ಚಾಮರಾಜನಗರ: ಜಿಲ್ಲೆಯಲ್ಲಿ ಕಬಿನಿ 2ನೇ ಹಂತದ ಯೋಜನೆ ಜಾರಿಗೆ ರಾಜ್ಯ ಸರ್ಕಾರ ಮುಂದಾಗಬೇಕು ಎಂದು ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡ ಹೆಗ್ಗವಾಡಿಪುರ ಎಚ್.ಸಿ.ಮಹೇಶ್ ಕುಮಾರ್ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

ರಾಮಕೃಷ್ಣ ಹೆಗಡೆ ಮುಖ್ಯಮಂತ್ರಿಯಾಗಿದ್ದಾಗ ಚಾಮರಾಜನಗರದಲ್ಲಿ ಕಬಿನಿ 2ನೇ ಹಂತದ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದ್ದು ಅಂದು ಎಚ್.ಡಿ.ದೇವಗೌಡರು ನೀರಾವರಿ ಸಚಿವರಾಗಿದ್ದರು. ಬಳಿಕ ನ್ಯಾಯಾಲಯದ ತಡೆಯಾಜ್ಞೆಯಿಂದ 40 ವರ್ಷ ಕಳೆದರೂ ಯೋಜನೆ ನನೆಗುದಿಗೆ ಬಿದ್ದಿದೆ. ಜಿಲ್ಲೆಯ ಜನಪ್ರತಿನಿಧಿಗಳು ಯೋಜನೆ ಜಾರಿಗೆ ಆದ್ಯತೆ ನೀಡದಿರುವುದು ಬೇಸರದ ಸಂಗತಿ ಎಂದು ಟೀಕಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಜಿಲ್ಲೆಯ ರೈತರ ಬಗ್ಗೆ ಕಾಳಜಿ ಇದ್ದರೆ ಕಬಿನಿ 2ನೇ ಹಂತದ ಯೋಜನೆ ಜಾರಿಗೆ ಒತ್ತು ನೀಡಬೇಕು. ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಹಾಗೂ ಜಿಲ್ಲೆಯ ಶಾಸಕರು ಯೋಜನೆ ಜಾರಿಗೆ ಸರ್ಕಾರದ ಮೇಲೆ ಒತ್ತಡ ಹಾಕಬೇಕು. ಇಲ್ಲವಾದರೆ ಜಿಲ್ಲೆಯ ಜನತೆ ತಕ್ಕಪಾಠ ಕಲಿಸಲಿದ್ದಾರೆ ಎಂದು ಮಹೇಶ್ಕುಮಾರ್ ಎಚ್ಚರಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.