ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮಸಣಾಪುರ: ಸ್ಮಶಾನ ಜಾಗ ಒತ್ತುವರಿ ತೆರವುಗೊಳಿಸಿ

Published : 14 ಸೆಪ್ಟೆಂಬರ್ 2024, 14:29 IST
Last Updated : 14 ಸೆಪ್ಟೆಂಬರ್ 2024, 14:29 IST
ಫಾಲೋ ಮಾಡಿ
Comments

ಚಾಮರಾಜನಗರ: ತಾಲ್ಲೂಕಿನ ಮಸಣಾಪುರ ಗ್ರಾಮದಲ್ಲಿ ವಾಸವಾಗಿರುವ ನಾಯಕ ಹಾಗೂ ಉಪ್ಪಾರ ಸಮುದಾಯದವರು ಹಿಂದಿನಿಂದಲೂ ಸರ್ಕಾರಿ ಜಾಗದಲ್ಲಿ ಅಂತ್ಯಕ್ರಿಯೆ ಮಾಡಿಕೊಂಡು ಬಂದಿದ್ದು, ಆ ಜಾಗವನ್ನು ಖಾಸಗಿ ವ್ಯಕ್ತಿಯೊಬ್ಬರು ಒತ್ತುವರಿ ಮಾಡಿಕೊಂಡು ಸಮುದಾಯಗಳಿಗೆ ತೊಂದರೆ ನೀಡುತ್ತಿದ್ದಾರೆ ಎಂದು ಉಪ್ಪಾರ ಸಮುದಾಯದ ಮುಖಂಡ ಶ್ರೀನಿವಾಸ ಆರೋಪಿಸಿದರು.

ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಮಾತನಾಡಿ, ಗ್ರಾಮದ ಸಮೀಪದಲ್ಲಿ ಕಾವೇರಿ ನೀರಾವರಿ ನಿಗಮಕ್ಕೆ ಸೇರಿದ ಸರ್ವೆ ನಂ 19/6 ರಲ್ಲಿ 27 ಗುಂಟೆ ಜಮೀನು ಇದ್ದು, ಇಲ್ಲಿ ತಲೆತಲಾಂತರಗಳಿಂದ ನಾಯಕ ಹಾಗೂ ಉಪ್ಪಾರ ಸಮುದಾಯದವರು ಸ್ಮಶಾನವಾಗಿ ಬಳಕೆ ಮಾಡುತ್ತಿದ್ದಾರೆ.

ಈ ಜಾಗವನ್ನು ನಾಯಕ ಸಮುದಾಯ ಗ್ರಾಮದ ಕೆಲವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡು ತಂತಿಬೇಲಿ ಹಾಕಿ ತೊಂದರೆ ನೀಡುತ್ತಿದ್ದಾರೆ. ಈ ಬಗ್ಗೆ ತಹಶೀಲ್ದಾರ್, ಯಳಂದೂರು ಠಾಣೆ, ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ದೂರು ನೀಡಿದ್ದು, ಅದರಂತೆ ತಹಸೀಲ್ದಾರ್ ನೇತೃತ್ವದಲ್ಲಿ ಸರ್ವೆ ಇಲಾಖೆ ಅಧಿಕಾರಿಗಳು ಜಾಗ ಗುರುತಿಸಿ ಗುರುತಿನ ಕಲ್ಲು ನೆಟ್ಟು ಒತ್ತುವರಿದಾರರಿಗೆ ಎಚ್ಚರಿಕೆ ನೀಡಿಹೋಗಿದ್ದಾರೆ. ಆದರೆ, ಒತ್ತುವರಿದಾರರು ಗುರುತಿನಕಲ್ಲು ಕಿತ್ತು ಮತ್ತೆ ಒತ್ತುವರಿ ಮಾಡಿದ್ದಾರೆ ಎಂದು ದೂರಿದರು.

ಗ್ರಾಮ ಪಂಚಾಯಿತಿ ಸದಸ್ಯ ವಿ.ಮಹದೇಶ ಮಾತನಾಡಿ, ಎರಡು ಸಮುದಾಯಗಳು ಸ್ಮಶಾನಕ್ಕಾಗಿ ಹೋರಾಟ ಮಾಡುತಿದ್ದರೂ ಪ್ರಯೋಜವಾಗಿಲ್ಲ. ಒತ್ತುವರಿದಾರರು ಅನಗತ್ಯ ದೂರು ನೀಡುವುದರ ಜೊತೆಗೆ ಗ್ರಾಮದಲ್ಲಿ ಸಾಮರಸ್ಯ ಹಾಳುಮಾಡುತ್ತಿದ್ದಾರೆ. ಇತರೆ ಜನಾಂಗವನ್ಬು ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಒತ್ತುವರಿ ತೆರವುಗೊಳಿಸಿ ಸ್ಮಶಾನದಲ್ಲಿ ಶವಸಂಸ್ಕಾರಕ್ಕೆ ಅವಕಾಶ ಮಾಡಿಕೊಡಬೇಕು ಎಂದು ಮನವಿ ಮಾಡಿದರು.

ಸುದ್ದಿಗೋಷ್ಟಿಯಲ್ಲಿ ಮುಖಂಡರಾದ ಶಂಕರನಾಯಕ, ಬಿಳಿಗಿರಿರಂಗನಾಯಕ, ವೆಂಕಟರಂಗಸ್ವಾಮಿ ನಾಯಕ, ಕೃಷ್ಣಶೆಟ್ಟಿ, ರುದ್ರನಾಯಕ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT