ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೋವಿಡ್‌: ಕೇರಳ ಗಡಿ ಬಂದ್ ಮಾಡುವಂತೆ ಮನವಿ

Last Updated 2 ಮಾರ್ಚ್ 2021, 16:42 IST
ಅಕ್ಷರ ಗಾತ್ರ

ಚಾಮರಾಜನಗರ: ಜಿಲ್ಲೆ‌ಯಲ್ಲಿ ಕೋವಿಡ್‌ ಹರಡುವಿಕೆ ತಪ್ಪಿಸಲು ಮುನ್ನೆಚ್ಚರಿಕೆ ಕ್ರಮವಾಗಿಕೇರಳ ಗಡಿಯನ್ನು ಬಂದ್ ಮಾಡುವಂತೆ ಕರ್ನಾಟಕ ಸೇನಾ ಪಡೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ಸೇನಾಪಡೆಯ ಪದಾಧಿಕಾರಿಗಳು ಹೆಚ್ಚುವರಿ ಜಿಲ್ಲಾಧಿಕಾರಿ ಕಾತ್ಯಾಯಿನಿದೇವಿ ಅವರ ಮೂಲಕ ಮಂಗಳವಾರ ಮುಖ್ಯಮಂತ್ರಿ ಅವರಿಗೆ ಮನವಿ ಮಾಡಿದ್ದಾರೆ.

‘ಕೋವಿಡ್‌ನಿಂದಾಗಿ ಜಗತ್ತೇ ತಲ್ಲಣಗೊಂಡಿದೆ. ಜನತೆ ಸಂಕಷ್ಟಕ್ಕೆ ಸಿಲುಕಿದ್ದರು. ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಅಧಿಕಾರಿಗಳು ಕೈಗೊಂಡ ಮುಂಜಾಗ್ರತಾ ಕ್ರಮದಿಂದಾಗಿ ಸೋಂಕು ನಿಯಂತ್ರಣಕ್ಕೆ ಬಂದು ಇಡೀ ದೇಶದ ಗಮನ ಸೆಳೆದಿದೆ. ಸದ್ಯ ಜಿಲ್ಲೆಯಲ್ಲಿ ಕೋವಿಡ್‌ ನಿಯಂತ್ರಣದಲ್ಲಿದೆ. ದೇಶದ ವಿವಿಧ ಕಡೆಗಳಲ್ಲಿ ಸೋಂಕಿನ ಎರಡನೇ ಅಲೆ ಆರಂಭವಾಗಿದೆ. ನೆರೆಯ ಕೇರಳದಲ್ಲಿ ವ್ಯಾಪಕವಾಗಿ ಹರಡುತ್ತಿದೆ’ ಎಂದು ಮನವಿಯಲ್ಲಿ ಹೇಳಲಾಗಿದೆ.

‘ನಮ್ಮ ಜಿಲ್ಲೆಯ ಗುಂಡ್ಲುಪೇಟೆ ಭಾಗದಿಂದ ಕೇರಳಿಗರು ರಾಜ್ಯಕ್ಕೆ ಹಾಗೂ ಜಿಲ್ಲೆಗೆ ಪ್ರವೇಶ ಪಡೆಯುತ್ತಿದ್ದಾರೆ. ಇದರಿಂದಾಗಿ ಕೋವಿಡ್‌ನಿಂದ ಸುರಕ್ಷಿತವಾಗಿರುವ ಗಡಿ ಜಿಲ್ಲೆಗೆ ಕೋವಿಡ್‌ ಹರಡುವ ಸಂಭವವಿದೆ. ಜಿಲ್ಲಾಡಳಿತ ಈಗಾಗಲೇ ಗಡಿಗಳಲ್ಲಿ ಕೋವಿಡ್‌ ಪರೀಕ್ಷೆ ನಡೆಸುತ್ತಿದೆ. ಹಾಗಿದ್ದರೂ ಅಲ್ಲಿಂದ ಬರುತ್ತಿರುವವ ಸಂಖ್ಯೆ ಹೆಚ್ಚಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿಕೇರಳ ಗಡಿಯನ್ನು ತಾತ್ಕಾಲಿತವಾಗಿ ಬಂದ್ ಮಾಡಬೇಕು’ ಎಂದು ಮನವಿ ಪತ್ರದಲ್ಲಿ ಒತ್ತಾಯಿಸಲಾಗಿದೆ.

ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ನಿಜಧ್ವನಿಗೋವಿಂದರಾಜು, ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಜಯಕುಮಾರ್, ಗಡಿನಾಡು ಕನ್ನಡ ರಕ್ಷಣಾ ವೇದಿಕೆಯ ಜಿಲ್ಲಾಧ್ಯಕ್ಷ ಚಾ.ರಾ.ಕುಮಾರ್, ಶಿವಶಂಕರ್‌ನಾಯಕ, ನಂಜುಂಡ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT