ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌ 3ನೇ ಅಲೆ: ಆರೋಗ್ಯ ಸಿಬ್ಬಂದಿಗೆ ತರಬೇತಿ ನೀಡಿ: ಡಿಸಿ ಡಾ.ಎಂ.ಆರ್.ರವಿ

ವೈದ್ಯರು, ಅಧಿಕಾರಿಗಳೊಂದಿಗೆ ಸಭೆ
Last Updated 13 ಜುಲೈ 2021, 4:11 IST
ಅಕ್ಷರ ಗಾತ್ರ

ಚಾಮರಾಜನಗರ: ಸಂಭಾವ್ಯ ಕೋವಿಡ್‌ ಮೂರನೇ ಅಲೆ ಎದುರಿಸಲು ಆರೋಗ್ಯ ಇಲಾಖೆಯ ಸಿಬ್ಬಂದಿಗೂ ತ್ವರಿತವಾಗಿ ತರಬೇತಿ ನೀಡಬೇಕು ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚನೆ ನೀಡಿದರು.

ಕೋವಿಡ್ ಮೂರನೇ ಅಲೆಯನ್ನು ಎದುರಿಸುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಸಿದ್ಧತೆ ಹಾಗೂ ಪ್ರಸ್ತುತ ಕೋವಿಡ್ ಪ್ರಕರಣಗಳು, ಲಸಿಕೆ ಕಾರ್ಯದ ಕುರಿತ ಸಭೆಯಲ್ಲಿ ಮಾತನಾಡಿದ ಅವರು, ‘ಮೂರನೇ ಅಲೆ ಎದುರಿಸುವ ನಿಟ್ಟಿನಲ್ಲಿಜಿಲ್ಲೆಯಲ್ಲಿ ಆಶಾ, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರು, ಆರೋಗ್ಯ ಇಲಾಖೆಯ ಶುಶ್ರೂಕರಿಗೆ ಈಗಾಗಲೇ ವಿಶೇಷ ತರಬೇತಿ ನೀಡಲಾಗಿದೆ. ಮಕ್ಕಳ ಆಸ್ಪತ್ರೆಯ ನಿಗಾ ಘಟಕ, ವೆಂಟಿಲೇಟರ್‌ಗಳ ನಿರ್ವಹಣೆ, ಇತರೆ ಚಿಕಿತ್ಸಾ ವಿಧಾನಗಳ ಕುರಿತ ತರಬೇತಿಯನ್ನುಆರೋಗ್ಯ ಇಲಾಖೆಯ ಉಳಿದ ಸಿಬ್ಬಂದಿಗೆತುರ್ತಾಗಿ ಏರ್ಪಡಿಸಬೇಕು’ ಎಂದರು.

‘ಕೋವಿಡ್ ಮೂರನೇ ಅಲೆ ಎದುರಿಸುವ ಕುರಿತು ಈಗಾಗಲೇ ತರಬೇತಿ ಪಡೆದಿರುವವರು ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ಜಾಗೃತಿ ಮೂಡಿಸಲಿದ್ದಾರೆ. ಮಹಿಳಾ ಮತ್ತು ಕಲ್ಯಾಣ ಇಲಾಖೆಯು ಸಹ ತರಬೇತಿ ನೀಡಿದ್ದು ಮಕ್ಕಳ ಆರೋಗ್ಯ ರಕ್ಷಣೆಗೆ ಅರಿವು ಉಂಟುಮಾಡುವಲ್ಲಿ ತೊಡಗಿಕೊಳ್ಳಲಿವೆ’ ಎಂದರು.

₹3.5 ಕೋಟಿ ವೆಚ್ಚದಲ್ಲಿ ಖರೀದಿ: ಕೋವಿಡ್ ನಿಯಂತ್ರಣಕ್ಕಾಗಿ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಅಗತ್ಯ ಸೌಲಭ್ಯ ಕಲ್ಪಿಸಲಾಗುತ್ತಿದೆ. ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಆಮ್ಲಜನಕ ಘಟಕಗಳು ನಿರ್ಮಾಣವಾಗುತ್ತಿವೆ. ₹3.5 ಕೋಟಿ ವೆಚ್ಚದಲ್ಲಿ ಕೋವಿಡ್ ವೈದ್ಯಕೀಯ ಚಿಕಿತ್ಸೆಗಾಗಿ ವೆಂಟಿಲೇಟರ್, ಆಂಬುಲೆನ್ಸ್ ಇತರೆ ಸಾಧನಗಳ ಖರೀದಿ ಪ್ರಕ್ರಿಯೆ ಕೈಗೊಳ್ಳಲಾಗಿದೆ. ಸಂಸದರು ಹಾಗೂ ಶಾಸಕರ ಪ್ರದೇಶಾಭಿವೃದ್ದಿ ಅನುದಾನವನ್ನೂ ಕೋವಿಡ್ ಚಿಕಿತ್ಸೆ ಸೌಲಭ್ಯಗಳನ್ನು ಒದಗಿಸಲು ಬಳಕೆ ಮಾಡಿಕೊಳ್ಳಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು.

‘ಪ್ರಸ್ತುತಕೋವಿಡ್ ಪ್ರಕರಣಗಳು ವರದಿಯಾಗುತ್ತಿರುವ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಯನ್ನು ಹೆಚ್ಚಿಸಬೇಕು. ಪತ್ತೆ ಹಚ್ಚುವ ಕಾರ್ಯ ಚುರುಕುಗೊಳಿಸಬೇಕು.ಲಸಿಕಾ ಕಾರ್ಯ ಪ್ರಗತಿ ವೇಗವಾಗಿ ಆಗಬೇಕು’ ಎಂದು ಅವರು ಹೇಳಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಉಪವಿಭಾಗಾಧಿಕಾರಿ ಡಾ. ಗಿರೀಶ್ ದಿಲೀಪ್ ಬದೋಲೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಎಂ.ಸಿ. ರವಿ, ವೈದ್ಯಕೀಯ ಕಾಲೇಜಿನ ಡೀನ್ ಡಾ. ಸಂಜೀವ್, ಜಿಲ್ಲಾ ಆಸ್ಪತ್ರೆಯ ನೋಡೆಲ್ ಅಧಿಕಾರಿ ಡಾ.ಮಹೇಶ್, ಆರ್.ಸಿ.ಹೆಚ್.ಅಧಿಕಾರಿ ಡಾ. ವಿಶ್ವೇಶ್ವರಯ್ಯ, ಜಿಲ್ಲಾ ಸರ್ಜನ್ ಡಾ. ಶ್ರೀನಿವಾಸ ಇತರರು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT