ಚಾಮರಾಜನಗರ: ಕೋವಿಡ್–19 ಜಿಲ್ಲೆಗೆ ಕಾಲಿಡದಂತೆ ತಡೆದು, ಹಸಿರು ಜಿಲ್ಲೆಯಲ್ಲೇ ಮುಂದುವರಿಸಲು ಎಲ್ಲರೂ ಶ್ರಮಿಸಬೇಕು. ವೈರಸ್ ಹರಡುವುದನ್ನು ತಡೆಯಲು ಸಾರ್ವಜನಿಕ ಜಾಗೃತಿ ಮೂಡಿಸಲು ರಚಿಸಲಾಗಿರುವ ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳ ತಂಡಕ್ಕೆ ವಹಿಸಲಾಗಿರುವ ಕಾರ್ಯನಿರ್ವಹಣೆಯನ್ನು ಮುಂದುವರಿಸಬೇಕು’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಸೂಚನೆ ನೀಡಿದರು.

ಕೋವಿಡ್-19 ಮುನ್ನೆಚ್ಚರಿಕೆ ಕ್ರಮಗಳ ಸಂಬಂಧ ಅಧಿಕಾರಿಗಳ ಸಭೆ ನಡೆಸಿದ ಅವರು, ‘5ನೇ ಹಂತದ ಲಾಕ್ಡೌನ್ ಈಗಾಗಲೇ ಜಾರಿಯಾಗಿದ್ದು, ಜಿಲ್ಲೆಯು ಹಸಿರು ವಲಯದಲ್ಲಿಯೇ ಮುಂದುವರೆದಿದೆ. ಪ್ರಸ್ತುತ ಲಾಕ್ಡೌನ್ ಸಡಿಲಿಕೆಯಾಗಿರುವುದರಿಂದ ನಗರ, ಪಟ್ಟಣ ಪ್ರದೇಶಗಳಲ್ಲಿ ಜನದಟ್ಟಣೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು ಇನ್ನಷ್ಟು ಚುರುಕಾಗಿ ಕೆಲಸ ಮಾಡಬೇಕು’ ಎಂದರು.

‘ಜಿಲ್ಲೆಯ ಜನತೆ ಹೆಚ್ಚು ಜಾಗೃತರಾಗಿದ್ದಾರೆ. ಆದರೂ ಇದೇ 8ರ ನಂತರ ದೇವಸ್ಥಾನಗಳು, ಹೋಟೆಲ್ಗಳು ತೆರೆಯುವುದರಿಂದ ಜನಸಂದಣಿ ಅಧಿಕವಾಗಲಿದ್ದು, ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು ಜನರಿಗೆ ಸಾಮಾಜಿಕ ಅಂತರ ಕಾಪಾಡಿಕೊಳ್ಳುವಿಕೆ, ಮಾಸ್ಕ್ ಧರಿಸುವುದು ಹಾಗೂ ಸ್ಯಾನಿಟೈಸರ್ ಬಳಸುವಂತೆ ತಿಳಿವಳಿಕೆ ನೀಡಬೇಕು. ತಪ್ಪಿದರೆ ದಂಡ ವಿಧಿಸಬೇಕು’ ಎಂದು ನಿರ್ದೇಶನ ನೀಡಿದರು.

‘ಜಿಲ್ಲೆಯನ್ನು ಹಸಿರು ವಲಯವನ್ನಾಗಿ ಉಳಿಸಿಕೊಳ್ಳುವುದು ಸವಾಲಾಗಿರುವುದರಿಂದ ಮತ್ತಷ್ಟು ಜಾಗೃತರಾಗಿ ಕಾರ್ಯ ನಿರ್ವಹಿಸಬೇಕು. ಅಂತರಜಿಲ್ಲೆ ಚೆಕ್ಪೋಸ್ಟ್ಗಳನ್ನು ಈಗಾಗಲೇ ತೆರವುಗೊಳಿಸಲಾಗಿದ್ದು, ಅಂತರರಾಜ್ಯ ಚೆಕ್ಪೋಸ್ಟ್ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಚೆಕ್ಪೋಸ್ಟ್ಗಳ ಮೂಲಕ ಒಳಬರುವ ಸರಕು ವಾಹನಗಳಿಗೆ ಮಾತ್ರ ಸ್ಯಾನಿಟೈಜೇಷನ್ ಮಾಡಬೇಕು’ ಎಂದು ಜಿಲ್ಲಾಧಿಕಾರಿ ರವಿ ಅವರು ಸಲಹೆ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಚ್.ಡಿ.ಆನಂದ ಕುಮಾರ್ ಅವರು ಮಾತನಾಡಿ, ‘ರಾಜ್ಯದಲ್ಲಿ ಹಸಿರು ವಲಯದಲ್ಲಿರುವ ಏಕೈಕ ಜಿಲ್ಲೆ ನಮ್ಮದಾಗಿದ್ದು, ಮುಂದಿನ ದಿನಗಳಲ್ಲಿಯೂ ಹೀಗೆ ಮುಂದುವರಿಸಿಕೊಂಡು ಹೋಗಬೇಕಾಗಿದೆ. ಇದಕ್ಕೆ ಎಲ್ಲ ಇಲಾಖೆಗಳ ಅಧಿಕಾರಿಗಳ ಸಹಕಾರ ಅಗತ್ಯ’ ಎಂದರು.

ಉಪವಿಭಾಗಾಧಿಕಾರಿ ನಿಖಿತಾ ಎಂ. ಚಿನ್ನಸ್ವಾಮಿ, ಜಿಲ್ಲಾ ಆರೋಗ್ಯಾಧಿಉಕಾರಿ ಡಾ.ಎಂ.ಸಿ.ರವಿ, ವೈದ್ಯಕೀಯ ವಿಜ್ಞಾನ ಸಂಸ್ಥೆಗಳ ಡೀನ್ ಡಾ.ಸಂಜೀವ್, ಸೆಕ್ಟರ್ ಮ್ಯಾಜಿಸ್ಟ್ರೇಟ್ಗಳು, ನೋಡೆಲ್ ಅಧಿಕಾರಿಗಳು, ತಹಶೀಲ್ದಾರರು, ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.

ಅಂತರರಾಜ್ಯ ಸಂಚಾರ: ಪಾಸ್ ಇದ್ದವರಿಗೆ ಅವಕಾಶ

ಸೋಮವಾರದಿಂದ ಸೇವಾ ಸಿಂಧು ಪೋರ್ಟಲ್ನಲ್ಲಿ ನೋಂದಣಿ ಮಾಡಿ ಪಾಸ್ ಪಡೆದ ಎಲ್ಲರಿಗೂ ಅಂತರರಾಜ್ಯ ಸಂಚಾರಕ್ಕೆ ಅವಕಾಶ ನೀಡಲಾಗುತ್ತಿದೆ.

‘ಹೊರ ರಾಜ್ಯಗಳಿಂದ ಬಂದವರು ಕಡ್ಡಾಯವಾಗಿ 14 ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ನಲ್ಲಿ ಇರಬೇಕು. ನಮ್ಮ ಜಿಲ್ಲೆ ಹಸಿರು ವಲಯದಲ್ಲಿರುವುದರಿಂದ ಹೆಚ್ಚು ಪ್ರಕರಣಗಳು ದಾಖಲಾಗಿರುವ ಮಹಾರಾಷ್ಟ್ರ, ತಮಿಳುನಾಡು, ಗುಜರಾತ್, ರಾಜಸ್ಥಾನ, ದೆಹಲಿಗಳಿಂದ ಜಿಲ್ಲೆಗೆ ಬರುವವರು ಏಳು ದಿನಗಳ ಕಾಲ ಸಾಂಸ್ಥಿಕ ಕ್ವಾರಂಟೈನ್ ಹಾಗೂ ಮತ್ತೆ ಏಳು ದಿನಗಳ ಕಾಲ ಮನೆಯಲ್ಲಿ ಕ್ವಾರಂಟೈನ್ನಲ್ಲಿ ಕಡ್ಡಾಯವಾಗಿ ಇರಬೇಕು. ಅವರ ಕೋವಿಡ್–ಪರೀಕ್ಷೆಯನ್ನೂ ನಡೆಸಲಾಗುತ್ತದೆ’ ಎಂದು ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ‘ಪ್ರಜಾವಾಣಿ’ಗೆ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.