ಚಾಮರಾಜನಗರ: ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಶುಕ್ರವಾರ ಬೆಳಿಗ್ಗೆ ನಗರಸಭೆಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯನಿರ್ವಹಣೆಯನ್ನು ಪರಿಶೀಲಿಸಿದರು.

ಬೆಳಿಗ್ಗೆ 10.10ರ ಸುಮಾರಿಗೆ ನಗರಸಭೆ ಕಚೇರಿಗೆ ಭೇಟಿ ನೀಡಿದ ಅವರು ಹಾಜರಾತಿ ಪುಸ್ತಕವನ್ನು ಪರಿಶೀಲಿಸಿದರು. ಆ ಹೊತ್ತಿಗೆ ಹೆಚ್ಚಿನ ಸಿಬ್ಬಂದಿ ಕಚೇರಿಗೆ ಬಂದಿರಲಿಲ್ಲ. ನಂತರ ಆಯುಕ್ತ ರಾಜಣ್ಣ ಅವರ ಕೊಠಡಿಗೆ ತೆರಳಿದರು.

ಕಚೇರಿಯ ಮೊಗಸಾಲೆಯಲ್ಲಿ ಕಪಾಟು ಹಾಗೂ ಇನ್ನಿತರ ವಸ್ತುಗಳನ್ನು ಇಟ್ಟಿದ್ದನ್ನು ಗಮನಿಸಿದ ರವಿ, ಜನರ ಓಡಾಟಕ್ಕೆ ತೊಂದರೆಯಾಗುತ್ತಿದೆ. ಬೇರೆ ಕಡೆ ಇರಿಸುವಂತೆ ಸೂಚಿಸಿದರು.

ಸ್ವಚ್ಛತೆ ಹಾಗೂ ಗಾಳಿ ಬೆಳಕಿನ ವ್ಯವಸ್ಥೆ ಸರಿಯಾಗಿ ಇಲ್ಲದಿರುವುದಕ್ಕೆ ಅಸಮಾಧಾನ ವ್ಯಕ್ತಪಡಿಸಿದ ಅವರು, ‘ಇಲ್ಲಿ ಸ್ವಚ್ಛತೆ ಇಲ್ಲ, ಗಾಳಿ ಬೆಳಕು ಸಮರ್ಪಕವಾಗಿಲ್ಲದೆ, ದಾಸ್ತಾನು ಕೊಠಡಿಯಂತೆ ಇದೆ. ನಗರಸಭೆ ಕಚೇರಿಯೇ ಈ ರೀತಿ ಇದ್ದರೆ, ಸ್ವಚ್ಛತೆಯ ಬಗ್ಗೆ ಜನರಲ್ಲಿ ಅರಿವು ಹೇಗೆ ಮೂಡಿಸುತ್ತೀರಿ’ ಎಂದು ಪ್ರಶ್ನಿಸಿದರು.

ತಡವಾಗಿ ಬಂದ ಅಧಿಕಾರಿಗಳು ಹಾಗೂ ಸಿಬ್ಬಂದಿಯನ್ನೂ ಜಿಲ್ಲಾಧಿಕಾರಿ ತರಾಟೆಗೆ ತೆಗೆದುಕೊಂಡರು. ಕಚೇರಿ ಎಷ್ಟು ಗಂಟೆಗೆ ಆರಂಭವಾಗುತ್ತದೆ ಎಂಬುದು ತಿಳಿದಿದೆಯೇ? ಸಾರ್ವಜನಿಕರ ಸಮಸ್ಯೆಗಳ ಬಗ್ಗೆ ಅರಿವು ಇದೆಯೇ? ತಡವಾಗಿ ಬರಲು ನಾಚಿಕೆ ಆಗುವುದಿಲ್ಲವೇ’ ಎಂದು ಖಾರವಾಗಿ ಪ್ರಶ್ನಿಸಿದರು.

ತಡವಾಗಿ ಬಂದವರಿಗೆ ನೋಟಿಸ್ ಜಾರಿ ಮಾಡುವಂತೆ ಆಯುಕ್ತರಿಗೆ ಸೂಚಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.