ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸೋಂಕು ನಿಯಂತ್ರಣಕ್ಕೆ ನಿಗಾ ವಹಿಸಲು ಸೂಚನೆ

ಆರೋಗ್ಯ ಅಧಿಕಾರಿಗಳು, ವಿವಿಧ ನೋಡೆಲ್ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಸಭೆ
Last Updated 2 ಆಗಸ್ಟ್ 2020, 15:30 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವ ಪ್ರದೇಶಗಳಲ್ಲಿ ತೀವ್ರವಾದ ಕಣ್ಗಾವಲು ವ್ಯವಸ್ಥೆ ಮೂಲಕ ನಿಗಾ ವಹಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಕ್ರಮ ತೆಗೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚನೆ ನೀಡಿದರು.

ಕೋವಿಡ್-19 ನಿಯಂತ್ರಣ ಹಾಗೂ ಮುಂಜಾಗ್ರತಾ ಕ್ರಮಗಳ ಸಂಬಂಧ ಆರೋಗ್ಯ ಅಧಿಕಾರಿಗಳು, ವಿವಿಧ ಇಲಾಖೆಗಳ ನೋಡೆಲ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ‘ಇತ್ತೀಚಿನ ದಿನಗಳಲ್ಲಿ ಯಾವ ಭಾಗದಲ್ಲಿ ಸೋಂಕು ಪ್ರಕರಣಗಳು ಹೆಚ್ಚಾಗುತ್ತಿವೆ ಎಂಬ ಬಗ್ಗೆ ಪರಿಶೀಲನೆ ಮಾಡಿ ಜಿಲ್ಲಾಮಟ್ಟದ ಕಾರ್ಯಕ್ರಮ ಅಧಿಕಾರಿ ನೇತೃತ್ವದಲ್ಲಿ ತೀವ್ರತರ ನಿಗಾ ವ್ಯವಸ್ಥೆ ಮಾಡಬೇಕು. ಅಂತಹ ಪ್ರದೇಶಗಳಲ್ಲಿ ಕೋವಿಡ್ ಪರೀಕ್ಷೆಗಳನ್ನು ಹೆಚ್ಚಿಸಬೇಕು. ರ‍್ಯಾಪಿಡ್ ಆ್ಯಂಟಿಜೆನ್ ಟೆಸ್ಟ್‌ಗಳ ಮೂಲಕ ಕೂಡಲೇ ಫಲಿತಾಂಶ ಪಡೆಯಬೇಕು. ನಾಲ್ಕರಿಂದ ಐದು ದಿನದೊಳಗೆ ಈ ಎಲ್ಲಾ ವಿಶೇಷ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಕಾರ್ಯೋನ್ಮುಖವಾಗಬೇಕು’ ಎಂದು ಹೇಳಿದರು.

‘ಹೆಚ್ಚು ಪ್ರಕರಣಗಳು ಕಂಡುಬರುತ್ತಿರುವ ಪ್ರದೇಶಗಳಲ್ಲಿ ಆರೋಗ್ಯ ಕಾಳಜಿಗಾಗಿ ಗುರುತಿಸಲಾಗಿರುವ ವಿಶೇಷ ವರ್ಗದವರು, ಇತರೆ ಕಾಯಿಲೆಗಳಿಂದ ಬಳಲುತ್ತಿರುವವರಿಗೆ ಕೋವಿಡ್ ಪರೀಕ್ಷೆಯನ್ನು ಶೀಘ್ರವಾಗಿ ನಡೆಸಬೇಕು. ಆಶಾ, ಅಂಗನವಾಡಿ ಕಾರ್ಯಕರ್ತೆಯರು, ವಾರ್ಡ್‌ವಾರು, ಗ್ರಾಮ ಪಂಚಾಯಿತಿ ಮಟ್ಟದಲ್ಲಿ ರಚಿಸಲಾಗಿರುವ ಟಾಸ್ಕ್‌ಪೋರ್ಸ್ ಸಮಿತಿಯ ಸಹಕಾರ ಪಡೆದು ಸಂಪೂರ್ಣ ಸಮೀಕ್ಷೆ ಕೈಗೊಂಡು ಪ್ರಕರಣ ಹೆಚ್ಚಳಕ್ಕೆ ಕಾರಣ ತಿಳಿದು ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕು’ ಎಂದು ಡಾ.ಎಂ.ಆರ್.ರವಿ ಅವರು ತಿಳಿಸಿದರು.

ಜಿಲ್ಲೆಯಲ್ಲಿ ತೀವ್ರ ಉಸಿರಾಟ ತೊಂದರೆ ಹಾಗೂ ಐ.ಎಲ್.ಐ ಪ್ರಕರಣಗಳ ಬಗ್ಗೆ ವಿಶೇಷ ಗಮನ ಹರಿಸಬೇಕು. ಪ್ರಕರಣಗಳು ಕಂಡುಬಂದ ಕೂಡಲೇ ವಿಳಂಬ ಮಾಡದೇ ತಕ್ಷಣವೇ ಗಂಟಲು ದ್ರವ ಮಾದರಿ ಪರೀಕ್ಷೆಗೆ ಒಳಪಡಿಸಿ ಚಿಕಿತ್ಸೆ ಆರಂಭಿಸಬೇಕು ಎಂದರು.

ಉಪವಿಭಾಗಾಧಿಕಾರಿ ನಿಖಿತಾ ಎಂ.ಚಿನ್ನಸ್ವಾಮಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಂ.ಸಿ. ರವಿ, ಚಾಮರಾಜನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡೀನ್ ಡಾ.ಸಂಜೀವ್, ಜಿಲ್ಲಾ ಸರ್ವೇಲೆನ್ಸ್ ಅಧಿಕಾರಿ ಡಾ. ನಾಗರಾಜು, ಜಿಲ್ಲಾ ಸರ್ಜನ್ ಡಾ. ಕೃಷ್ಣಪ್ರಸಾದ್, ಡಾ.ಮಹೇಶ್, ಡಾ.ಶ್ರೀನಿವಾಸ್, ತಹಶೀಲ್ದಾರ್ ಚಿದಾನಂದ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಕೆ. ಸುರೇಶ್, ಸಹಕಾರ ಇಲಾಖೆಯ ನಿಬಂಧಕ ವಿಕ್ರಮರಾಜೇ ಅರಸ್, ಇನ್ನಿತರ ಅಧಿಕಾರಿಗಳು ಇದ್ದರು.

ವೈದ್ಯರು, ನರ್ಸ್‌ ನಿಯೋಜಿಸಿ
ಸಂತೇಮರಹಳ್ಳಿಯಲ್ಲಿ ಸ್ಥಾಪಿಸಲಾಗುತ್ತಿರುವ ಕೋವಿಡ್ ಕೇರ್ ಆಸ್ಪತ್ರೆ ನಿರ್ವಹಣೆಗೆ ವೈದ್ಯರು, ನರ್ಸಿಂಗ್ ಸಿಬ್ಬಂದಿ ನಿಯೋಜಿಸಬೇಕು. ಈ ಆಸ್ಪತ್ರೆಯ ನಿರ್ವಹಣೆಗೆ ಪ್ರತ್ಯೇಕ ನೋಡೆಲ್ ಅಧಿಕಾರಿಯನ್ನು ನೇಮಕ ಮಾಡಬೇಕು. ಊಟ, ಉಪಾಹಾರಗಳ ಪೂರೈಕೆ ವ್ಯವಸ್ಥೆಗೂ ಅನುಕೂಲ ಕಲ್ಪಿಸಬೇಕು. ಆಸ್ಪತ್ರೆಗೆ ಅಗತ್ಯವಿರುವ ಪರಿಕರಗಳ ಅಳವಡಿಕೆ ಕಾರ್ಯ ತುರ್ತಾಗಿ ಪೂರ್ಣಗೊಳಿಸಿ ಸಜ್ಜಾಗಿಡುವಂತೆ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ಸೂಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT