ಚಾಮರಾಜನಗ: ಪ್ರಜಾಪ್ರಭುತ್ವ ವ್ಯವಸ್ಥೆ ಬಲಪಡಿಸಿ ಮೌಲ್ಯ ಹಾಗೂ ತತ್ವಗಳನ್ನು ಎತ್ತಿ ಹಿಡಿದು ನಾಗರಿಕರಿಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಸೆ.15ರಂದು ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಅಂತರ ರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಆಚರಣೆ ಸಂಬಂಧ ನಡೆದ ಪೂರ್ವ ಸಿದ್ದತಾ ಸಭೆಯಲ್ಲಿ ಮಾತನಾಡಿದ ಅವರು, ‘ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನು ರಾಜ್ಯದಾದ್ಯಂತ ವಿಶಿಷ್ಟವಾಗಿ ಆಚರಿಸಲಾಗುತ್ತಿದೆ. ಅಂದು ಬೆಳಿಗ್ಗೆ 8.30ರಿಂದ 9.30ರವರೆಗೆ ಏಕಕಾಲದಲ್ಲಿ ಉತ್ತರದ ಬೀದರ್‌ನಿಂದ ದಕ್ಷಿಣದ ಚಾಮರಾಜನಗರದವರೆಗೂ ಬೃಹತ್ ಮಾನವ ಸರಳಿ ನಿರ್ಮಿಸಲಾಗುತ್ತದೆ.
ಚಾಮರಾಜನಗರ ಜಿಲ್ಲೆ ಸಂಪರ್ಕಿಸುವ ಮೈಸೂರು ಜಿಲ್ಲೆಯ ಮೂಗೂರು ಕ್ರಾಸ್‌ನಿಂದ ಚಾಮರಾಜನಗರದ ಭುವನೇಶ್ವರಿ ವೃತ್ತದದವರೆಗೂ 24 ಕಿ.ಮೀ ಮಾನವ ಸರಪಳಿ ರಚಿಸಲಾಗುತ್ತದೆ ಎಂದರು.
ಮಾನವ ಸರಪಳಿಯ ಪ್ರತಿ 100 ಮೀಟರ್, ಅರ್ಧ ಕಿ.ಮೀ, 1 ಕಿ.ಮೀಗೆ ಅಧಿಕಾರಿಗಳನ್ನು ನಿಯೋಜಿಸಲಾಗುವುದು. ನಿಯೋಜಿತ ಅಧಿಕಾರಿಗಳು ಆಯಾ ಭಾಗದಲ್ಲಿ ಮಾನವ ಸರಪಳಿ ರಚನೆಯ ಉಸ್ತುವಾರಿ ಮಾಡಬೇಕಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ತಿಳಿಸಿದರು.
‘ಜಿಲ್ಲಾ ಉಸ್ತುವಾರಿ ಸಚಿವರು, ಶಾಸಕರು, ನಿಗಮ ಮಂಡಳಿ ಅಧ್ಯಕ್ಷರು, ನಗರ, ಸ್ಥಳೀಯ ಸಂಸ್ಥೆ, ಗ್ರಾಮೀಣ ಭಾಗದ ಜನಪ್ರತಿನಿಧಿಗಳು, ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಶಿಲ್ಪಾ ನಾಗ್ ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಮೋನಾ ರೋತ್, ಎಸ್‌ಪಿ ಡಾ.ಬಿ.ಟಿ. ಕವಿತಾ, ಎಡಿಸಿ ಗೀತಾ ಹುಡೇದ, ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಲಕ್ಷ್ಮೀ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮುನಿರಾಜು, ಜಿಲ್ಲಾ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಶ್ರೀಕಂಠರಾಜೇ ಅರಸ್, ಡಿಎಚ್‌ಒ ಡಾ. ಎಸ್. ಚಿದಂಬರ, ಅಬಕಾರಿ ಉಪ ಆಯುಕ್ತ ನಾಗಶಯನ, ಆಹಾರ ಇಲಾಖೆ ಉಪನಿರ್ದೇಶಕ ಯೋಗಾನಂದ, ಡಿಡಿಪಿಐ ರಾಮಚಂದ್ರರಾಜೇ ಅರಸ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಾದ ಮಂಜುನಾಥ್ ಇದ್ದರು.
Cut-off box - ‘1 ಕಿ.ಮೀ ಉದ್ದದ ರಾಷ್ಟ್ರಧ್ವಜ’ ಚಾಮರಾಜನಗರ ಜಿಲ್ಲಾ ವ್ಯಾಪ್ತಿಯಲ್ಲಿ 24 ಕಿ.ಮೀ ಉದ್ದದ ಮಾನವ ಸರಪಳಿಯಲ್ಲಿ 19 ಸಾವಿರಕ್ಕೂ ಹೆಚ್ಚು ಜನರು ಪಾಲ್ಗೊಳ್ಳಲಿದ್ದಾರೆ. ಬೃಹತ್ ಜಾಗೃತಿ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲ ಸಂಘ ಸಂಸ್ಥೆ ಸಂಘಟನೆಗಳು ಸ್ವಯಂ ಸೇವಾ ಸಂಸ್ಥೆಗಳು ಸಮುದಾಯದ ಮುಖಂಡರು ಪ್ರತಿನಿಧಿಗಳು ವಿದ್ಯಾರ್ಥಿಗಳು ಅಧಿಕಾರಿಗಳು ನೌಕರರು ನಾಗರಿಕರು ಭಾಗವಹಿಸಿ ಯಶಸ್ವಿಗೊಳಿಸಬೇಕು. ಪಚ್ಚಪ್ಪ ವೃತ್ತದಿಂದ ವರ್ತಕರ ಭವನದವರಗೆ ಒಂದು ಕಿ.ಮೀ ಉದ್ದದ ರಾಷ್ಟ್ರಧ್ವಜ ಪ್ರದರ್ಶಿಸಬೇಕು ಮಾನವ ಸರಪಳಿಯ ಹಾದಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮ ಆಯೋಜಿಸಬೇಕು ಜಿಲ್ಲೆಯ ಜಾನಪದ ಕಲಾತಂಡಗಳು ಮಕ್ಕಳಿಂದ ಡಾ.ಬಿ.ಆರ್.ಅಂಬೇಡ್ಕರ್ ವೇಷ ಭೂಷಣ ಸಂವಿಧಾನ ಪೀಠಿಕೆ ವಾಚನದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.