ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಂತಿಯುತ ಬಕ್ರೀದ್ ಆಚರಣೆಗೆ ಸಹಕರಿಸಿ: ಜಿಲ್ಲಾಧಿಕಾರಿ ಬಿ.ಬಿ.ಕಾವೇರಿ

Last Updated 8 ಆಗಸ್ಟ್ 2019, 14:02 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆಯಲ್ಲಿ ಮುಂಬರುವ ಬಕ್ರೀದ್ ಹಬ್ಬವನ್ನು ಶಾಂತಿಯುತವಾಗಿ ಆಚರಿಸುವ ನಿಟ್ಟಿನಲ್ಲಿ ಎಲ್ಲರೂ ಪೂರಕವಾಗಿ ಸಹಕರಿಸಬೇಕು ಎಂದುಜಿಲ್ಲಾಧಿಕಾರಿ ಬಿ.ಬಿ.ಕಾವೇರಿ ಅವರು ಮನವಿ ಮಾಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬಕ್ರೀದ್ ಹಬ್ಬ ಆಚರಣೆಸಂಬಂಧ ಗುರುವಾರಕರೆಯಲಾಗಿದ್ದ ಶಾಂತಿ ಸಭೆಯಲ್ಲಿ ಅವರು ಮಾತನಾಡಿದರು.

ಬಕ್ರೀದ್ ಹಬ್ಬವನ್ನು ಸಾಮರಸ್ಯದಿಂದ ಆಚರಿಸಬೇಕು. ಈ ನಿಟ್ಟಿನಲ್ಲಿ ಪೂರಕ ಸಹಕಾರ ಅಗತ್ಯವಾಗಿದೆ. ಸೌಹರ್ದತೆ ತೋರುವ ಮೂಲಕ ಹಬ್ಬದ ಆಚರಣೆಯಾಗಬೇಕು ಎಂದು ಆಶಿಸಿದರು.

ಇದೇಸಂದರ್ಭದಲ್ಲಿಸಭೆಯಲ್ಲಿ ಹಾಜರಿದ್ದ ಮುಖಂಡರು ಮಾತನಾಡಿ, ‘ಹಬ್ಬದ ಸಿದ್ಧತೆಗಾಗಿ ಕುಡಿಯುವ ನೀರು ಸಮರ್ಪಕ ವಿದ್ಯುತ್ ಸರಬರಾಜಿಗೆ ಕ್ರಮ ತೆಗೆದುಕೊಳ್ಳಬೇಕು’ ಎಂದುಮನವಿ ಮಾಡಿದರು.

‘ನಗರದ ಸ್ವಚ್ಛತೆಗೆ ಕ್ರಮ ತೆಗೆದುಕೊಳ್ಳಲಾಗುತ್ತದೆ. ನೈರ್ಮಲ್ಯ ಕಾಪಾಡಲು ನಗರಸಭೆ ಸ್ಥಳೀಯ ಸಂಸ್ಥೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ. ಕಸ ವಿಲೇವಾರಿಯನ್ನು ಸಮರ್ಪಕವಾಗಿ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು’ ಎಂದು ಕಾವೇರಿ ಅವರು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದಕುಮಾರ್ ಮಾತನಾಡಿ, ‘ಶಾಂತಿಯುತವಾಗಿ ಹಬ್ಬದ ಆಚರಣೆಯಾಗಲಿ. ಸೌಹರ್ದತೆ ಮನೋಭಾವ ಮುಂದುವರೆಯಬೇಕು’ ಎಂದರು.

ಸಭೆಯಲ್ಲಿ ಹೆಚ್ಚುವರಿ ಜಿಲ್ಲಾಧಿಕಾರಿ ಸಿ.ಎಲ್.ಆನಂದ್, ಉಪ ವಿಭಾಗಧಿಕಾರಿ ನಿಖಿತ ಎಂ.ಚಿನ್ನಸ್ವಾಮಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT