ಚಾಮರಾಜನಗರ: ಹನೂರು ತಾಲ್ಲೂಕಿನ ಮಲೆ ಮಹದೇಶ್ವರಬೆಟ್ಟದಲ್ಲಿ ನಡೆಯುವ ದೀಪಾವಳಿ ಜಾತ್ರಾ ಮಹೋತ್ಸವದಲ್ಲಿ ಜಿಲ್ಲೆ, ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಲಕ್ಷಾಂತರ ಭಕ್ತರು ಆಗಮಿಸುವ ಹಿನ್ನೆಲೆಯಲ್ಲಿ ಬೆಟ್ಟಕ್ಕೆ ಜಾತ್ರೆಗಾಗಿ ತೆರಳುವ ದ್ವಿಚಕ್ರ ಮತ್ತು ತ್ರಿಚಕ್ರ ವಾಹನಗಳ ಸಂಚಾರವನ್ನು ಅ.19ರ ಬೆಳಿಗ್ಗೆ 6 ರಿಂದ 22ರ ಸಂಜೆ 7ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದ್ದಾರೆ.

ದೀಪಾವಳಿ ಜಾತ್ರೆಗೆ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಾಗುವುದರಿಂದ ಹಾಗೂ ರಸ್ತೆಯು ಅರಣ್ಯ ಪ್ರದೇಶ ಹಾಗೂ ಕಡಿದಾದ ತಿರುವುಗಳಿಂದ ಕೂಡಿರುವುದರಿಂದ ವಾಹನಗಳ ದಟ್ಟಣೆಯಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಇರುವುದರಿಂದ ಭಕ್ತರು ದ್ವಿಚಕ್ರ ಮತ್ತು ತ್ರಿಚಕ್ರ (ಆಟೊರಿಕ್ಷಾ ಮತ್ತು ಗೂಡ್ಸ್ ವಾಹನಗಳು ಸೇರಿದಂತೆ) ವಾಹನಗಳಲ್ಲಿ ತೆರಳುವುದನ್ನು ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.