎಂದು ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು .

ಪ್ರೊ.ಎಂ.ಡಿ.ನಂಜುಂಡಸ್ವಾಮಿ ಅವರ ಭಾವಚಿತ್ರಕ್ಕೆ ಹಸಿರು ನಮನ ಸಲ್ಲಿಸಿ ಮಾತನಾಡಿದ ರೈತ ಅರ್ಪುದರಾಜ್ ಮಾತನಾಡಿ, ಹನೂರು ಭಾಗದ ಅಂತರ್ಜಲ ಸಮಸ್ಯೆಗೆ ಪರಿಹಾರ ನೀಡುವಲ್ಲಿ ಜನಪ್ರತಿನಿಧಿಗಳು ಅಧಿಕಾರಿಗಳು ವಿಫಲರಾಗಿದ್ದಾರೆ. ಮುಂದಿನ ದಿನಗಳಲ್ಲಿ ಸಮಸ್ಯೆಗೆ ರೈತರೇ ಪರಿಹಾರ ಕಂಡುಕೊಳ್ಳುವ ಮಾರ್ಗ ಕಂಡುಕೊಳ್ಳುವ ಅಗತ್ಯವಿದೆ. ದಂಟಳ್ಳಿ ಏತ ನೀರಾವರಿ ಯೋಜನೆ ಜಾರಿಯಾದರೆ ಬರಪೀಡಿತ ಹನೂರು ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚುತ್ತದೆ ಹಾಗೂ ಕಾವೇರಿ ವನ್ಯಜೀವಿ ವಲಯ ಹಾಗೂ ಮಲೈ ಮಹದೇಶ್ವರ ವನ್ಯಜೀವಿ ವಲಯದಲ್ಲಿರುವ ಅಸಂಖ್ಯಾತ ಜೀವಿಗಳಿಗೆ ಮತ್ತು ಜನ ಜಾನುವಾರುಗಳಿಗೆ ಜೀವ ಜಲ ದೊರೆಯುತ್ತದೆ ಎಂದರು.

ಧರಣಿಯಲ್ಲಿ ಪುಟ್ಟಸ್ವಾಮಿ, ಸೂಸೈ ಮಾಣಿಕ್ಯಮ್, ಪೀಟರ್, ಪೌಲ್ ಧರ್ಮರಾಜ್, ಜಾನ್ ಪೌಲ್, ಇಸಾಕ್, ಸಂದನಪಾಳ್ಯ ರಾಜ, ಸೂಸೈರಾಜ್, ವಲ್ಲಬದಾಸ್, ಸವರಿಯಪ್ಪನ, ಜೋಸೆಫ್, ಬಿದರಹಳ್ಳಿ ಮಾದಮ್ಮಾಳ್ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.