ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹನೂರು: ಎಡೆಯಾರಳ್ಳಿ ಕಾರಿಡಾರ್‌ನಲ್ಲಿ ವಾಹನಕ್ಕೆ ಸಿಲುಕಿ ಜಿಂಕೆ ಸಾವು

Last Updated 4 ಸೆಪ್ಟೆಂಬರ್ 2020, 7:07 IST
ಅಕ್ಷರ ಗಾತ್ರ

ಹನೂರು: ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮಲೆ ಮಹದೇಶ್ಬರ ವನ್ಯಧಾಮದ ನಡುವಿನ ಎಡೆಯಾರಳ್ಳಿ ಕಾರಿಡಾರ್‌ನಲ್ಲಿ ವಾಹನ ಡಿಕ್ಕಿ ಹೊಡೆದು ಜಿಂಕೆ ಮೃತಪಟ್ಟಿದೆ.

ಹನೂರು ತಾಲ್ಲೂಕಿನ‌ ಮೈಸೂರಪ್ಪನ ದೊಡ್ಡಿ ಗ್ರಾಮದ ಬಳಿ ಈ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.

ವೇಗವಾಗಿ ಚಲಿಸುತ್ತಿದ್ದ ಇನ್ನೊವಾ ಕಾರು ಡಿಕ್ಕಿ ಹೊಡೆದಿದೆ ಎಂದು ಅರಣ್ಯ ಇಲಾಖೆ ಮೂಲಗಳು ತಿಳಿಸಿವೆ. ಸಿಬ್ಬಂದಿ ಕಾರನ್ನು ತಡೆಯಲು ಪ್ರಯತ್ನಿಸದರೂ ಸಾಧ್ಯವಾಗಲಿಲ್ಲ ಎಂದು‌ ತಿಳಿದು ಬಂದಿದೆ.

ಲೊಕ್ಕನಹಳ್ಳಿ ಹೋಬಳಿ ವ್ಯಾಪ್ತಿಯಲ್ಲಿ ಎಡೆಯಾರಳ್ಳಿ ಕಾರಿಡಾರ್ ಬರುತ್ತದೆ. ಜಿಲ್ಲೆಯಲ್ಲೇ ಅತಿ ಮುಖ್ಯವಾದ ಕಾರಿಡಾರ್ (ವನ್ಯ ಜೀವಿ ಪಥ) ಎಂದು ಗುರುತಿಸಲಾಗಿರುವ ಎಡೆಯಾರಳ್ಳಿ ಕಾರಿಡಾರ್‌ನಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ರಸ್ತೆ ಉಬ್ಬುಗಳನ್ನು ನಿರ್ಮಿಸಲಾಗಿತ್ತು. ಆದರೆ ಕೆಲವು ಕಿಡಿಗೇಡಿಗಳು ಉಬ್ಬುಗಳನ್ನು ಕಿತ್ತು ಹಾಕಿದ್ದಾರೆ.

ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶದ ಬೈಲೂರು ವಲಯದ ಅಧಿಕಾರಿಗಳು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT