ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿ.ಪಂ. ತಾ.ಪಂ ಚುನಾವಣೆ ಮುಂದೂಡಲು ಒತ್ತಾಯ

Last Updated 20 ಏಪ್ರಿಲ್ 2021, 11:26 IST
ಅಕ್ಷರ ಗಾತ್ರ

ಚಾಮರಾಜನಗರ: ಕೋವಿಡ್‌ ಕಾರಣದಿಂದ ಮುಂಬರುವ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಒಕ್ಕಲಿಗರ ಸಂಘ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಚುನಾವಣೆಗಳನ್ನು ಮುಂದೂಡುವಂತೆ ಕರ್ನಾಟಕ ಸೇನಾ ಪಡೆ ರಾಜ್ಯಪಾಲರನ್ನು ಒತ್ತಾಯಿಸಿದೆ.

ಸೇನಾ ಪಡೆಯ ಪದಾಧಿಕಾರಿಗಳು ಮಂಗಳವಾರ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್‌.ಕಾತ್ಯಾಯಿನಿದೇವಿ ಅವರನ್ನು ಭೇಟಿ ಮಾಡಿ, ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

‘ದೇಶದಾದ್ಯಂತ ಕೋವಿಡ್‌ ಸಮುದಾಯಕ್ಕೆ ಹರಡಿದ್ದು, ದಿನನಿತ್ಯ ದೇಶದಲ್ಲಿ ಲಕ್ಷಾಂತರ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ರಾಜ್ಯದಲ್ಲೂ ಪ‍್ರಕರಣಗಳು ಗಣನೀಯವಾಗಿ ಹೆಚ್ಚಿದ್ದು, ಕೊರೊನಾ ವೈರಸ್‌ ಹಾವಳಿಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಇಂತಹ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿ ಚುನಾವಣೆಗಳು ನಡೆಯುವುದು ಸರಿಯಲ್ಲ. ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗವು ಚುನಾವಣೆ ನಡೆಸಲು ಮುಂದಾಗಬಾರದು’ ಎಂದು ಮನವಿಯಲ್ಲಿ ಒತ್ತಾಯಿಸಲಾಗಿದೆ.

‘ಈಗಾಗಲೇ ನಿಗದಿಯಾಗಿರುವ ರಾಜ್ಯ ಒಕ್ಕಲಿಗರ ಸಂಘದ ಚುನಾವಣೆ ಹಾಗೂ ಕನ್ನಡ ಸಾಹಿತ್ಯ ಪರಿಷತ್‌ನ ಚುನಾವಣೆಗಳನ್ನು ಮುಂದೂಡಬೇಕು. ಯಾವುದೇ ಕಾರಣಕ್ಕೂ ಈ ಚುನಾವಣೆಗಳನ್ನು ನಡೆಸಬಾರದು. ಒಂದು ವೇಳೆ ಸರ್ಕಾರ ತನ್ನ ಹಟಕ್ಕೆ ಬಿದ್ದು ನಡೆಸಿದರೆ ಮುಂದೆ ಆಗುವ ಅನಾಹುತಗಳಿಗೆ ರಾಜ್ಯ ಸರ್ಕಾರವೇ ಹೊಣೆಯಾಗಬೇಕಾಗುತ್ತದೆ. ಹಾಗಾಗಿ, ಚುನಾವಣಾ ಆಯೋಗಕ್ಕೆ ಸೂಕ್ತ ನಿರ್ದೇಶನ ನೀಡಬೇಕು’ ಎಂದು ಮನವಿಯಲ್ಲಿ ಹೇಳಲಾಗಿದೆ.

ಕರ್ನಾಟಕ ಸೇನಾ ಪಡೆಯ ಅಧ್ಯಕ್ಷ ಚಾ.ರಂ.ಶ್ರೀನಿವಾಸಗೌಡ, ಕಾರ್ಯದರ್ಶಿ ಪಣ್ಯದಹುಂಡಿ ರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT