ಗುಂಡ್ಲುಪೇಟೆ: ಬಂಡೀಪುರ ಅಭಯಾರಣ್ಯದ ಓಂಕಾರ ವನ್ಯಜೀವಿ ವಲಯ ವ್ಯಾಪ್ತಿಯ ಕುರುಬರಹುಂಡಿ ಶಾಖೆಯ ನಾಗಣಾಪುರ ಬ್ಲಾಕ್-2ರ ಆಲದ ಮರದ ಹಳ್ಳ ಅರಣ್ಯ ಪ್ರದೇಶದಲ್ಲಿ 5 ವರ್ಷದ ಗಂಡು ಕಾಡಾನೆ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ.
‘ಮೃತ ಕಾಡಾನೆಯ ಕಣ್ಣಿನ ಕೆಳಭಾಗದಲ್ಲಿ ಎದುರಾಳಿ ಕಾಡಾನೆಯ ದಂತ ಚುಚ್ಚಿರುವುದು ಕಂಡು ಬಂದಿದೆ. ಎದುರಾಳಿ ಆನೆಯ ದಂತವು ಮೃತ ಕಾಡಾನೆಯ ಮೇಲ್ದವಡೆಯವರೆಗೆ 30 ಸೆ.ಮೀ ಆಳದವರೆಗೆ ಒಳಹೊಕ್ಕಿದ್ದು, ಅದರ ಸ್ವಲ್ಪ ಭಾಗ ಮುರಿದಿದೆ. ಹೀಗಾಗಿ, ರಕ್ತಸ್ರಾವ ಹಾಗೂ ನಿತ್ರಾಣದಿಂದ ಆನೆ ಮೃತಪಟ್ಟಿದೆ’ ಎಂದು ಬಂಡೀಪುರ ಹುಲಿ ಯೋಜನೆಯ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ.ರಮೇಶ್‍ಕುಮಾರ್ ತಿಳಿಸಿದರು.
‘ಎದುರಾಳಿ ಆನೆಯ ಮುರಿದ ದಂತದ ಭಾಗ ಹಾಗೂ ಮೃತ ಆನೆಯ ಎರಡು ದಂತಗಳನ್ನು ವಶಕ್ಕೆ ಪಡೆದಿದ್ದು, ಶವವನ್ನು ಮರಣೋತ್ತರ ಪರೀಕ್ಷೆ ನಡೆಸಿ ಕಳೇಬರವನ್ನು ಅರಣ್ಯ ಪ್ರದೇಶದಲ್ಲೇ ಬಿಡಲಾಯಿತು.
ಗುಂಡ್ಲುಪೇಟೆ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಜಿ.ರವೀಂದ್ರ, ಓಂಕಾರ ವನ್ಯಜೀವಿ ವಲಯ ಅರಣ್ಯಾಧಿಕಾರಿ ಕೆ.ಪಿ.ಸತೀಶ್ ಕುಮಾರ್, ಇಲಾಖಾ ಪಶುವೈದ್ಯಾಧಿಕಾರಿ ಡಾ.ಮಿರ್ಜಾ ವಾಸಿ, ಗಸ್ತು ವನಪಾಲಕ ಸಂತೋಷ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.