ಭಾನುವಾರ, 24 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಲಿತರ ಬಗ್ಗೆ ಅವಹೇಳನಕಾರಿ ಮಾತು:ಎಫ್ ಐಆರ್ ದಾಖಲಿಸಲು ಆಗ್ರಹ

Published 19 ಆಗಸ್ಟ್ 2023, 14:24 IST
Last Updated 19 ಆಗಸ್ಟ್ 2023, 14:24 IST
ಅಕ್ಷರ ಗಾತ್ರ

ಕೊಳ್ಳೇಗಾಲ: ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್ ಮಲ್ಲಿಕಾರ್ಜುನ್ ಮೇಲೆ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿ ಕ್ರಮವಹಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಮುಖಂಡ ಎನ್.ಮಹೇಶ್ ಪತ್ರ ಬರೆದಿದ್ದಾರೆ.

ಈಗಾಗಲೇ ದಲಿತರ ಮೇಲೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಚಿತ್ರ ನಟ ಉಪೇಂದ್ರ ವಿರುದ್ದ ಬೆಂಗಳೂರು ದಕ್ಷಿಣ ತಾಲ್ಲೂಕಿನ ಚೆನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ ಎಸ್ಸಿ-ಎಸ್ಟಿ ದೌರ್ಜನ್ಯ ಕಾಯ್ದೆಯ ಪ್ರಕಾರ ಎಫ್.ಐ.ಆರ್ ದಾಖಲಾಗಿದೆ. ಅದೇ ರೀತಿ ಗಣಿ ಮತ್ತು ಭೂ ವಿಜ್ಞಾನ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಎಸ್ಸಿ-ಎಸ್ಟಿ ಜನಾಂಗದವರಿಗೆ ಅವಮಾನ ಆಗುವಂತೆ ಸಾಮಾಜಿಕ ಜಾಲತಾಣದಲ್ಲಿ ಹಾಗೂ ಮಾಧ್ಯಮಗಳಲ್ಲಿ ವರದಿ ಆಗಿದೆ. ಈ ಹಿನ್ನೆಲೆ ಸಚಿವ ಮಲ್ಲಿಕಾರ್ಜುನ ವಿರುದ್ದ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣಧಿಕಾರಿಗಳ ಮೂಲಕ ಪ್ರಕರಣ ದಾಖಲಿಸುವಂತೆ ಮನವಿ ಮಾಡಿದ್ದಾರೆ.

ಅದಲ್ಲದೇ, ರಾಜ್ಯ ಪಾಲರಿಗೆ, ಸಮಾಜ ಕಲ್ಯಾಣ ಇಲಾಖೆಯ ಸಚಿವ ಎಚ್.ಸಿ ಮಹದೇವಪ್ಪ ಅವರಿಗೆ, ರಾಜ್ಯದ ಮುಖ್ಯಮಂತ್ರಿಗಳಿಗೆ, ಗೃಹ ಸಚಿವರಿಗೆ, ಸಮಾಜ ಕಲ್ಯಾಣ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ, ಬೆಂಗಳೂರಿನ ಜಾರಿ ನಿರ್ದೇಶನಾಲಯದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರಿಗೆ ಕ್ರಮವಹಿಸಲು ಈ ಪತ್ರದ ಪ್ರತಿ ರವಾನಿಸುವಂತೆ ಮುಖಂಡ ಮಹೇಶ್ ಕೋರಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT