ಚಾಮರಾಜನಗರ: ಮುಂಬರುವ ವಿಧಾನಸಭಾ ಚುನಾವಣೆಯ ಪೂರ್ವ ಸಿದ್ದತೆ ಹಾಗೂ ಮಾದರಿ ನೀತಿ ಸಂಹಿತೆ ಪಾಲನೆ ಕಾರ್ಯಗಳನ್ನು ಜಿಲ್ಲಾಧಿಕಾರಿ ಡಿ.ಎಸ್. ರಮೇಶ್ ಸೋಮವಾರ ಪರಿಶೀಲಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಚುನಾವಣೆಗೆ ಸಂಬಂಧಿಸಿದ ನೋಡೆಲ್ ಅಧಿಕಾರಿಗಳ ಸಭೆ ನಡೆಸಿದ ಅವರು, ಮತದಾನ ಕೇಂದ್ರಗಳಲ್ಲಿ ಸೂಚನಾ ಫಲಕಗಳ ಅಳವಡಿಕೆ, ದೃಢೀಕರಣ, ಚುನಾವಣಾ ಕಾರ್ಯಗಳಿಗೆ ನಿಯೋಜಿತರಾಗಿರುವ ಸೆಕ್ಟರ್ ಅಧಿಕಾರಿ, ಫ್ಲೈಯಿಂಗ್ ಸ್ಕ್ವಾಡ್, ಇತರೆ ತಂಡಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿಗಳಿಗೆ ನಿಯೋಜಿಸಿರುವ ವಾಹನಗಳ ಬಗ್ಗೆ ವಿವರ ಪಡೆದುಕೊಂಡರು.

‘ಜಿಲ್ಲೆಯಲ್ಲಿ ಚೆಕ್‌ಪೋಸ್ಟ್‌ಗಳ ಕಾರ್ಯನಿರ್ವಹಣೆ ಸಕ್ರಿಯವಾಗಿ ಇರಬೇಕು. ಚೆಕ್‌ಪೋಸ್ಟ್‌ಗಳಲ್ಲಿ ಮೂಲ ಸೌಕರ್ಯಗಳು ಇರಬೇಕು. ಚುನಾವಣಾ ಅಕ್ರಮಗಳಿಗೆ ಅವಕಾಶವಾಗದಂತೆ ನಿಗಾ ವಹಿಸುವ ನಿಟ್ಟಿನಲ್ಲಿ ಎಲ್ಲ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕು’ ಎಂದು ರಮೇಶ್ ಸೂಚನೆ ನೀಡಿದರು.

ನಾಮಪತ್ರ ಸ್ವೀಕಾರ ಪ್ರಕ್ರಿಯೆಗೆ ಸಂಬಂಧಿಸಿದಂತೆ ಅಗತ್ಯವಾದ ಸಿಬ್ಬಂದಿ, ತಾಂತ್ರಿಕ ಸಿಬ್ಬಂದಿ ಮತ್ತು ಕಂಪ್ಯೂಟರ್ ಅಳವಡಿಕೆಗಳ ಬಗ್ಗೆ ಕೈಗೊಳ್ಳಲಾಗಿರುವ ಸಿದ್ದತೆಗಳ ಬಗ್ಗೆಯೂ ಪರಿಶೀಲಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಎಸ್.ಪೂವಿತಾ ಅವರು ಮತದಾನ ಮಹತ್ವದ ಜಾಗೃತಿ ಮೂಡಿಸುವ ಕಾರ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿರುವ ಕುರಿತು ಪ್ರಸ್ತಾಪಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಎಸ್. ಕಾತ್ಯಾಯಿನಿದೇವಿ, ಎಎಸ್‌ಪಿ ಟಿ.ಜೆ.ಉದೇಶ, ಉಪವಿಭಾಗಾಧಿಕಾರಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸರಸ್ವತಿ, ಅಬಕಾರಿ ಉಪ ಆಯುಕ್ತ ನಾಗಶಯನ, ವಿಧಾನಸಭಾವಾರು ಚುನಾವಣಾ ಅಧಿಕಾರಿಗಳಾಗಿರುವ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಲ್ಲಿಕಾರ್ಜುನ, ಆಹಾರ ಇಲಾಖೆ ಉಪನಿರ್ದೇಶಕ ಯೋಗಾನಂದ್, ಜಂಟಿ ಕೃಷಿ ನಿರ್ದೇಶಕ ಮಧುಸೂಧನ್, ತಹಶೀಲ್ದಾರರಾದ ಬಸವರಾಜು, ಮಂಜುಳಾ, ಶ್ರೀ ಶೈಲ್ ತಳವಾರ್, ನೋಡೆಲ್ ಅಧಿಕಾರಿಗಳಾಗಿರುವ ಆರ್‌ಟಿಒ ಸುಧಾಮಣಿ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಶಿವಪ್ರಸಾದ್, ಕೈಗಾರಿಕೆ ಇಲಾಖೆ ಅಧಿಕಾರಿ ರಾಜೇಂದ್ರ ಪ್ರಸಾದ್, ಭೂ ದಾಖಲೆಗಳ ಉಪನಿರ್ದೇಶಕಿ ವಿದ್ಯಾಯಿನಿ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ಮಂಜುಳಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾಧಿಕಾರಿ ಎಂ.ವಿ. ಸುಧಾ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.